ರಾಮ ಜನ್ಮಭೂಮಿ ಚಳುವಳಿಗಾಗಿ ಸರ್ವಸ್ವ ತ್ಯಾಗ ಮಾಡಿದ ಮಹನೀಯರಿಗೆ ಕೋಟಿ ನಮನ: ಪ್ರಧಾನಿ ಮೋದಿ

ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀ ರಾಮಂದಿರದ ಶಿಲಾನ್ಯಾಸ ನೆರವೇರಿಸಿ‌ ಮಾತನಾಡಿದ ಪ್ರಧಾನಿ ಮೋದಿ, ರಾಮ ಜನ್ಮಭೂಮಿ ಚಳುವಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರಿಗೆ ಕೋಟಿ ಕೋಟಿ ನಮನಗಳನ್ನು ಸಲ್ಲಿಸಿದರು. ವಿಶ್ವದಾದ್ಯಂತ ಇಂದು ಶ್ರೀರಾಮನ ಘೋಷವಾಕ್ಯ ಕೇಳಿಬರುತ್ತಿದೆ. ಸರಯೂ ನದಿಯಲ್ಲಿ ತೀರದಲ್ಲಿ ಸುವರ್ಣ ಅಧ್ಯಾಯ ಆರಂಭವಾಗಿದೆ. ಭಾರತ ಇಂದು ದೇವರ ಸನ್ನಿಧಿಯಲ್ಲಿದೆ ಎಂದರು. ತಮ್ಮ ಭಾಷಣದುದ್ದಕ್ಕೂ ಪ್ರಭು ಶ್ರೀರಾಮನ ಸಂದೇಶಗಳನ್ನು ಸಂಸ್ಕೃತದಲ್ಲಿ ಪಠಿಸಿದ ಪ್ರಧಾನಿ ಮೋದಿ, ಅಯೋಧ್ಯೆಯ ರಾಮಜನ್ಮಭೂಮಿ ಇವತ್ತು ಮುಕ್ತವಾಗಿದೆ. ಇಡೀ ದೇಶವೇ ಇಂದು ರೋಮಾಂಚನ ಗೊಂಡಿದೆ. ರಾಮಮಂದಿರ […]

ಅಯೋಧ್ಯೆ: ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅವರಿಂದ ಭೂಮಿಪೂಜೆ

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಶಂಕುಸ್ಥಾಪನೆಗೆ ನಂದಾ, ಜಯಾ, ರಿಕ್ಷಾ, ಭದ್ರಾ ಹಾಗೂ ಪೂರ್ಣಾ ಎಂಬ 22.6 ಕೆ.ಜಿ. ತೂಕದ ಐದು ಇಟ್ಟಿಗೆಗಳನ್ನು ಬಳಸಲಾಯಿತು. ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ಧಾರ್ಮಿಕ ವಿಧಿವಿಧಾನಗಳ ಮೂಲಕ ಪೂಜಿಸಲಾಯಿತು. ಪ್ರಧಾನಿ ಮೋದಿ ಅವರು ಭೂಮಿಗೆ ಆರತಿ ಮಾಡಿದರು. ಭೂಮಿಯಿಂದ ಮಣ್ಣನ್ನು ತೆಗೆದು ಹಣೆಗೆ ಹಚ್ಚಿ ನಮಸ್ಕರಿಸಿದರು. ಭೂಮಿಪೂಜೆಗೆ ನಿಗದಿಪಡಿಸಿದ್ದ ಸ್ಥಳಕ್ಕೆ ಪ್ರದಕ್ಷಿಣೆ ಮಾಡಿದರು. ವಿದ್ವಾಂಸರ ವೇದಮಂತ್ರ […]

