ಭಾರತ ಸಹಿತ 31 ದೇಶಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಕುವೈತ್: ಸಂಕಷ್ಟದಲ್ಲಿರುವ ಭಾರತೀಯರನ್ನು ಕರೆತರಲು ಅಡ್ಡಿ

ಉಡುಪಿ: ಜಗತ್ತಿನ ಎಲ್ಲ ದೇಶಗಳಿಗೂ ಕೊರೊನಾ ಸೋಂಕು ಕಂಟಕವಾಗಿ ಪರಿಣಮಿಸಿದ್ದು, ಇದರಿಂದ ತಮ್ಮ ದೇಶವನ್ನು ರಕ್ಷಿಸಲು ಹಲವಾರು ಕ್ರಮಗಳನ್ನು ಕೈಗೊಳುತ್ತಿವೆ. ಅದರಂತೆ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕುವೈತ್ ಭಾರತ ಸೇರಿದಂತೆ ಹೆಚ್ಚು ಸೋಂಕು ಪ್ರಕರಣಗಳಿರುವ 31 ದೇಶಗಳಿಗೆ ವಿಮಾನ ಸಂಚಾರವನ್ನು ನಿಷೇಧಿಸಿದೆ. ಭಾರತ, ಸಿಂಗಾಪುರ, ಇಟಲಿ, ಸಪೇನ್, ಹಾಂಕಾಂಗ್, ಚೀನಾ, ಶ್ರೀಲಂಕಾ, ನೇಪಾಳ, ಮೆಕ್ಸಿಕೊ, ಇಂಡೋನೇಷ್ಯಾ, ಚಿಲಿ, ಪಾಕಿಸ್ತಾನ, ಈಜಿಪ್ಟ್, ಇರಾನ್, ಬ್ರೆಝಿಲ್, ಕೊಲಂಬಿಯಾ, ಬಾಂಗ್ಲಾದೇಶ ಹಾಗೂ ಫಿಲಿಫಿನ್ಸ್ ಸೇರಿದಂತೆ ಒಟ್ಟು 31 ದೇಶಗಳಿಗೆ ವಿಮಾನ […]
ಅಮೆರಿಕದಲ್ಲೂ ಟಿಕ್ ಟಾಕ್ ಸಹಿತ ಚೀನಾದ ಆಪ್ ಗಳ ನಿಷೇಧಕ್ಕೆ ಚಿಂತನೆ: ಡೊನಾಲ್ಡ್ ಟ್ರಂಪ್

ನವದೆಹಲಿ: ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಚೀನಾದ ವಿಡಿಯೊ ಆ್ಯಪ್ ಟಿಕ್ ಟಾಕ್ ಅನ್ನು ಅಮೆರಿಕದಲ್ಲಿ ನಿಷೇಧ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟಿಕ್ ಟಾಕ್ ಗೆ ಪರ್ಯಾಯವಾಗಿ ನೂತನ ಆ್ಯಪ್ ಆವಿಷ್ಕಾರ ನಡೆಸಲು ನಾವು ಪ್ರಯತ್ನ ಮಾಡುತ್ತಿದ್ದು, ನಾವು ಟಿಕ್ ಟಾಕ್ ಕಾರ್ಯವೈಕರಿಯ ಕುರಿತು ನಿಗಾ ವಹಿಸಿದ್ದೇವೆ. ಟಿಕ್ ಟಾಕ್ ಗೆ ಹೋಲುವ ಆಪ್ ಆವಿಷ್ಕಾರಿಸಿದ ಮೇಲೆ ನಾವು ಟಿಕ್ ಟಾಕ್ ಅನ್ನು ನಿಷೇಧಿಸಬಹುದು ಎಂದು ಅವರು ಹೇಳಿದ್ದಾರೆ. ಚೀನಾದ ಟಿಕ್ […]
ಹೊಸ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ: ಐದನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ

