ಅಯೋಧ್ಯೆಯಲ್ಲಿ ನಾಲ್ಕು ತಿಂಗಳೊಳಗೆ ಆಕಾಶದೆತ್ತರ ರಾಮಮಂದಿರ ನಿರ್ಮಾಣ: ಅಮಿತ್ ಶಾ

ನವದೆಹಲಿ: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ನಾಲ್ಕು ತಿಂಗಳೊಳಗೆ ಆಕಾಶದೆತ್ತರದ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಜಾರ್ಖಂಡ್ ನ ಪಾಕೂರ್ ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಅಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕೆಂಬುದು ಶತಮಾನಗಳಿಂದ ಪ್ರತಿಯೊಬ್ಬ ಭಾರತೀಯನ ಬೇಡಿಕೆಯಾಗಿತ್ತು. ಆದರೆ ಈ ಪ್ರಕರಣ ಕಾಂಗ್ರೆಸ್ ನಿಂದಾಗಿ ವಿಳಂಬವಾಯಿತು. ಅಯೋಧ್ಯೆ ವಿವಾದ ಪ್ರಕರಣವನ್ನು ಶೀಘ್ರವೇ ವಿಚಾರಣೆ ನಡೆಸಬೇಕಾದ […]
ಪಶುವೈದ್ಯೆ ಅತ್ಯಾಚಾರ ಪ್ರಕರಣ: ನಾಲ್ವರು ಕಾಮುಕ ರಕ್ಕಸರು ಎನ್ ಕೌಂಟರ್ ನಲ್ಲಿ ಫಿನಿಶ್ !

ಹೈದರಾಬಾದ್: ದೇಶವನ್ನೇ ತಲ್ಲಣಗೊಳಿಸಿದ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳಾದ ಮೊಹಮ್ಮದ್ ಅರೀದ್, ಜೊಲ್ಲು ಶಿವ, ಜೊಲ್ಲು ನವೀನ್ ಹಾಗೂ ಚಿಂತಾಕುಂಟ ಚೆನ್ನಕೇಶವುಲು ಹತರಾಗಿದ್ದಾರೆ. ಅತ್ಯಾಚಾರ ನಡೆದ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಆರೋಪಿಗಳು ತಪ್ಪಿಸಲು ಯತ್ನಿಸಿದ್ದರು. ಅಲ್ಲದೇ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಎನ್ ಕೌಂಟರ್ ನಡೆಸಿದ್ದಾರೆ. ಬೆಳಿಗ್ಗೆ 3.30 ರ ವೇಳೆಗೆ […]
ಪ್ರಿಯಾಂಕ ರೆಡ್ಡಿ ಅತ್ಯಾಚಾರ: ಅರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ!

ಹೈದರಾಬಾದ್: ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ಬಳಿಕ ದೇಶವನ್ನೇ ತಲ್ಲಣಗೊಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ವಕೀಲರ ಸಂಘ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ವಕೀಲರು ಆರೋಪಿಗಳ ಪರ ವಾದ ಮಾಡದಿರಲು ನಿರ್ಧರಿಸಿದ್ದಾರೆ. ಈ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನು ಬೆಂಬಲ ನೀಡಲ್ಲ ಅಂತ ಶಾದ್ನಗರದ ಬಾರ್ ಅಸೋಸಿಯೇಷನ್ ತೀರ್ಮಾನ ಮಾಡಿದೆ. ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳ ವಿರುದ್ಧ […]
ಅಯೋಧ್ಯೆ ಭೂವಿವಾದದ ಐತಿಹಾಸಿಕ ತೀರ್ಪು ಪ್ರಕಟ: ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್

ನವದೆಹಲಿ: ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕಡೆಗೂ ಸುಪ್ರೀಂ ಕೋರ್ಟ್ ಪ್ರಕಟಿಸಿದ್ದು, ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಶತಮಾನಗಳ ಧಾರ್ಮಿಕ ನಂಬಿಕೆಗೆ ಕಾನೂನಿನ ಮಾನ್ಯತೆ ದೊರಕಿಸಿಕೊಟ್ಟಿದೆ. ವಿವಾದಿತ 2.77 ಎಕರೆ ಪ್ರದೇಶದ ಮಂದಿರ ನಿರ್ಮಾಣಕ್ಕೆ ಸೇರಿದ್ದು ಎಂದಿರುವ ಸುಪ್ರೀಂ ಕೋರ್ಟ್, ರಾಮ್ ಲಲ್ಲಾಗೆ ವಹಿಸಿ ತೀರ್ಪು ನೀಡಿದೆ. ಹೀಗಾಗಿ ವಿವಾದಿತ ಜಾಗಕ್ಕೆ ಹೋರಾಡುತ್ತಿದ್ದ ಹಿಂದುಗಳ ನಂಬಿಕೆಗೆ ಐತಿಹಾಸಿಕ ಜಯ ದೊರೆತಂತಾಗಿದೆ. ಹಾಗೆಯೇ […]
ನಾಳೆ (ನ.9) ಬೆಳಗ್ಗೆ ಅಯೋಧ್ಯೆ ತೀರ್ಪು ಪ್ರಕಟ

ನವದೆಹಲಿ: ಹಲವು ವರ್ಷಗಳಿಂದ ಇಡೀ ಭಾರತ ದೇಶವೇ ಕಾಯುತ್ತಿರುವ ಅಯೋಧ್ಯೆಯ ತೀರ್ಪು ಶನಿವಾರ (ನ.9)ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನ.17 ರಂದು ನಿವೃತ್ತಿ ಆಗಲಿರುವ ಹಿನ್ನೆಲೆಯಲ್ಲಿ ತೀರ್ಪು ಶೀಘ್ರ ಪ್ರಕಟವಾಗುವ ನಿರೀಕ್ಷೆ ಇತ್ತು. ಹೀಗಾಗಿ ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅ.16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು […]