ಜ.27: ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ಜ. 27ರಂದು ಮಂಗಳೂರಲ್ಲಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಆಗಮಿಸಲಿದ್ದಾರೆ. ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಬಾಗವಹಿಸುವ ನಿರೀಕ್ಷೆ ಇದೆ. ಇದೆ ಸಂದರ್ಬದಲ್ಲಿ ನಗರದ ಬಸ್, ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಬೆಂಬಲ ನೀಡಲಿದ್ದು, ವ್ಯಾಪಾರಸ್ತರು ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಅಂಗಡಿ ಮುಂಗಟ್ಟುಗಳನ್ನು […]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ; ಮೋದಿ-ಶಾ ನಂಬಿಕಸ್ಥನಿಗೆ ಒಲಿದ ಬಿಜೆಪಿ ಪಟ್ಟ

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ.ನಡ್ಡಾ) ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಪಕ್ಷದ ಸಂಘಟನೆ ವಿಚಾರದಲ್ಲಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಅತ್ಯಂತ ನಂಬಿಕಸ್ಥ ನಾಯಕನಿಗೆ ಬಿಜೆಪಿ ಪಟ್ಟ ಒಲಿದಂತಾಗಿದೆ. ಬಿಜೆಪಿಯ ಕಾರ್ಯಾಧ್ಯಕ್ಷರಾಗಿದ್ದ ಜೆ.ಪಿ.ನಡ್ಡಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಬಿಜೆಪಿ ಚುನಾವಣೆ ಸಮಿತಿಯ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಘೋಷಣೆ ಮಾಡಿದ್ದಾರೆ. ದೆಹಲಿಯ ಬಿಜೆಪಿ ಮುಖ್ಯಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರು, ಗೃಹ ಸಚಿವ ಅಮಿತ್ ಶಾ […]
ಧಾರ್ಮಿಕ ಕ್ರಾಂತಿಯ ಹರಿಕಾರ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳು ಇನ್ನಿಲ್ಲ: ಕಳಚಿತು ಯತಿಪರಂಪರೆಯ ಮಹಾನ್ ಕೊಂಡಿ

ಉಡುಪಿ: ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಅಧೋಕ್ಷಜ ಮಠದ 32ನೇ ಸ್ವಾಮೀಜಿಗಳಾದ ಮಹಾಸಂತ ಶ್ರೀ ತೀವ್ರ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ಹರಿಪಾದವನ್ನು ಸೇರಿದರು. ಉಡುಪಿಯ ಅಷ್ಟಮಠಗಳ ಯತಿ ಪರಂಪರೆಯಲ್ಲಿ ಅತೀ ಹಿರಿಯ ಯತಿಯಾಗಿರುವ ವಿಶ್ವೇಶ ತೀರ್ಥರಿಗೆ 89 ವರ್ಷ ವಯಸ್ಸಾಗಿತ್ತು. ಶ್ರೀಗಳ ನಿರ್ಗಮನದೊಂದಿಗೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಉಡುಪಿ ಅಷ್ಟಮಠಗಳ ಯತಿಪರಂಪರೆಯಲ್ಲಿನ ಮಹಾನ್ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಪೇಜಾವರ ಶ್ರೀಗಳನ್ನು ನ್ಯುಮೇನಿಯ (ಶ್ವಾಸಕೋಶ ಉಸಿರಾಟ ಸಮಸ್ಯೆ)ಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ […]
ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಪ್ರಧಾನಿ:ನಾಳೆ ಅಮಿತ್ ಶಾ ಉಡುಪಿ ಭೇಟಿ ಸಾಧ್ಯತೆ

ಉಡುಪಿ: ಪೇಜಾವರ ಶ್ರೀ ಆರೋಗ್ಯ ವಿಚಾರಿಸಿ ಪ್ರಧಾನಿ ಮೋದಿ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಗೆ ದೂರವಾಣಿ ಕರೆ ಮಾಡಿದ್ದಾರೆ. ಶ್ರೀಗಳು ಶೀಘ್ರ ಗುಣಮುಖರಾಗುತ್ತಾರೆ ಎನ್ನುವ ಭರವಸೆಯನ್ನು ಆಪ್ತ ಕಾರ್ಯದರ್ಶಿ ನೀಡಿದ್ದಾರೆ. ನಾಳೆ ಸಂಜೆ ಮುಖ್ಯ ಮಂತ್ರಿ ಬಿಎಸ್.ಯಡಿಯೂರಪ್ಪ ಹಾಗೂ ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಲು ಉಡುಪಿ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ ತೀವ್ರಗೊಂಡ ಪ್ರತಿಭಟನೆ

ದೆಹಲಿ: ದೇಶಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಮಧ್ಯಾಹ್ನವಾಗುತ್ತಿದ್ದಂತೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಮಹಾರಾಷ್ಟ್ರ, ದೆಹಲಿ, ಗುಜರಾಜ್, ಅಸ್ಸಾಂ, ಉತ್ತರ ಪ್ರದೇಶ , ಕರ್ನಾಟಕದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಆಕ್ರೋಶದ ಜ್ವಾಲೆ ಹೊತ್ತಿ ಉರಿದಿದೆ. ದೆಹಲಿಯಂತೂ ಪ್ರತಿಭಟನೆ ಕಾವಿಗೆ ಅಕ್ಷರಶಃ ತತ್ತರಿಸಿ ಹೋಗಿದೆ. ಉತ್ತರ ಪ್ರದೇಶದ ನಾನಾ ಕಡೆಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ತೀವ್ರಗೊಂಡಿದ್ದು, ಪೊಲೀಸ್ ಠಾಣೆಗೆ ಬೆಂಕಿ, ರಾಜ್ಯ ಸಾರಿಗೆ ಸಂಸ್ಥೆಯ […]