ನವದೆಹಲಿ: 34 ವರ್ಷಗಳ ಬಳಿಕ ಹೊಸ ‘ರಾಷ್ಟ್ರೀಯ ಶಿಕ್ಷಣ ನೀತಿ’ಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಅದರಂತೆ ಐದನೇ ತರಗತಿಯವರೆಗೆ ಮಾತೃಭಾಷೆ ಶಿಕ್ಷಣಕ್ಕೆ ನೀಡಿದ್ದು, ಶಾಲಾಪೂರ್ವ ಕಲಿಕೆಯಿಂದ ಪ್ರೌಢಶಿಕ್ಷಣದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಖಾತರಿ ಈ ನೀತಿಯಲ್ಲಿ ಇರುವ ಇನ್ನೊಂದು ಅಂಶವಾಗಿದೆ. ಎಂಟನೇ ತರಗತಿವರೆಗೂ ಶಿಕ್ಷಣದ ಮಾಧ್ಯಮವು ಮಾತೃಭಾಷೆ ಅಥವಾ ಸ್ಥಳೀಯ ಭಾಷೆ ಅಥವಾ ರಾಜ್ಯ ಭಾಷೆ ಆಗಿರಬೇಕು ಎಂಬುದಕ್ಕೆ ನೀತಿಯು ಆದ್ಯತೆ ನೀಡಿದೆ. ಶಾಲೆ ಮತ್ತು ಪ್ರೌಢ ಶಿಕ್ಷಣದ ಎಲ್ಲ ಹಂತಗಳಲ್ಲಿಯೂ ಸಂಸ್ಕೃತವನ್ನು […]
ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ನೈಟ್ ಕರ್ಪ್ಯೂ ತೆರವು, ಜಿಮ್ ತೆರೆಯಲು ಅವಕಾಶ

ನವದೆಹಲಿ: ಕೇಂದ್ರ ಸರ್ಕಾರವು ಕೊರೊನಾ ತಡೆಗೆ ಸಂಬಂಧಿಸಿದಂತೆ ಹೇರಿದ್ದ ಬಹುತೇಕ ನಿರ್ಬಂಧಗಳನ್ನು ತೆರವುಗೊಳಿಸಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರಗಳನ್ನು ಒಪನ್ ಮಾಡಲು ಅವಕಾಶ ನೀಡಲಾಗಿದೆ. ಪ್ರಸ್ತುತ ಜಾರಿಯಲ್ಲಿದ್ದ ನೈಟ್ ಕರ್ಪ್ಯೂಯನ್ನು ತೆರವುಗೊಳಿಸಿದೆ. ಹಾಗಾಗಿ ಆಗಸ್ಟ್ 1ರಿಂದ ನೈಟ್ ಕರ್ಪ್ಯೂ ಇರುವುದಿಲ್ಲ. ಆಗಸ್ಟ್ 31ರ ವರೆಗೆ ಶಾಲಾ-ಕಾಲೇಜು ತೆರೆಯುವಂತಿಲ್ಲ: ಹೊಸ ಮಾರ್ಗಸೂಚಿಯಲ್ಲಿ ಶಾಲಾ ಕಾಲೇಜು ತೆರೆಯಲು ಅವಕಾಶ ನೀಡಿಲ್ಲ. ಆಗಸ್ಟ್ 31ರ ವರೆಗೂ ಶಾಲಾ ಕಾಲೇಜುಗಳನ್ನು ಆರಂಭಿಸಬಾರದು ಎಂದು ಆದೇಶ ನೀಡಿದೆ. […]
ಭಾರತಕ್ಕೆ ಬಂದಿಳಿದ ರಫೇಲ್ ಯುದ್ದ ವಿಮಾನ: ಸೇನಾ ಬತ್ತಳಿಕೆಗೆ ಸೇರಿತು ಬಲಿಷ್ಟ ಫೈಟರ್ ಜೆಟ್

ನವದೆಹಲಿ: ಬಹು ನಿರೀಕ್ಷಿತ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಬುಧವಾರ ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿದಿವೆ. ಬೆಳಗ್ಗೆ 11.44ರ ಹೊತ್ತಿನಲ್ಲಿ ಮತ್ತೆ ಟೇಕ್ ಆಫ್ ಯುದ್ಧ ವಿಮಾನಗಳು ಭಾರತದತ್ತ ಪಯಾಣ ಬೆಳೆಸಿದ್ದು, ಅನಂತರ ಹರ್ಯಾಣ ಅಂಬಾಲಾ ಏರ್ ಬೇಸ್ ಗೆ ಬಂದಿಳಿದಿವೆ. ಫ್ರೆಂಚ್ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಶನ್ ಕಾರ್ಖಾನೆ ನಿರ್ಮಿಸಿದ ರಫೆಲ್ ಫೈಟರ್ ಜೆಟ್‌ಗಳು ದಕ್ಷಿಣ ಫ್ರಾನ್ಸ್‌ನ ಬೋರ್ಡಾಕ್ಸ್ ನಗರದ ಮೆರಿಗ್ನಾಕ್ ವಾಯು ನೆಲೆಯಿಂದ ಜು. 27ರಂದು ಭಾರತದತ್ತ ಮುಖ ಮಾಡಿದ್ದವು. ಅನಂತರ […]