ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವಿನ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಮಾದಕ ವಸ್ತು ನಿಯಂತ್ರಣ ಇಲಾಖೆ ಕ್ರಿಮಿನಲ್ ಕೇಸ್ ದಾಖಲಿಸಿದೆ. ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವರ್ತಿ ಸದ್ಯ ಸಿಬಿಐ ತನಿಖೆ ಎದುರಿಸುತ್ತಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ಸಿಬಿಐ ಅಧಿಕಾರಿಗಳಿಂದ ತೀವ್ರ ವಿಚಾರಣೆಗೆ ಒಳಗಾಗುತ್ತಿದ್ದು, ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಈ ನಡುವೆ ರಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಡ್ರಗ್ಸ್ ಮಾಫಿಯಾದ ನಂಟು ಸುತ್ತಿಕೊಂಡಿದೆ. ಇಡಿ […]
ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ: ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಆಯುಕ್ತರಾಗಿದ್ದ ಅಶೋಕ್ ಲಾವಾಸ ಅವರಿಂದ ತೆರವಾದ ಸ್ಥಾನದಲ್ಲಿ ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಲಾವಾಸ ಅವರು ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜೀವ್ 1984ನೇ ಬ್ಯಾಚ್ ನ ಜಾರ್ಖಂಡ್ ಕೇಡರ್ ಅಧಿಕಾರಿಯಾಗಿದ್ದು, ಇವರ ಅಧಿಕಾರಾವಧಿ 2025ರವರೆಗೂ ಇರಲಿದೆ. ಆದ್ದರಿಂದ 2024ನೇ ಸಾಲಿನ ಲೋಕಸಭೆ ಚುನಾವಣೆ ಇವರ ಅವಧಿಯಲ್ಲೇ ನಡೆಯಲಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರು ಭಾರತದ 13ನೇ ರಾಷ್ಟ್ರಪತಿ, ದೇಶದ ಆರ್ಥಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಎರಡು ವರ್ಷ ಹಿಂದೆ ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕಾರಿಸಲಾಗಿತ್ತು. ದೆಹಲಿಯ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಯಲ್ಲಿ ಮೆದುಳು ಶಸ್ತ್ರಚಿಕಿತ್ಸೆ ಒಳಗಾಗಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ […]
ಕೇಂದ್ರದಿಂದ ಅನ್ ಲಾಕ್4.0 ಘೋಷಣೆ:ಯಾವುದಕ್ಕೆಲ್ಲಾ ಅನುಮತಿ?
ನವದೆಹಲಿ: ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಸೆಪ್ಟೆಂಬರ್ 1ರಿಂದ ಈ ನಿಯಮ ಜಾರಿಗೊಳ್ಳಲಿದೆ, ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಹಂತ ಹಂತವಾಗಿ ಬೆಂಗಳೂರು ಸೇರಿದಂತೆ ಹಲವು ಕಡೆ ಮೆಟ್ರೋ ಸಂಚಾರ ಆರಂಭವಾಗಲಿದೆ. ಇದರ ಜತೆಗೆ ಸಿನಿಮಾ ಹಾಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯುವುದೂ ಸೇರಿದಂತೆ ಅನೇಕ ಸಡಿಲಿಕೆ ನೀಡಿ ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ.ಇನ್ನು ಸೆಪ್ಟೆಂಬರ್ 30ರವರೆಗೆ ಶಾಲಾ, ಕಾಲೇಜುಗಳನ್ನು […]
ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಮೃತದೇಹವನ್ನು ಆಸ್ಪತ್ರೆಗೆ ಕರೆತಂದ ವೇಳೆ ಸುಶಾಂತ್ ಸಿಂಗ್ ಒಂದು ಕಾಲು ಮುರಿದಿತ್ತು.?

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಸುಶಾಂತ್ ಸಿಂಗ್ ಮೃತದೇಹವನ್ನು ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಅವರ ಒಂದು ಕಾಲು ಮುರಿದಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮುಂಬೈನ ಕೂಪರ್ ಆಸ್ಪತ್ರೆಗೆ ಸುಶಾಂತ್ ಸಿಂಗ್ ಮೃತದೇಹ ಕರೆತಂದ ವೇಳೆ ಅವರ ಒಂದು ಕಾಲು ಮುರಿದಿತ್ತು. ಶವ ಪರಿಶೀಲಿಸಿದ್ದ ಹಿರಿಯ ವೈದ್ಯರು ದೇಹದಲ್ಲಿರುವ ಗಾಯದ ಗುರುತುಗಳನ್ನು ನೋಡಿ ಇದು ಕೊಲೆ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಪೊಲೀಸರು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]