ಕೊರೊನಾದ ಹುಟ್ಟೂರು ಚೀನಾದ ವುಹಾನ್ ನಲ್ಲಿ ಸೆ. 1ರಿಂದ ಶಾಲೆಗಳು ಆರಂಭ

ವುಹಾನ್: ಕೊರೊನಾದ ಹುಟ್ಟೂರು ಚೀನಾ ದೇಶದ ವುಹಾನ್ ನಗರದಲ್ಲಿ ಸೆ. 1ರಿಂದ ಶಾಲೆಗಳು ಆರಂಭವಾಗಲಿದೆ. ನಗರದ 2,842 ಶಾಲೆಗಳು ಏಕಕಾಲದಲ್ಲಿ ಪುನರಾರಂಭಗೊಳ್ಳಲಿದೆ. ಶಾಲೆಗಳನ್ನು ಆರಂಭಿಸುವಂತೆ ಅಲ್ಲಿನ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸೆ. 1ರಿಂದ 1.4 ಮಿಲಿಯನ್ ವಿದ್ಯಾರ್ಥಿಗಳು ಶಾಲೆಗೆ ಬರಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸುಶಾಂತ್ ಸಿಂಗ್ ಸಾವಿನ ಕುರಿತು ಸುದ್ದಿ ವಾಹಿನಿಗಳ ತನಿಖೆಗೆ ತಡೆ ಕೋರಿ ಮುಂಬೈ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿ ವಾಹಿನಿಗಳು ತನಿಖೆ ನಡೆಸುವುದನ್ನು ನಿಲ್ಲಿಸಬೇಕೆಂದು ಮುಂಬೈ ಹೈಕೋರ್ಟ್ ನಲ್ಲಿ ಖಾಸಗಿ ದೂರು‌ ದಾಖಲಾಗಿದೆ. ನೀಲೇಶ್  ನಲ್ವಾಕಾ ಮತ್ತು ಇಬ್ಬರು ವ್ಯಕ್ತಿಗಳು ಬುಧವಾರ ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಯಬೇಕಿದೆ. ಸುದ್ದಿವಾಹಿನಿಗಳು ಸುಶಾಂತ್ ಪ್ರಕರಣದ ಬಗ್ಗೆ ಸುದ್ದಿ ಪ್ರಸಾರ ಮತ್ತು ತನಿಖೆ ಬಗ್ಗೆ ಸುದ್ದಿ ಮಾಡುವುದಕ್ಕೆ ಮಿತಿ ಇರಬೇಕು. ಸುದ್ದಿವಾಹಿನಿಗಳ ಈ ರೀತಿಯ ವಿಚಾರಣೆಯು ಸಿಬಿಐ ತನಿಖೆ ಮೇಲೆ ಪರಿಣಾಮ […]

ಸೆಪ್ಟೆಂಬರ್ 30ರೊಳಗೆ ಅಂತಿಮ ಪದವಿ ಪರೀಕ್ಷೆ ನಡೆಸಿ; ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಪದವಿ ಕಾಲೇಜು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ರಾಜ್ಯ ಸರ್ಕಾರಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿಯಲ್ಲಿ ಪರೀಕ್ಷೆಗಳನ್ನು ಮುಂದೂಡುವ ಅಥವಾ ಪರೀಕ್ಷೆ ನಡೆಸುವುದಕ್ಕಾಗಿ ದಿನಾಂಕ ನಿಗದಿಪಡಿಸಲು ರಾಜ್ಯ ಸರ್ಕಾರಗಳು ಯುಜಿಸಿಯನ್ನು ಸಂಪರ್ಕಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಗಳನ್ನು ಜುಲೈ 6ರಂದು ನಡೆಸಬೇಕೆಂಬ ವಿಶ್ವವಿದ್ಯಾಲಯ ಅನುದಾನ ಆಯೋಗದ(ಯುಜಿಸಿ) ಅಧಿಸೂಚನೆಯನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್ 30ರೊಳಗೆ ಅಂತಿಮ […]

ಕೇರಳಕ್ಕೆ ಪಡಿತರ ಅಕ್ಕಿ ಸಾಗಿಸುತ್ತಿದ್ದ ಐವರು ಚೋರರ ಬಂಧನ: 55 ಟನ್ ಅಕ್ಕಿ‌ ವಶ

ಉಡುಪಿ: ಕೇರಳಕ್ಕೆ ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಐವರು ಚೋರರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ ಹಾಗೂ ನಿಯಾಸ್ ಎಂದು ಗುರುತಿಸಲಾಗಿದೆ. ಬಂಧಿತರು ಕುಂದಾಪುರ ಮೂಡು ಗೋಪಾಡಿ ಮತ್ತು ಕೇರಳ ಮೂಲದವರೆಂದು ತಿಳಿದುಬಂದಿದೆ. ಮಿಂಚಿನ ಕಾರ್ಯಾಚರಣೆ ನಡೆಸಿದ ಡಿಸಿಐಬಿ ಪೊಲೀಸರು, ಆರೋಪಿಗಳು ಕುಂದಾಪುರ ತಾಲೂಕಿನ ಕೋಟೇಶ್ವರದ ಅಕ್ರಮ ಅಕ್ಕಿ ದಾಸ್ತಾನು ಗೋಡಾನ್ ನಲ್ಲಿ ಸಂಗ್ರಹಿಸಿ ಇಟ್ಟಿದ್ದ 55 ಟನ್ ಕಿಲೋ ಅಕ್ಕಿಯನ್ನು ವಶಕ್ಕೆ […]

ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸಾಕಷ್ಟು ಸುಧಾರಿಸಿದೆ: ಪುತ್ರ ಚರಣ್‌ ಮಾಹಿತಿ

ಚೆನ್ನೈ: ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡಿದೆ. ಅವರು ನಿನ್ನೆಗಿಂತಲೂ ಇಂದು ವೈದ್ಯರ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ’ ಎಂದು ಎಸ್‌ಪಿಬಿ ಪುತ್ರ ಎಸ್‌.ಪಿ. ಚರಣ್‌ ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ. ಆಗಸ್ಟ್‌ 5ರಂದು ಕೋವಿಡ್‌ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎಸ್‌ಪಿಬಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಕೋವಿಡ್ ವರದಿ ಕೂಡ ನೆಗೆಟಿವ್ ಬಂದಿತ್ತು.