74ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಪ್ರಧಾನಿಯ ಭಾಷಣದ ಮುಖ್ಯಾಂಶಗಳು

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಇಂದು ನಡೆದ ದೇಶದ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಭಾಷಣದ ಮುಖಾಂಶಗಳು ಈ ಕೆಳಗಿನಂತಿದೆ: * ಭಾರತ ಯುವ ಶಕ್ತಿಯಿಂದ ತುಂಬಿದ ದೇಶ, ‘ಆತ್ಮ ನಿರ್ಭರ’ಕ್ಕೆ ಆತ್ಮವಿಶ್ವಾಸ ಹೊಂದಿರುವ ದೇಶ ಭಾರತ. *ಆತ್ಮ ನಿರ್ಭರ ಭಾರತ’ ಕನಸನ್ನು ಭಾರತ ಸಾಕಾರಗೊಳಿಸುತ್ತದೆ ಎಂಬ ವಿಶ್ವಾಸ ನನಗಿದೆ. ಭಾರತೀಯರ ಸಾಮರ್ಥ್ಯ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ *ಕೃಷಿ ಕ್ಷೇತ್ರದಲ್ಲಿ ನಾವು ‘ಆತ್ಮ […]
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ: ಚಿಕಿತ್ಸೆ ಮುಂದುವರಿಕೆ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ. ಅವರಿಗೆ ವೆಂಟಿಲೇಟರ್ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯ ವೈದ್ಯರು ಶನಿವಾರ ತಿಳಿಸಿದ್ದಾರೆ. ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಚಿಕಿತ್ಸೆ ಮುಂದುವರಿಸಲಾಗಿದೆ. ತಜ್ಞರ ತಂಡವು ನಿಯಮಿತವಾಗಿ ಅವರ ಮೇಲ್ವಿಚಾರಣೆ ನಡೆಸುತ್ತಿದೆ’ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ.
ಭಾರತದಲ್ಲಿ ಶೀಘ್ರವೇ ಕೊರೊನಾ ಲಸಿಕೆ ಉತ್ಪಾದನೆ: ಮೂರು ಔಷಧಿ ಪ್ರಾಯೋಗಿಕ ಹಂತದಲ್ಲಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತದಲ್ಲಿ ಶೀಘ್ರವೇ ಕೊರೊನಾ ಲಸಿಕೆ ಕಂಡುಹಿಡಿಯುವುದರ ಜತೆಗೆ ಭಾರೀ ಪ್ರಮಾಣದಲ್ಲಿ ಔಷಧಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯ ಕೆಂಪು ಕೋಟೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ವಿಜ್ಞಾನಿಗಳು ಕೊರೊನಾ ಲಸಿಕೆಯ ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಭಾರತದಲ್ಲಿ ಮೂರು ಕೊರೊನಾ ಔಷಧಿ ಪ್ರಾಯೋಗಿಕ ಹಂತದಲ್ಲಿದೆ. ಆದಷ್ಟು ಬೇಗ ಜನರಿಗೆ ಔಷಧಿ ತಲುಪಿಸಲು ಪ್ರಯತ್ನ ಮಾಡಲಾಗುವುದು ಎಂದರು. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ಅಭಿವೃದ್ಧಿ […]
ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ: ಶೀಘ್ರ ಚೇತರಿಕೆಗೆ ಅಭಿಮಾನಿಗಳ ಪ್ರಾರ್ಥನೆ

ಚೆನ್ನೈ: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಗೆ ಕೊರೋನಾ ಭಾಧಿಸಿದ್ದು , ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವ ಹಿನ್ನಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ. ಆಗಸ್ಟ್ 5ರಿಂದ 74 ವರ್ಷದ ಎಸ್‍ಪಿಬಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಅವರು ಆರೋಗ್ಯ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಲೈಫ್ ಸಪೋರ್ಟ್ ಅಳವಡಿಸಲಾಗಿದೆ. ಈ ಹಿಂದೆ ವಿಡಿಯೋ ಮಾಡಿ ನನ್ನ ಕುಟುಂಬದ ಹಿತದೃಷ್ಟಿಯಿಂದ ನಾನು ಸ್ವಯಂ ಆಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯೊಂದಿಗೆ ವಿಶ್ರಾಂತಿ […]
ರಷ್ಯಾದಲ್ಲಿ ವಿಶ್ವದ ಮೊದಲ ಕೊರೊನಾ ಲಸಿಕೆ ನೋಂದಣಿ: ಅಧ್ಯಕ್ಷ ಪುಟಿನ್ ಘೋಷಣೆ

ರಷ್ಯಾ: ರಷ್ಯಾದಲ್ಲಿ ವಿಶ್ವದ ಮೊದಲ ಕೊರೊನಾ ಲಸಿಕೆ ನೋಂದಣಿಯಾಗಿದ್ದು, ಇದಕ್ಕೆ ಆರೋಗ್ಯ ಇಲಾಖೆಯ ಅನುಮೋದನೆಯೂ ಸಿಕ್ಕಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಣೆ ಮಾಡಿದ್ದಾರೆ. ರಷ್ಯಾದ ಗಮಲೆ ಸಂಶೋಧನಾ ಸಂಸ್ಥೆ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಸತತ ಎರಡು ತಿಂಗಳ ಪ್ರಯೋಗದ ಬಳಿಕ ಲಸಿಕೆಯನ್ನು ಸಂಶೋಧಿಸಿದೆ. ರಷ್ಯಾ ಅಧ್ಯಕ್ಷ ಪುಟಿನ್ ಮಗಳಿಗೆ ಮೊದಲ ಲಸಿಕೆ ನೀಡಲಾಗಿದೆ. ಆದರೆ ಇನ್ನೂ ಕೂಡ ಲಸಿಕೆ ಮೂರನೇ ಹಂತದ ಪ್ರಯೋಗದಲ್ಲಿದೆ. ಅಕ್ಟೋಬರ್ ನಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ರಷ್ಯಾ ಲಸಿಕೆಗೆ ಆಕ್ಷೇಪ: […]