ಆಗಸ್ಟ್ ತಿಂಗಳಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ: ಪ್ರಧಾನಿ ಮೋದಿಗೆ ಆಹ್ವಾನ  

ಅಯೋಧ್ಯೆ: ಇಲ್ಲಿನ ರಾಮ ಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಆಗಸ್ಟ್ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮೂಲಗಳಿಂದ ತಿಳಿದುಬಂದಿದೆ. ರಾಮನ ದೇವಾಲಯ ನಿರ್ಮಾಣಕ್ಕೆ ಸಂಬಂಧಿಸಿ ಶನಿವಾರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಭೆ ನಡೆಯಲಿದ್ದು, ಭೂಮಿ ಪೂಜೆ ನೆರವೇರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಟ್ರಸ್ಟ್ ಮುಖ್ಯಸ್ಥರು ಹೇಳಿದ್ದಾರೆ. ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಈಗಾಗಲೇ ಪ್ರಧಾನ […]

ಶುರುವಾಯ್ತು ಕೋವಿಡ್ ಲಸಿಕೆಯ ಮಾನವ ಪ್ರಯೋಗ

ನವದೆಹಲಿ: ದೇಶದಲ್ಲಿ ಕೊರೊನಾ ದಿನೇ ದಿನೇ ಹರಡುತ್ತಿರುವ ಹಿನ್ನೆಲೆ, ದೇಶದಲ್ಲಿ ಅಭಿವೃದ್ಧಿಪಡಿಸಲಾದ ಎರಡು ಲಸಿಕೆ ಮಾನವನ ಮೇಲೆ ‍ಪ್ರಯೋಗ ಆರಂಭಿಸಿದೆ. ಸುಮಾರು 1,000 ಜನ ಸ್ವ-ಇಚ್ಚೆಯಿಂದ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಜಗತ್ತಿನಲ್ಲೇ ಭಾರತ ಅತಿಹೆಚ್ಚು ಲಸಿಕೆ ತಯಾರಿಸುತ್ತಿದ್ದು, ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಲಸಿಕೆ ಅಭಿವೃದ್ಧಿ ಪ್ರಕ್ರಿಯೆಯು ನಡೆಸಬೇಕಾಗಿರುವುದು ದೇಶದ ಜವಾಬ್ದಾರಿಯೂ ಆಗಿದೆ ಎಂದು ಐಸಿಎಂಆರ್ ನಿರ್ದೇಶಕ ಡಾ. ಬಲರಾಂ ಭಾರ್ಗವ ಹೇಳಿದ್ದಾರೆ. ಒಂದನೇ ಲಸಿಕೆ […]

ರಾಜಸ್ಥಾನ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ: ಬಿಜೆಪಿಯತ್ತ ಸಚಿನ್ ಪೈಲೆಟ್?

ಜೈಪುರ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಕಾಂಗ್ರೆಸ್ನ ಇಬ್ಬರು ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಮಧ್ಯಪ್ರದೇಶದಲ್ಲಿ ಭಿನ್ನಮತ ಉಂಟಾಗಿ ಸರಕಾರ ಪತನಗೊಂಡ ಅನಂತರ ಈಗ ರಾಜಸ್ಥಾನದಲ್ಲಿ ಭಿನ್ನಮತ ಭುಗಿಲೆದ್ದಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಎಲ್ಲವೂ ಸರಿಹೋಗದಿರುವುದು ಅಲ್ಲಿನ‌ ಕೆಲವೊಂದು ಬೆಳವಣಿಗೆಗಳಿಂದ ತಿಳಿದುಬಂದಿದೆ. ಈ ಮಧ್ಯೆ ತನ್ನ 8 ಬೆಂಬಲಿತ ಶಾಸಕರೊಂದಿಗೆ ಪೈಲೆಟ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಿರ್ಧಾರದ ಬಿಕ್ಕಟ್ಟಿನ ಬಗ್ಗೆ ತಿಳಿಸಲಾಗುವುದು ಎಂದಿದ್ದಾರೆ. ಅಲ್ಲದೇ ಪ್ರಭಾವಿ ನಾಯಕರಾಗಿರುವ […]

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಗೆ ಕೊರೊನಾ ಪಾಸಿಟಿವ್: ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.‌ ಕೊರೊನಾ ಸೋಂಕು ಬಂದಿರುವ ಬಗ್ಗೆ ಸ್ವತಃ ಬಚ್ಚನ್ ಅವರೇ ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ. ಸದ್ಯ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಸ್ಥರು ಹಾಗೂ ಸಿಬ್ಬಂದಿ ಸಹ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು, ಇನ್ನೂ ಅದರ ವರದಿ ಬಂದಿಲ್ಲ. ‘ಕಳೆದ ಹತ್ತು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆ ಮಾಡಿಸಿ, ನನ್ನ ಸಂಪರ್ಕಿತರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು […]

ಎಂಟು ಪೊಲೀಸರನ್ನು ಹತ್ಯೆಗೈದಿದ್ದ ರೌಡಿ ವಿಕಾಸ್ ದುಬೆ ಪೊಲೀಸರ ಗುಂಡಿಗೆ ಬಲಿ

ಕಾನ್ಪುರ: ಇಲ್ಲಿನ ಎಂಟು ಮಂದಿ ಪೊಲೀಸರನ್ನು ಹತ್ಯೆಗೈದಿದ್ದ  ರೌಡಿಶೀಟರ್ ವಿಕಾಸ್ ದುಬೆ ಇಂದು ಬೆಳಿಗ್ಗೆ ಕಾನ್ಪುರದ ಹೊರವಲಯದಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿ ದೇವಾಲಯವೊಂದರಲ್ಲಿ ನಿನ್ನೆ ಬಂಧಿಸಲಾಗಿತ್ತು. ಇಂದು ಬೆಳಿಗ್ಗೆ ಆತನನ್ನು ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಕಾರು ಪಲ್ಟಿಯಾಗಿದ್ದು, ಈ ವೇಳೆ ವಿಕಾಸ್ ದುಬೆ ಪೊಲೀಸರ ಗನ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ದುಬೆ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.