ರಾಮಮಂದಿರ ನಿರ್ಮಾಣದ ಭೂಮಿಪೂಜೆಗೆ ಸಕಲ ಸಿದ್ಧತೆ: ಕಣ್ಮನ ಸೆಳೆಯತ್ತಿದೆ ಅಯೋದ್ಯೆ

ನವದೆಹಲಿ: ಬುಧವಾರ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯಲಿದ್ದು, ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಸಕಲ ಸಿದ್ದತೆ ಪೂರ್ಣಗೊಂಡಿದೆ. ರಾಮಮಂದಿರ ಸಂಪರ್ಕಿಸುವ ಅಯೋಧ್ಯೆಯ ಎಲ್ಲ ಪ್ರಮುಖ ರಸ್ತೆಗಳ ಬದಿಯ ಕಟ್ಟಡ, ಸೇತುವೆಯ ಕಂಬಗಳು ವಿವಿಧ ಬಣ್ಣಗಳಿಂದ ಸಿಂಗಾರಗೊಂಡಿದೆ. ವಾರಾಣಸಿಯಿಂದ ಕರೆಸಿಕೊಳ್ಳಲಾಗಿರುವ 21 ಪುರೋಹಿತರಿಂದ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆಯುತ್ತಿದೆ. ಅಯೋಧ್ಯೆಯ ಎಲ್ಲ ಪ್ರಮುಖ ದೇವಾಲಯಗಳಿಗೆ ದೀಪಾಲಂಕಾರ ಮಾಡಲಾಗಿದೆ. ವಿಶೇಷ ಉಡುಪಿನ ಸಿಂಗಾರ: ರಾಮಲಲ್ಲಾನಿಗೆ ನವರತ್ನಗಳಿಂದ ವಿಶೇಷವಾಗಿ ನಾಲ್ಕು ಉಡುಪಗಳನ್ನು ತಯಾರಿಸಲಾಗಿದ್ದು, ಅವುಗಳನ್ನು ತಾತ್ಕಾಲಿಕ ರಾಮಮಂದಿರದ ಅರ್ಚಕರಿಗೆ ಹಸ್ತಾಂತರಿಸಲಾಗಿದೆ. ಸೋಮವಾರ ಬಿಳಿ, ಮಂಗಳವಾರ ಕೆಂಪು, […]

ಆಗಸ್ಟ್‌ 5ರಂದು ರಾಮಮಂದಿರಕ್ಕೆ ಭೂಮಿಪೂಜೆ ಹಿನ್ನೆಲೆ: ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭ

ಅಯೋಧ್ಯೆ: ಆಗಸ್ಟ್ 5ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿದೆ. ರಾಮ್ ಲಲ್ಲಾ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ರಾಮ್ ಲಲ್ಲಾ ಮೂರ್ತಿಗೆ ವಿವಿಧ ಬಣ್ಣದ ಬಟ್ಟೆಯ ಅಲಂಕಾರ ಮಾಡಲಾಗುತ್ತಿದೆ. ಪ್ರತಿದಿನ ಒಂದೊಂದು ಬಟ್ಟೆಯನ್ನು ತೊಡಿಸಲಾಗುತ್ತಿದ್ದು, ಸೋಮವಾರ ಬಿಳಿ, ಮಂಗಳವಾರ ಕೆಂಪು, ಬುಧವಾರ ಹಸಿರು ಬಣ್ಣದ ಬಟ್ಟೆಯಿಂದ ಸಿಂಗಾರ ಮಾಡಲಾಗುತ್ತಿದೆ. ಕೇಸರಿ, ಹಲದಿ ಬಣ್ಣದ ಬಟ್ಟೆಯನ್ನು ಸಿದ್ಧ ಪಡಿಸಲಾಗಿದೆ. ಪ್ರಧಾನಿ ಮೋದಿ […]

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅಮಿತ್ ಷಾ ಅವರು ಟ್ವೀಟ್ ಮಾಡಿದ್ದು, ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆರೋಗ್ಯವಾಗಿದ್ದೇನೆ. ಕಳೆದ ಕೆಲವು‌ ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿ ಇದ್ದವರು ಕೊರೊನಾ ಟೆಸ್ಟ್ ಮಾಡಿಸಿ ಜತೆಗೆ ಐಸೋಲೇಶನ್ ನಲ್ಲಿ ಇರುವಂತೆ ತಮ್ಮ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.