ಗಡಿಯಲ್ಲಿ ಚೀನಾ- ಭಾರತ ಮಧ್ಯೆ ಸಂಘರ್ಷ: ಐದು ಚೀನಾ ಯೋಧರನ್ನು ಹೊಡೆದುರುಳಿಸಿದ ಭಾರತ

ನವದೆಹಲಿ: ಲಡಾಖ್ ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಹಾಗೂ ಚೀನಾ ದೇಶದ ಸೇನಾಪಡೆಯೊಂದಿಗೆ ಸಂಘರ್ಷ ಉಂಟಾಗಿದ್ದು, ಇದರಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಸಹಿತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತ ಚೀನಾದ ಐದು ಸೈನಿಕರನ್ನು ಹೊಡೆದುರಳಿಸಿದೆ ಎಂದು ಸೇನಾಪಡೆ ಮೂಲಗಳು ಹೇಳಿವೆ. ಈ ಸಂಘರ್ಷದಲ್ಲಿ ಚೀನಾದ 11 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಲುವಾಗಿ ಉಭಯ ದೇಶಗಳ ಸೇನಾಪಡೆ ಅಧಿಕಾರಿಗಳು ಗಲ್ವಾನ್‌ನಲ್ಲಿ ಸಭೆ ನಡೆಸಿದರು. ಭಾರತ […]
ಗಡಿಯಲ್ಲಿ ಸೇನಾಪಡೆಯೊಂದಿಗೆ ಕಾದಾಟ: ಮೂವರು ಹುತಾತ್ಮ

ನವದೆಹಲಿ: ಗಡಿಭಾಗದಲ್ಲಿ ಚೀನಾದ ಸೇನಾಪಡೆಗಳೊಂದಿಗೆ ಸೋಮವಾರ ರಾತ್ರಿ ಲಡಾಖ್‌ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ನಡೆದ ಗುಂಡಿನ ಕಾದಾಟದಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನಾಪಡೆಯ ಮೂಲಗಳು ತಿಳಿಸಿದೆ. ಈ ಪರಿಸ್ಥಿತಿಯನ್ನು ತಿಳಿಗೊಳಿಸುದಕ್ಕಾಗಿ ಉಭಯ ದೇಶಗಳ ಸೇನಾಪಡೆ ಅಧಿಕಾರಿಗಳು ಗಲ್ವಾನ್‌ನಲ್ಲಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಭಾರತದ ರಕ್ಷಣಾ ಸಾಮರ್ಥ್ಯ ಸಾಕಷ್ಟು ಬಲಿಷ್ಠವಾಗಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ಸಾಕಷ್ಟು ವೃದ್ಧಿಸಿಕೊಂಡಿದ್ದು, ಈಗ ದುರ್ಬಲ ರಾಷ್ಟ್ರವಾಗಿ ಉಳಿದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಇಂದು ಜಮ್ಮು-ಕಾಶ್ಮೀರ ಸಂಬಂಧಿಸಿ ಆಯೋಜಿಸಿದ್ದ ಆನ್ ಲೈನ್ ರಾಲ್ಯಿಯಲ್ಲಿ ಮಾತನಾಡಿದ ಅವರು, ಭಾರತ ಗಡಿ ಭದ್ರತೆ, ರಾಷ್ಟ್ರೀಯ ಗೌರವದ ವಿಷಯದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ಗಡಿ ವಿವಾದ ಕುರಿತ ಬೆಳವಣಿಗೆಯನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಲಡಾಖ್ ನ ಪೂರ್ವಭಾಗದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದ ಬಗ್ಗೆ ಪ್ರಸ್ತಾಪಿಸಿದ ಅವರು, ನಮ್ಮೊಂದಿನ […]
ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬಯಿಯ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ. ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದರು. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಚಿತ್ರ ಸುಶಾಂತ್ ಸಿಂಗ್ ದೊಡ್ಡ ಮಟ್ಟದ ಗೆಲುವು ನೀಡಿತ್ತು.
ಲಾಕ್ ಡೌನ್ ಸಮಯದಲ್ಲಿ ಪಾರ್ಲೇಜಿ ಬಿಸ್ಕಿಟ್ ಭಾರೀ ಸೇಲ್ : ಪಾರ್ಲೆಯ ಎಲ್ಲಾ ಉತ್ಪನ್ನಗಳಿಗೂ ಡಿಮ್ಯಾಂಡೋ ಡಿಮ್ಯಾಂಡ್

ನವದೆಹಲಿ:ಮೊದಲೇ ಜನಪ್ರಿಯತೆಯ ಉತ್ತುಂಗದಲ್ಲಿದ್ದ ಚಿಣ್ಣರಿಂದ ಹಿಡಿದು ಮುದುಕರ ಬಾಯಿಂದಲೂ ಹೆಗ್ಗಳಿಕೆ ಗಳಿಸಿಕೊಂಡಿದ್ದ ಪಾರ್ಲೇಜಿ ಬಿಸ್ಕೆಟ್ ಕೊರೋನಾ ಲಾಕ್ ಡೌನ್ ಸಮಯದಲ್ಲಿ ತನ್ನ ಲಾಭವನ್ನು ಇನ್ನೊಂದಷ್ಟು ಉತ್ತುಂಗಕ್ಕೆ ಏರಿಸಿಕೊಂಡು ದಾಖಲೆ ಮಾರಾಟ ಕಂಡಿದೆ.ಮಾರ್ಚ್-ಏಪ್ರಿಲ್-ಮೇ ತಿಂಗಳಲ್ಲಿ ಕಂಪೆನಿಯ ಉತ್ಪನ್ನಗಳು ಅದರಲ್ಲೂ ಬಿಸ್ಕೆಟ್ ಗಳು ಭಾರೀ ಸೇಲ್ ಆದ ಕುರಿತು ಕಂಪೆನಿ ಹೇಳಿಕೊಂಡಿದೆ.ಶೇ.ಐದರಷ್ಟು ಶೇರು ಮೌಲ್ಯ ವೃದ್ದಿಸಿಕೊಂಡು ಕಂಪೆನಿ ಲಾಭದತ್ತ ಸಾಗಿದೆ. ಇಷ್ಟು ಲಾಭ ಕಂಪೆನಿಗೆ ಯಾವತ್ತೂ ಬಂದಿರಲಿಲ್ಲ.ದೇಶದಲ್ಲಿ ಕಷ್ಟದಲ್ಲಿರುವ ಕಾರ್ಮಿಕರಿಗೆ ಬಹಳಷ್ಟು ಮಂದಿ ಪಾರ್ಲೇಜಿ ಗ್ಲೂಕೋಸ್ ಬಿಸ್ಕೆಟ್ ಗಳನ್ನೇ ನೀಡಿದ್ದಾರೆ.ಇದು […]