ಕೊರೊನಾ ಚಿಕಿತ್ಸೆಗೆ ಫವಿಪಿರವಿರ್ ಔಷಧ ಅಭಿವೃದ್ಧಿ: ಭಾರತದಲ್ಲಿ ಬಿಡುಗಡೆ ಮಾಡಲು ಸಿಪ್ಲಾ ಕಂಪೆನಿ ಸಿದ್ಧತೆ

ನವದೆಹಲಿ: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್‌ಐಆರ್) ಅಭಿವೃದ್ಧಿಪಡಿಸಿರುವ ‘ಫವಿಪಿರವಿರ್ (Favipiravir) ಔಷಧ’ವನ್ನು ಭಾರತದಲ್ಲಿ ಶೀಘ್ರವೇ ಬಿಡುಗಡೆ ಮಾಡಲು ಔಷಧ ಉತ್ಪಾದನಾ ಕಂಪನಿ ಸಿಪ್ಲಾ ಮುಂದಾಗಿದೆ. ಈ ಔಷಧ ಕೋವಿಡ್–19 ಆರಂಭಿಕ ಹಂತದಲ್ಲಿರುವ ರೋಗಿಗಳಿಗೆ ಪರಿಣಾಮಕಾರಿಯಾಗಲಿದೆ ಎಂದು ಕ್ಲಿನಿಕಲ್ ಪರೀಕ್ಷೆಗಳಲ್ಲಿ ಸಾಬೀತಾಗಿದೆ. ಅಲ್ಲದೆ, ಕೊರೊನಾ ಸೋಂಕಿತರ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಕಡಿಮೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಸಿಎಸ್‌ಐಆರ್ ಮತ್ತು ಭಾರತೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಯು ಸ್ಥಳೀಯವಾಗಿ ಲಭ್ಯವಿರುವ ಕಚ್ಚಾವಸ್ತುಗಳನ್ನು ಬಳಸಿಕೊಂಡು ಹೊಸ […]
ಐಟಿ ಉದ್ಯೋಗಿಗಳಿಗೆ ಡಿಸೆಂಬರ್ 31ರ ವರೆಗೆ ವರ್ಕ್ ಫರ್ಮ್ ಹೋಮ್: ದೂರಸಂಪರ್ಕ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ದೂರಸಂಪರ್ಕ ಇಲಾಖೆ (ಡಿಒಟಿ) ಐಐಟಿ ಹಾಗೂ ಬಿಪಿಒ ನೌಕರರಿಗೆ ಡಿಸೆಂಬರ್ 31ರ ವರೆಗೆ ಮನೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ ನಿಯಮಗಳನ್ನು ಜಾರಿಗೊಳಿಸಿದೆ. ಇದರಿಂದ ಬಹುತೇಕ ಐಟಿ ಉದ್ಯೋಗಿಗಳಿಗೆ ವರದಾನವಾಗಿದೆ. ಈ ಕ್ರಮವನ್ನು ಸ್ವಾಗತಿಸಿದ ಸಾಫ್ಟ್‌ವೇರ್ ಲಾಬಿ ನಾಸ್ಕಾಮ್ ಅಧ್ಯಕ್ಷ ಡೆಬ್ಜಾನಿ ಘೋಷ್ ಟೆಲಿಕಾಂ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ಮತ್ತು ಡಿಒಟಿ ಕಾರ್ಯದರ್ಶಿಗೆ ಧನ್ಯವಾದ ಅರ್ಪಿಸಿದ್ದಾರೆ. ಭಾರತದ ಅತಿದೊಡ್ಡ ಐಟಿ ಕಂಪನಿ ಟಿಸಿಎಸ್ ವಾಸ್ತವವಾಗಿ 2025 ರ ವೇಳೆಗೆ ತಮ್ಮ ಉದ್ಯೋಗಿಗಳ ಪೈಕಿ ಕೇವಲ […]
ರಾಮಮಂದಿರ ಭೂಗರ್ಭಕ್ಕೆ ಕೃಷ್ಣ ನಗರಿಯ ಮಣ್ಣು: ಪ್ರಧಾನಿ ಮೋದಿ ಅವರಿಂದ ಅಯೋಧ್ಯೆ ಭೂಮಿಗೆ ಅರ್ಪಣೆ

ಉಡುಪಿ: ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ! ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ. ಅದರಂತೆ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನ ಗಂಧ ಪ್ರಸಾದ […]
ಮನುಷ್ಯನ ಮೇಲೆ ಕೋವಿಡ್ ಲಸಿಕೆ ಪ್ರಯೋಗ

ನವದೆಹಲಿ: ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ದೇಶಿಯ ಕೋವಿಡ್–19 ಲಸಿಕೆ ಕೊವ್ಯಾಕ್ಸಿನ್‌ನ್ನು ಮನುಷ್ಯನ ಮೇಲೆ ಪ್ರಯೋಗ ನಡೆಸಲು ದೆಹಲಿಯ ಏಮ್ಸ್ ಅನುಮತಿ ನೀಡಿದ್ದು, ಸೋಮವಾರದಿಂದ ಮನುಷ್ಯನ ಮೇಲೆ ಕೊವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ಪ್ರಕ್ರಿಯೆಗಳು ನಡೆಸಲಿವೆ. ಕೋವಿಡ್–19 ಇರದ ಹಾಗೂ ಯಾವುದೇ ರೋಗಗಳಿಗೆ ಒಳಗಾಗಿರದ ಆರೋಗ್ಯವಂತರನ್ನು ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದ್ದು, 18ರಿಂದ 55 ವರ್ಷ ವಯಸ್ಸಿನ ವ್ಯಕ್ತಿಗಳ ಮೇಲೆ ಕೊವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ಅಧ್ಯಯನ ನಡೆಸಲಾಗುತ್ತದೆ ಎಂದು ಏಮ್ಸ್ ಕಮ್ಯುನಿಟಿ ಮೆಡಿಸಿನ್ ಕೇಂದ್ರದ ಪ್ರೊಫೆಸರ್ ಡಾ.ಸಂಜಯ್ ರಾಯ್ ತಿಳಿಸಿದ್ದಾರೆ. ಐಸಿಎಂಆರ್ […]
ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ 300 ಕೋ.ರೂ. ವೆಚ್ಚದ ರಾಮಮಂದಿರ ನಿರ್ಮಾಣ

ಉಡುಪಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ನ ಸದಸ್ಯರೂ ಆಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಇಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ರಾಮಮಂದಿರ ನಿರ್ಮಿಸುವ 700 ಎಕರೆ ಪರಿಸರದ ಅಭಿವೃದ್ಧಿಗೆ 1000 ಕೋಟಿ ರೂ. ಅವಶ್ಯವಿದ್ದು, ವಿವಿಧ ಕಂಪೆನಿಗಳ ಸಿಎಸ್ ಆರ್ ನಿಧಿಯಿಂದ ಸಂಗ್ರಹಿಸುವ ಗುರಿ […]