NEET PG ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ: ಜುಲೈ 7 ರಂದು ಪರೀಕ್ಷೆ; ಆಗಸ್ಟ್ 15 ರಂದು ಅರ್ಹತಾ ಕಟ್-ಆಫ್

ನವದೆಹಲಿ: ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಬಿಇಎಂಎಸ್) 2024 ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ಸ್ನಾತಕೋತ್ತರ (NEET PG) ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ, NEET PG 2024 ಪರೀಕ್ಷೆಯು ಜುಲೈ 7 ರಂದು ನಡೆಯಲಿದ್ದು ಅರ್ಹತೆಯ ಕಟ್-ಆಫ್ ಅನ್ನು ಆಗಸ್ಟ್ 15 ಕ್ಕೆ ನಿಗದಿಪಡಿಸಲಾಗಿದೆ. ಆರಂಭದಲ್ಲಿ ಮಾರ್ಚ್ 3ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯನ್ನು ಈಗ ಜುಲೈ 7 ರಂದು ನಡೆಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಏತನ್ಮಧ್ಯೆ, ರಾಷ್ಟ್ರೀಯ […]

CA ಅಂತಿಮ ಮತ್ತು ಮಧ್ಯಂತರ ಪರೀಕ್ಷೆ ಫಲಿತಾಂಶ ಪ್ರಕಟ: ಅಧಿಕೃತ ವೆಬ್ ಸೈಟ್ ನಲ್ಲಿ ಪರಿಶೀಲಿಸಿ

ನವದೆಹಲಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಇಂದು ಚಾರ್ಟರ್ಡ್ ಅಕೌಂಟೆನ್ಸಿ (CA) ಅಂತಿಮ ಮತ್ತು ಮಧ್ಯಂತರ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಸಂಸ್ಥೆಯು ಈ ಪರೀಕ್ಷೆಯನ್ನು ನವೆಂಬರ್ 2023 ರಲ್ಲಿ ನಡೆಸಿತು. CA ಅಂತಿಮ ಮತ್ತು ಮಧ್ಯಂತರ ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ತನ್ನ ರೋಲ್ ನಂಬರ್ ಜೊತೆಗೆ ನೋಂದಣಿ ಸಂಖ್ಯೆಯನ್ನು ನಮೂದಿಸಿ ICAI ನ ಅಧಿಕೃತ ವೆಬ್‌ಸೈಟ್ https://icai.nic.in/caresult/ ನಲ್ಲಿ ಪರಿಶೀಲಿಸಬಹುದು.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಜ. 22ರಂದು ಅವಿಭಜಿತ ದ.ಕ ಜಿಲ್ಲೆಯ ದೇವಸ್ಥಾನಗಳಲ್ಲಿ ಅನ್ನ ಪ್ರಸಾದ ವಿತರಣೆ

ಉಡುಪಿ/ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ (Ayodhya Ram Lalla Pran Pratishta) ದಿನಗಣನೆ ಆರಂಭಗೊಂಡಿದ್ದು, ಅವಿಭಜಿತ ದ.ಕ ಜಿಲ್ಲೆಯಾದ್ಯಂತ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಜ. 22ರಂದು ದ.ಕ – ಉಡುಪಿ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿಯೂ ಅನ್ನಪ್ರಸಾದ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಯಾ ಊರಿನ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ರಾಮ ಮಂದಿರ ಪ್ರತಿಷ್ಠಾಪನೆಯ ನೇರವೀಕ್ಷಣೆಗಾಗಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗುತ್ತದೆ. ರಾಮನಾಪ ಜಪ, ಭಜನೆ ಸಂಕೀರ್ತನೆ, ಪಾನಕ, […]

ಪ್ರಧಾನಿ ಮೋದಿ, ಲಕ್ಷದ್ವೀಪ ಕುರಿತು ಅವಹೇಳನಕಾರಿ ಪೋಸ್ಟ್: ಮೂವರು ಸಚಿವರನ್ನು ಅಮಾನತುಗೊಳಿಸಿದ ಮಾಲ್ಡೀವ್ಸ್ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಭೇಟಿಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳ ವಿವಾದದ ನಂತರ ಮಾಲ್ಡೀವ್ಸ್ ಸರ್ಕಾರ ತನ್ನ ಮೂವರು ಸಚಿವರನ್ನು ಅಮಾನತುಗೊಳಿಸಿದೆ. ಲಕ್ಷದ್ವೀಪ ಮತ್ತು ಮಾಲ್ಡೀವ್ಸ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಜಟಾಪಟಿ ನಡೆಸಿದ ಸಚಿವರು ಮತ್ತು ಸಂಸದರು ಮಾಡಿದ ಹೇಳಿಕೆಗಳಿಂದ ಮಾಲ್ಡೀವ್ಸ್ ಸರ್ಕಾರ ದೂರವಾದ ಕೆಲವೇ ಗಂಟೆಗಳ ಬಳಿಕ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಪ್ರಧಾನಿ ಮೋದಿ ಲಕ್ಷದ್ವೀಪ […]

ಸತತ 4ನೇ ಬಾರಿ ಗೆದ್ದು ಬಾಂಗ್ಲಾ ಪ್ರಧಾನಿ ಪಟ್ಟ ಅಲಂಕರಿಸಿದ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದಲ್ಲಿ ಜನವರಿ 7 ರಂದು ನಡೆದ 12 ನೇ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ-ಬಿಎನ್‌ಪಿ ಮತದಾನ ಬಹಿಷ್ಕಾರದ ನಡುವೆ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ನೇತೃತ್ವದ ಅವಾಮಿ ಲೀಗ್ (AL) ಪಕ್ಷ ಗೆಲುವು ಸಾಧಿಸಿದೆ. ತನ್ಮೂಲಕ ಸತತ ನಾಲ್ಕನೇ ಬಾರಿಗೆ ಶೇಖ್ ಹಸೀನಾ ಪ್ರಧಾನಿ ಗದ್ದುಗೆ ಏರಲಿದ್ದಾರೆ. ಭಾನುವಾರ ಮತದಾನ ಮುಕ್ತಾಯದ ಬಳಿಕ ನಡೆದ ಮತ ಎಣಿಕೆಯಲ್ಲಿ ಅವಾಮಿ ಲೀಗ್‌ ಆರಂಭಿಕ ಮುನ್ನಡೆ ಸಾಧಿಸಿದ್ದು, 224 ಸ್ಥಾನಗಳ ಪೈಕಿ […]