ಮೀನುಗಾರಿಕೆ ಸಚಿವ ಕೋಟರಿಂದ ನವದೆಹಲಿ ಭೇಟಿ: ಮೀನುಗಾರಿಕೆ, ಬಂದರು ಯೋಜನೆಗಳ ಕುರಿತು ಕೇಂದ್ರ ಕೃಷಿ ಸಚಿವರ ಜತೆ ಚರ್ಚೆ

ನವದೆಹಲಿ: ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತಂತೆ ಚರ್ಚೆ ನಡೆಸಿದರು. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ, ಕಾರವಾರದ ಮಾವಾಳಿ ಹಾಗೂ ಮಂಗಳೂರಿನ ಬೈಕಂಪಾಡಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು. ರಾಜ್ಯ ಕರಾವಳಿಯ 8 ಮೀನುಗಾರಿಕಾ ಹಾರ್ಬರ್ ಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕಾ ಇಳಿದುದಾಣಗಳ ಉನ್ನತೀಕರಣ […]
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮಾಂತ್ರಿಕ ಪಂಡಿತ್ ಜಸ್‌ರಾಜ್ ನಿಧನ

ನವದೆಹಲಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮಾಂತ್ರಿಕ ಪಂಡಿತ್ ಜಸ್‌ರಾಜ್ (90) ಇಂದು ನ್ಯೂಜೆರ್ಸಿಯಲ್ಲಿ ನಿಧನರಾಗಿದ್ದಾರೆ. ಅವರು 80 ವರ್ಷಗಳಿಗಿಂತಲೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಅಪಾರ ಕೊಡುಗೆ ನೀಡಿದ್ದಾರೆ. ಮಹಾನ್ ಗಾಯಕ ಜಸ್‌ರಾಜ್ ಪದ್ಮಶ್ರೀ , ಪದ್ಮಭೂಷಣ್ ಮತ್ತು ಪದ್ಮವಿಭೂಷಣ್ ಪ್ರಶಸ್ತಿಗೆ ಭಾಜನರಾಗಿದ್ದರು. ಜಸ್‌ರಾಜ್ ಅವರು 1930ರ ಜನವರಿ 28ರಂದು ಹರ್ಯಾಣದಲ್ಲಿ ಜನಿಸಿದ್ದರು. ಶಾಸ್ತ್ರೀಯ ಮತ್ತು ಸೆಮಿ ಕ್ಲಾಸಿಕಲ್ ಸಂಗೀತದಲ್ಲಿ ಮೇರು ಗಾಯಕರಾಗಿದ್ದರು. ಭಾರತ , ಕೆನಡಾ ಮತ್ತು ಅಮೆರಿಕಾದಲ್ಲಿ ಸಂಗೀತ ಪಾಠ […]
ಪೋಷಕರು ಮೊಬೈಲ್ ನಲ್ಲಿ ಪಬ್ಜಿ ಗೇಮ್ ಆಡಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಮೊಬೈಲ್ ನಲ್ಲಿ ಪಬ್ಜಿ ಗೇಮ್ ಆಡಬೇಡ ಎಂದಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ತಿರುಮಲನಗರದಲ್ಲಿ ನಡೆದಿದೆ. ಆನ್ ಲೈನ್ ತರಗತಿ ಹಿನ್ನೆಲೆಯಲ್ಲಿ ಪೋಷಕರು 9ನೇ ತರಗತಿಯ ಮಗನಿಗೆ ಮೊಬೈಲ್ ಕೊಡಿಸಿದ್ದರು. ಆದರೆ ಆತ ದಿನವಿಡೀ ಮೊಬೈಲ್ ನಲ್ಲಿ ಪಬ್ಜಿ ಗೇಮ್ ಆಡುತ್ತಿದ್ದನು. ಇದನ್ನು ಪ್ರಶ್ನಿಸಿ ತಾಯಿ ಬುದ್ಧಿವಾದ ಹೇಳಿದಕ್ಕೆ ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಕ್ರಿಕೆಟಿಗ ಸುರೇಶ್ ರೈನಾರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ಮುಂಬೈ: ಎಂ.ಎಸ್. ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಇನ್ನೊಬ್ಬ ಭಾರತೀಯ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್. ಧೋನಿ ವಿದಾಯ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್. ಧೋನಿ ವಿದಾಯ ಘೋಷಿಸಿದ್ದಾರೆ. ಆ ಮೂಲಕ 16 ವರ್ಷದ ಕ್ರಿಕೆಟ್ ಬದುಕಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಧೋನಿ 2004 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಈವರೆಗೆ 350 ಏಕದಿನ ಪಂದ್ಯ, 90 ಟೆಸ್ಟ್ ಪಂದ್ಯ, 98 ಟಿ ಟ್ವೆಂಟಿ ಪಂದ್ಯ ಆಡಿದ್ದಾರೆ. ಅವರು ನಾಯಕನಾಗಿ 2007ರಲ್ಲಿ ಚೊಂಚಲ ಟಿ ಟ್ವೆಂಟಿ ವಿಶ್ವಕಪ್, 2011ರ ವಿಶ್ವಕಪ್ ಹಾಗೂ 2013ರಲ್ಲಿ ಚಾಂಪಿಯನ್ ಟ್ರೋಫಿಯನ್ನು ಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. 2019ರ ವಿಶ್ವಕಪ್ ನಂತರ […]