ಕರ್ನಾಟಕದ ಸಿಂಗಂ ಖ್ಯಾತಿಯ ಕೆ. ಅಣ್ಣಾಮಲೈ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಿಗ್ಗೆ 11ಗಂಟೆಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 2019 ರ ಮೇ ತಿಂಗಳಲ್ಲಿ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿಹಬ್ಬಿತ್ತು. ಅಲ್ಲದೆ ಹೊಸ ಪಕ್ಷ ಕಟ್ಟುತ್ತಾರೆ ಎಂಬ ಸುದ್ದಿಯು ಕೇಳಿಬಂದಿತ್ತು. ಈಗ ಅವರು ಅಧಿಕೃತವಾಗಿ ಬಿಜೆಪಿ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಮುಂಬರುವ […]
ಗಾಯಕ ಎಸ್ ಪಿಬಿಗೆ ಕೊರೊನಾ ನೆಗೆಟಿವ್; ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಚೆನ್ನೈ: ಇಲ್ಲಿನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ನಮ್ಮ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಈಗ ಅವರು ಆರಾಮದಿಂದ ಇದ್ದಾರೆ ಎಂದು ಎಸ್‌ಪಿಬಿ ಪುತ್ರ ಚರಣ್ ಹೇಳಿರುವುದಾಗಿ ಪಿಆರ್‌ಒ ನಿಖಿಲ್ ಮುರುಗನ್ ತಿಳಿಸಿದ್ದಾರೆ. ಎಸ್‌ಪಿಬಿ ಅವರು ಈಗಲೂ ಐಸಿಯುನಲ್ಲಿ ವೆಂಟಿಲೇಟರ್ ಮತ್ತು ಇಸಿಎಂಒ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವಿಲುಗಳಿಗೆ ಆಹಾರ ನೀಡಿದ ಪ್ರಧಾನಿ ಮೋದಿ: ಭಾರೀ ವೈರಲ್ ಆದ ವೀಡಿಯೋ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ನವಿಲುಗಳಿಗೆ ಆಹಾರ ನೀಡಿದ ವಿಡಿಯೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಭಾನುವಾರ ಬೆಳಗ್ಗೆ ಪ್ರಧಾನಿ ಮೋದಿ ಅವರು ಎಂದಿನಂತೆ ವ್ಯಾಯಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ವಿಡಿಯೋವನ್ನು ಚಿತ್ರಿಕರಿಸಲಾಗಿದೆ. ಪ್ರಧಾನಿ ಮೋದಿ ನಿವಾಸದಲ್ಲಿ ವಿವಿಧ ಪಕ್ಷಿಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದಲ್ಲದೇ ಅಪಾರ ಜನಮೆಚ್ಚುಗೆ ಪಡೆದಿದೆ. ಸಮಾಜಿಕ ಜಾಲಾತಾಣದಲ್ಲಿ ನವಿಲುಗಳಿಗೆ ಆಹಾರ ನೀಡುವ ವಿಡಿಯೋ ಪೋಸ್ಟ್ ಮಾಡಲಾಗಿದ್ದು ‘ಅಮೂಲ್ಯ ಕ್ಷಣಗಳು’ […]
ಗಾಂಧಿ ಪರಿವಾರದ ಹೊರಗಿನವರಿಗೆ ಕಾಂಗ್ರೆಸ್ ನಾಯಕತ್ವ: ನಾಳೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ. ಈ ನಡುವೆ ಕಾಂಗ್ರೆಸ್‌ನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಕ್ಷದ 23 ನಾಯಕರು ಪತ್ರ ಬರೆದು ನಾಯಕತ್ವದ ಬಿಕ್ಕಟ್ಟು ಹಾಗೂ ಆಂತರಿಕ ಚುನಾವಣೆಗೆ ಆಗ್ರಹಿಸಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಮನೀಶ್ ತಿವಾರಿ, ಮಿಲಿಂದ್ ದೇವ್ರಾ, ಜಿತಿನ್ ಪ್ರಸಾದ್ ಸೇರಿದಂತೆ 23 ನಾಯಕರು ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತಂತೆ […]