ನಮ್ಮ ಯೋಧರ ತಾಕತ್ತು ಜಗತ್ತಿಗೆ ಗೊತ್ತಿದೆ: ಭೂ ವಿಸ್ತರಣೆಗೆ ಬಂದವರು ಸೋತು ಓಡಿಹೋಗಿದ್ದಾರೆ: ಪ್ರಧಾನಿ ಮೋದಿ

ಲೇಹ್: ನಮ್ಮ ಯೋಧರ ಶೌರ್ಯ, ತ್ಯಾಗ ಇಡೀ ಜಗತ್ತಿಗೆ ಗೊತ್ತಿದೆ. ಭಾರತ ಮಾತೆಯ ವಿರೋಧಿಗಳು ನಿಮ್ಮ ತಾಕತ್ತು, ಕೋಪವನ್ನು ನೋಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಲ್ವನ್ ಕಣಿವೆಯಲ್ಲಿ ಭಾರತ–ಚೀನಾ ಯೋಧರ ನಡುವೆ ಸಂಘರ್ಷ ನಡೆದು ಎರಡು ವಾರಗಳ ಬಳಿಕ ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿಯವರು ಯೋಧರನ್ನು ಉದ್ದೇಶಿಸಿ ಮಾತನಾಡಿದರು. ನಿಮ್ಮ ಶೌರ್ಯದ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ನಿಮ್ಮ ಸಾಹಸಗಾಥೆ ದೇಶದ ಪ್ರತಿಯೊಂದು ಮನೆಯಲ್ಲಿಯೂ ಪ್ರತಿಧ್ವನಿಸುತ್ತಿದೆ. ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ ಯೋಧರಿಗೆ ಮತ್ತೊಮ್ಮೆ ಗೌರವ […]
ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಸಣ್ಣ ಉದ್ದಿಮೆಗಳಿಗೆ ವಿಶ್ವಬ್ಯಾಂಕ್ ನೆರವು

ನವದೆಹಲಿ: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ 15 ಕೋಟಿ ಸಣ್ಣ ಉದ್ದಿಮೆಗಳಿಗೆ 5,625 ಕೋಟಿ ರೂ. ನೆರವು ನೀಡುವುದಾಗಿ ವಿಶ್ವ ಬ್ಯಾಂಕ್ ತಿಳಿಸಿದೆ. ಕೇಂದ್ರ ಸರ್ಕಾರವು ಆತ್ಮನಿರ್ಭರ ಭಾರತ್ ಹೆಸರಿನಲ್ಲಿ ಎಂಎಸ್‌ಎಂಇಗಳಿಗೆ 3.7 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ಘೋಷಿಸಿರುವ ನಿರ್ಧಾರಕ್ಕೆ ವಿಶ್ವ ಬ್ಯಾಂಕ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬ್ಯಾಂಕ್ ಅಥವಾ ಎಸ್‌ಐಡಿಬಿಐ ಮೂಲಕ ಮಾರುಕಟ್ಟೆಗೆ ನಗದು ಪೂರೈಕೆ ಮಾಡಲು ಆರ್‌ಬಿಐ ಸೂಕ್ತ ಕ್ರಮ ಕೈಗೊಂಡಿದೆ ಎಂದು ವಿಶ್ವ ಬ್ಯಾಂಕ್ ಭಾರತದ ನಿರ್ದೇಶಕ ಜುನೈದ್ ಅಹ್ಮದ್ ಹೇಳಿದ್ದಾರೆ. ವಿಶ್ವ […]
ಬಡವರಿಗೆ ನವೆಂಬರ್ ವರೆಗೂ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ ಗರೀಬ್ ಕಲ್ಯಾಣ್ ಯೋಜನೆಯನ್ನು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲೂ ಮುಂದುವರಿಸಲಾಗುವುದು ಎಂದಿದ್ದಾರೆ. ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್ಲಾಕ್ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ […]
ಗಂಟುಮೂಟೆ ಕಟ್ಟಲಿವೆ ಚೈನಾದ 59 ಆ್ಯಪ್ ಗಳು: ಕೇಂದ್ರ ಸರಕಾರದ ಮಹತ್ವದ ಆದೇಶ

ನವದೆಹಲಿ: ಚೀನಾ ಮತ್ತು ಭಾರತ ದೇಶಗಳ ಮಧ್ಯೆ ಗಡಿ ತಕರಾರು ನಡೆಯುತ್ತಿರುವ ಸಂದರ್ಭದಲ್ಲೇ ಚೀನಾ ಮೂಲದ 59 ಮೊಬೈಲ್ ಅಪ್ಲಿಕೇಷನ್ ಗಳನ್ನು ಕೇಂದ್ರ ಸರಕಾರ ನಿಷೇಧಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಚೀನಾಕ್ಕೆ ದೊಡ್ಡ ಶಾಕ್ ನೀಡಿದೆ. ಭಾರತದ ಮೊಬೈಲ್ ಬಳಕೆದಾರರ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ ಮತ್ತು ಖಾಸಗಿತನಕ್ಕೆ ಅಪಾಯ ಉಂಟುಮಾಡುತ್ತಿದೆ ಎನ್ನುವ ಕಾರಣದಿಂದ ಆ ಎಲ್ಲ ಆ್ಯಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಟಿಕ್ ಟಾಕ್, ಹಲೋ ಆ್ಯಪ್ ಸೇರಿದಂತೆ ಚೀನಾ ಮೂಲದ ಅನೇಕ ಆ್ಯಪ್ ಗಳು […]
ಬಾಂಗ್ಲಾದೇಶದಲ್ಲಿ ದೋಣಿ ಮುಳುಗಿ 23 ಮಂದಿ ಸಾವು

ಬಾಂಗ್ಲಾದೇಶದಲ್ಲಿ ಜೂ.29 ರಂದು ಸಂಭವಿಸಿದ ದೋಣಿ ದುರಂತದಲ್ಲಿ 23 ಪ್ರಯಾಣಿಕರು ಮೃತಪಟ್ಟಿದ್ದು, ಬುರಿಗಂಗಾ ನದಿಯಲ್ಲಿ ದೋಣಿ ಮುಳುಗಿ ಅವಘಡ ಸಂಭವಿಸಿದೆ. ಸುಮಾರು 50 ಪ್ರಯಾಣಿಕರು ದೋಣಿಯಲ್ಲಿದ್ದರು. ಮೃತರು ಮೂವರು ಮಕ್ಕಳು, ಆರು ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಅಗ್ನಿಶಾಮಕ ಸೇವೆಯ ಅಧಿಕಾರಿ ಶಹಜಹಾನ್ ಶಿಕ್ತೇರ್ ತಿಳಿಸಿದ್ದಾರೆ. ಅದರಲ್ಲಿ ಕೆಲವು ಪ್ರಯಾಣಿಕರು ಈಜಿ ಪಾರಾಗಿದ್ದು, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಇಲ್ಲಿಯವರೆಗೂ ಒಟ್ಟು 23 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದ್ದಾರೆ.