ರಾಜಸ್ತಾನ ಕಾಂಗ್ರೆಸ್ ಬಿಕ್ಕಟ್ಟು ಶಮನ: ಕಾಂಗ್ರೆಸ್ ನಲ್ಲೇ ಮುಂದುವರಿಯಲು ಸಚಿನ್ ಪೈಲಟ್ ನಿರ್ಧಾರ

ನವದೆಹಲಿ: ರಾಜಸ್ತಾನ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟು ಬಹುತೇಕ ಬಗೆಹರಿದ್ದು, ಇಂದು ಸೋನಿಯಾ ಗಾಂಧಿ ನಿವಾಸದಲ್ಲಿ ಸಚಿನ್ ಪೈಲಟ್ ಹಾಗೂ ಬಂಡಾಯ ಶಾಸಕರ ಜತೆ ನಡೆದ ಸಂದಾನ ಸಭೆ ಯಶಸ್ವಿಯಾಗಿದೆ. ಆ ಮೂಲಕ ರಾಜಸ್ತಾನ ಕಾಂಗ್ರೆಸ್ ನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಿದೆ. ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ್ದ ಸಚಿನ್ ಪೈಲಟ್ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜತೆಗೆ ಚರ್ಚೆ […]
ಲಘು ಯುದ್ಧ ಹೆಲಿಕಾಪ್ಟರ್, ಬಂದೂಕು ಸೇರಿದಂತೆ 101 ರಕ್ಷಣಾ ಉಪಕರಣಗಳ ಆಮದಿನ ಮೇಲೆ ನಿರ್ಬಂಧ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮ ನಿರ್ಭರ ಭಾರತ’ ಕರೆಯಿಂದ ಪ್ರೇರಣೆಗೊಂಡು ಮತ್ತು ರಕ್ಷಣಾ ಉಪಕರಣಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಬಂದೂಕು, ರೇಡಾರ್, ಲಘು ಯುದ್ಧ ಹೆಲಿಕಾಪ್ಟರ್‌ಗಳು ಸೇರಿದಂತೆ 101 ರಕ್ಷಣಾ ಉಪಕರಣಗಳ ಆಮದಿನ ಮೇಲೆ ನಿರ್ಬಂಧ ಹೇರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಅವರು ಇಂದು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ರಕ್ಷಣಾ ಉಪಕರಣಗಳ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಹಾಗೂ ರಕ್ಷಣಾ ಉಪಕರಣಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ […]
ಕೃಷಿಕರಿಗೆ ಆರ್ಥಿಕ ನೆರವು ಒದಗಿಸಲು 1 ಲಕ್ಷ ಕೋಟಿ ರೂ.ಗಳ ಯೋಜನೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಹಣಕಾಸು ನೆರವು ಒದಗಿಸುವ ನಿಟ್ಟಿನಲ್ಲಿ ಕೃಷಿ ಮೂಲಸೌಕರ್ಯ ನಿಧಿಯಡಿ 1 ಲಕ್ಷ ಕೋಟಿ ರೂಪಾಯಿಗಳ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಬಗ್ಗೆ ಭಾನುವಾರ ಟ್ವೀಟರ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ. ಪಿಎಂ-ಕಿಸಾನ್ ಯೋಜನೆಯಡಿ 17,000 ಕೋಟಿ ರೂ. ನೆರವು ಯೋಜನೆಯ ಆರನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ಇದರಿಂದ ಒಟ್ಟು 8.5 ಕೋಟಿ ರೈತರಿಗೆ ನೆರವಾಗಲಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಈ ಯೋಜನೆ ಕೃಷಿಕರಿಗೆ ಬಹಳ […]
ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಪತನ: ಪೈಲಟ್ ಸಹಿತ ಮೂವರ ದುರ್ಮರಣ

ಕಲ್ಲಿಕೋಟೆ: ದುಬೈನಿಂದ ಕೇರಳದ ಕ್ಯಾಲಿಕಟ್ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಕಲ್ಲಿಕೋಟೆಯ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದ್ದು, ಪೈಲಟ್ ಮೃತಪಟ್ಟಿದ್ದಾನೆ. ಹಲವಾರು ಮಂದಿಗೆ ಗಾಯ ಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಲ್ಯಾಡಿಂಗ್ ವೇಳೆ ರನ್ ವೇ ಯಲ್ಲಿ ಜಾರಿದ ಪರಿಣಾಮ ದುರ್ಘಟನೆ ನಡೆದಿದೆ. ವಿಮಾನ ತುಂಡಾಗಿ ಎರಡು ಭಾಗವಾಗಿದೆ. ವಿಮಾನದಲ್ಲಿ 174 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಆರು ಮಂದಿ ಸಿಬ್ಬಂದಿ ಇದ್ದರು ಎನ್ನಲಾಗಿದೆ.
ಶ್ರೀಲಂಕಾ ಸಂಸತ್ ಚುನಾವಣೆ: ಮತ್ತೆ ಅಧಿಕಾರದ ಗದ್ದುಗೆ ಹಿಡಿದ ರಾಜಪಕ್ಸೆ

ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸತ್ ನ 225 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪ್ರಧಾನಿ ಮಹಿಂದ ರಾಜಪಕ್ಸೆ ಅವರ ಪಕ್ಷ ಎಸ್‌ಎಲ್‌ಪಿಪಿ 146 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದಿದೆ. ಕೊರೊನಾ ಕಾರಣದಿಂದಾಗಿ ಚುನಾವಣೆಯನ್ನು ಎರಡು ಸಲ ಮುಂದೂಡಲಾಗಿತ್ತು. ಆಗಸ್ಟ್ 5 ರಂದು ಸಂಸತ್ ಚುನಾವಣೆ ನಡೆದಿತ್ತು. ರಾಜಪಕ್ಸೆಯವರ ಎಸ್‌ಎಲ್‌ಪಿಪಿ ಪಕ್ಷ 146 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷವಾಗಿರುವ ಸಜಿತ್ ಪ್ರೇಮದಾಸ ಅವರ ಪಕ್ಷ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್‌ಪಿ) […]