ಕೊರೊನಾ ಭೀತಿ: ಹೋಂ ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಸುತ್ತಾಡಿದರೆ ಪೊಲೀಸ್ ವಶಕ್ಕೆ: ಕೋಟ

ಮಂಗಳೂರು: ಕೊರೊನಾ ತಡೆಗಟ್ಟಲು ಹೋಂ ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಮನೆಯಲ್ಲಿ ಇರಬೇಕು. ಒಂದು ವೇಳೆ ಸುತ್ತಾಡುವುದು ಕಂಡುಬಂದರೆ ಪೊಲೀಸ್ ವಶಕ್ಕೆ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಹೋಂ ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಗೃಹಬಂಧನದಲ್ಲಿದ್ದಂತೆ ಮನೆಯಲ್ಲಿ ಇರಬೇಕು. ಹೊರಗೆ ತಿರುಗಾಡಬಾರದು ಎಂದು ಸೂಚಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ಸಂಪರ್ಕಿಸುವ 17 ರಸ್ತೆಗಳನ್ನು ಮುಚ್ಚಲಾಗಿದ್ದು, ತುರ್ತು ಅಗತ್ಯವಿದ್ದರೆ ಮಾತ್ರ ತಲಪಾಡಿ ರಸ್ತೆಯಲ್ಲಿ ಬಿಡಲಾಗುವುದು ಎಂದರು. ದಕ್ಷಿಣ […]

ವಿದೇಶದಿಂದ ಬಂದ ನಾಲ್ವರಲ್ಲಿ ಶಂಕಿತ ಕೊರೊನಾ ಲಕ್ಷಣ: ಆಸ್ಪತ್ರೆಗೆ ದಾಖಲು

ಉಡುಪಿ: ವಿದೇಶದಿಂದ ಉಡುಪಿಗೆ ಬಂದ ನಾಲ್ವರಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಹರೈನ್ ನಿಂದ ಬಂದ 48 ವರ್ಷದ ವ್ಯಕ್ತಿಗೆ ಹಾಗೂ ಸೌದಿಯಿಂದ ಮರಳಿದ 23 ವರ್ಷದ ಯುವತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ, ಸೌದಿಯಿಂದ ಮರಳಿದ 32 ವರ್ಷದ ವ್ಯಕ್ತಿಗೆ ಕುಂದಾಪುರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಆಸ್ಟ್ರೇಲಿಯಾದಿಂದ ಮರಳಿದ 66 ವರ್ಷದ ಮಹಿಳೆಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ರೋಗಿಗಳ ಗಂಟಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ […]

ಸ್ವಯಂ ಜನತಾ ಕರ್ಪ್ಯೂ ವಿಧಿಸಿಕೊಳ್ಳಿ: ಭಾರತೀಯರಲ್ಲಿ ಪ್ರಧಾನಿ ಮೋದಿ ಮನವಿ

ನವದೆಹಲಿ: ಪ್ರಪಂಚದಾದ್ಯಂತ ಹುಟ್ಟಿಕೊಂಡಿರುವ ಕೊರೊನಾ ವೈರಸ್ ಭಾರತದಲ್ಲಿ ಹರಡುತ್ತಿದ್ದು, ಭಾರತದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈರಸ್ ನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಇಂದು (ಗುರುವಾರ) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೋನಾವೈರಸ್ ನಿಯಂತ್ರಣ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾ.22ರಂದು ಭಾನುವಾರ ಸ್ವಯಂ ‘ಜನತಾ ಕರ್ಫ್ಯೂ’ ವಿಧಿಸಿಕೊಳ್ಳಬೇಕು ಎಂದು ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜನಸಾಮಾನ್ಯರು ಅಂದು ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ತಮ್ಮ ತಮ್ಮ ಮನೆಯಲ್ಲೇ ಇರಬೇಕು. ಯಾರೂ ಮನೆಯಿಂದ ಹೊರಗಡೆಗೆ ಬರಬೇಡಿ. […]

ಕೊರೊನಾ ಸೋಂಕಿಗೆ ಭಾರತದಲ್ಲಿ ಮೂರನೇ ಬಲಿ: ಮುಂಬೈನಲ್ಲಿ ವೃದ್ಧ ಸಾವು

ಮುಂಬೈ: ಭಾರತದ ಮುಂಬೈನಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದ್ದು, ಮಹಾರಾಷ್ಟ್ರದ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ. ದುಬೈನಿಂದ ಬಂದಿದ್ದ ಕಲಬುರಗಿಯ 76 ವರ್ಷದ ವೃದ್ಧ ಮೊದಲು ಕೊರೋನಾಗೆ ಬಲಿಯಾಗಿದ್ದು, ನಂತರ ದೆಹಲಿಯಲ್ಲಿ ಮಹಿಳೆಯೊಬ್ಬರು ಈ ಮಾರಕ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದರು. ಇದೀಗ ಮಹಾರಾಷ್ಟ್ರದಲ್ಲೂ ವೃದ್ಧನೊಬ್ಬ ಕೊರೋನಾ ಸೋಂಕಿಗೆ ಬಲಿಯಾಗುವ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3ಕ್ಕೇರಿದೆ. ಈ ಸೋಂಕಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು […]

ಕೊರೊನಾ ಸೋಂಕಿಗೆ ದೇಶದಲ್ಲಿ ಎರಡನೇ ಬಲಿ: ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಸಾವು

ದೆಹಲಿ: ಕೊರೊನಾ ಸೋಂಕು ದೇಶದಲ್ಲಿ ಎರಡನೇ ಬಲಿ ಪಡೆದುಕೊಂಡಿದೆ. ದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವೃದ್ದೆಯೊಬ್ಬರು (69) ಮೃತಪಟ್ಟಿದ್ದಾರೆ. ಇಟಲಿಯಿಂದ ಬಂದಿದ್ದ ಮಗನಿಂದ ವೃದ್ದೆಗೆ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಾಪ್ಪಿದ್ದಾರೆ.