ಅತೀ ಹೆಚ್ಚು ಕೊರೋನಾ ಸೋಂಕು ಪ್ರಕರಣ: ಭಾರತಕ್ಕೆ ಮೂರನೆಯ ಸ್ಥಾನ

ನವದೆಹಲಿ: ವಿಶ್ವದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ, ಅತೀ ಹೆಚ್ಚು ಸೋಂಕು ಪ್ರಕರಣಗಳಿರುವ ಪಟ್ಟಿಯಲ್ಲಿ ರಷ್ಯಾವನ್ನು ಹಿಂದಿಕ್ಕಿ ಭಾರತ ಈಗ ಮೂರನೇ ಸ್ಥಾನಕ್ಕೇರಿದೆ. ಜುಲೈ5 ರಾತ್ರಿ 9ರ ವೇಳೆಗೆ ಭಾರತದಲ್ಲಿ ಒಟ್ಟು 6,94,053ಕ್ಕೆ ಪ್ರಕರಣಗಳು ದಾಖಲಾಗಿದ್ದು, ರಷ್ಯಾದಲ್ಲಿ ಒಟ್ಟು 6,80,283 ಪ್ರಕರಣಗಳು ದೃಢಪಟ್ಟಿದೆ. ಮೊದಲ ಸ್ಥಾನದಲ್ಲಿರುವ ಅಮೆರಿಕ ಒಟ್ಟು 28.39 ಲಕ್ಷ ಹಾಗೂ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ ಒಟ್ಟು 15.77 ಲಕ್ಷ ಸೋಂಕು ಪ್ರಕರಣಗಳು ದೃಢವಾಗಿದೆ. ದೇಶದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು […]
ಕೇರಳದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ: ಸುಗ್ರೀವಾಜ್ಞೆ ಹೊರಡಿಸಿ ನಿಯಮ ಜಾರಿಗೊಳಿಸಿದ ಕೇರಳ ಸರ್ಕಾರ

ತಿರುವನಂತಪುರ: ಕೊರೊನಾ ಹರಡುವುದನ್ನು ನಿಯಂತ್ರಿಸಲು ಕೇರಳ ಸರ್ಕಾರ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದು, ಮಾಸ್ಕ್ ಧರಿಸುವುದು ಹಾಗೂ ಹೊರರಾಜ್ಯಗಳಿಂದ ಕೇರಳಕ್ಕೆ ಬರುವವರು ಹೆಸರು ನೋಂದಾಯಿಸುವುದನ್ನು ಕಡ್ಡಾಯಗೊಳಿಸಿ ಸುಗ್ರೀವಾಜ್ಞೆ ಹೊರಡಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದವರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಇರುತ್ತದೆ. ಹೊಸ ತಿದ್ದುಪಡಿಯ ಪ್ರಕಾರ, ರಾಜ್ಯದ ಪ್ರತಿ ನಾಗರಿಕ ತಮ್ಮ ಕೆಲಸದ ಸ್ಥಳ ಅಥವಾ ಸಾರ್ವಜನಿಕ ಸ್ಥಳ ಮತ್ತು ವಾಹನಗಳಲ್ಲಿ ಕಡ್ಡಾಯವಾಗಿ ಮೂಗು ಹಾಗೂ ಬಾಯಿಯನ್ನು ಮುಚ್ಚಿಕೊಳ್ಳುವಂತೆ ಮಾಸ್ಕ್ ಧರಿಸಬೇಕು. ಆರು ಅಡಿಗಳ ಅಂತರವನ್ನು ಪ್ರತಿಯೊಬ್ಬರೂ […]
ಕೊರೊನಾಗೆ ದೇಶದಲ್ಲಿ ಒಂದೇ ದಿನ 24,850 ಪ್ರಕರಣ ದಾಖಲು

ಬೆಂಗಳೂರು: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 24,850 ಸೋಂಕು ಪ್ರಕರಣಗಳು ದಾಖಲಾಗಿದೆ. ಕೊರೊನಾ ಸೋಂಕಿನಿಂದ 613 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ವರದಿಯಾಗುವ ಮೂಲಕ ದೇಶದಲ್ಲಿ ಒಟ್ಟುಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 4,09,083 ಮಂದಿ ಗುಣಮುಖರಾಗಿದ್ದು, 2,44,814 ಮಂದಿ ಜನರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 19,268 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಮುಂಬೈ ಮಹಾನಗರದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಮುಂಬೈ: ಕೊರೊನಾ ಆರ್ಭಟದ ನಡುವೆಯೇ ಮುಂಬೈ ಮಹಾನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಮಹಾನಗರ ಸೇರಿದಂತೆ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ. ಭಾರಿ ಮಳೆ ಆಗುತ್ತಿರುವ ಪರಿಣಾಮ ಮುಂಬೈ ನಗರದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಗಾಂಧಿ ಮಾರ್ಕೆಟ್, ಅಂದೇರಿ, ಕೊಲಬಾ, ಕುರ್ಲಾ, ಸಿಯಾನ್‌ಗಳ ಕೆಲ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಜನರು […]