ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯ ಫೋಟೋ ಅಪ್ಲೋಡ್: ಯುವಕನಿಗೆ 1 ವರ್ಷ ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧ

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಿವಾಸಿ ಜಬಿನ್ ಚಾರ್ಲ್ಸ್ ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ಅವರ ವ್ಯಂಗ್ಯ ಫೋಟೋವನ್ನು ಎಡಿಟ್ ಮಾಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದನು. ಇದಕ್ಕೆ ಯುವಕನಿಗೆ ಮದ್ರಾಸ್ ಹೈಕೋರ್ಟ್ 1 ವರ್ಷ ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧ ಹೇರಿದೆ. ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿದ್ದನು ಬಿಜೆಪಿ ಕಾರ್ಯಕರ್ತ ನಂಜಿಲ್ ರಾಜ ಅವರು ಗಮನಿಸಿ ಚಾರ್ಲ್ಸ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಚಾರ್ಲ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಭಾರತ-ಪಾಕ್ ದ್ವಿಪಕ್ಷೀಯ ಸರಣಿ; ಎರಡು ದೇಶಗಳ ಪ್ರಧಾನಮಂತ್ರಿಗಳ ಅನುಮೋದನೆ ಬೇಕು: ಗಂಗೂಲಿ

ಕೋಲ್ಕತ್ತಾ: ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶಗಳ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಬಿಸಿಸಿಐ ನೂತನ ಅಧ್ಯಕ್ಷ ಸ್ಥಾನ ಪಡೆದ ಬಳಿಕ ಗಂಗೂಲಿ ಅವರು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶದ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ತಿಳಿಸಿದ್ದಾರೆ. ಯಾವಾಗ ದ್ವಿಪಕ್ಷೀಯ ಸರಣಿ ನಡೆಯಬೇಕು ಎಂಬುದನ್ನು ನೀವು ಭಾರತದ ಪ್ರಧಾನಿ ನರೇಂದ್ರ […]
ಫೋರ್ಬ್ಸ್ ಭಾರತದ ಶ್ರೀಮಂತರ ಪಟ್ಟಿ: ಮುಕೇಶ್ ಅಂಬಾನಿ ಅಗ್ರಸ್ಥಾನ

ನವದೆಹಲಿ: ಸತತ 12ನೇ ಬಾರಿಗೂ ಫೋರ್ಬ್ಸ್ ಭಾರತದ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ 3.7 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಅವರು ಮೊದಲ ಸ್ಥಾನ ಪಡೆದಿದ್ದಾರೆ. ಉದ್ಯಮಿ ಗೌತಮ್ ಅದಾನಿ ಈ ಸಲ 1.11 ಲಕ್ಷ ಕೋಟಿ ರೂ. ಆಸ್ತಿಯೊಂದಿಗೆ ಅವರು 2ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಹಿಂದೂಜಾ ಸೋದರರು 1.1 ಲಕ್ಷ ಕೋಟಿ ರೂ. ಮೂರನೇ ಸ್ಥಾನದಲ್ಲಿ ಇದ್ದಾರೆ. ಇನ್ನು 4ರಲ್ಲಿ ಪಲ್ಲೋನ್‌ಜಿ ಮಿಸ್ತ್ರಿ 1 ಲಕ್ಷ ಕೋಟಿ ರೂ. […]
ಟೆಸ್ಟ್ ಕ್ರಿಕೆಟ್ ನಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ದ್ವಿಶತಕ: ದಿಗ್ಗಜರಿಂದ ಭಾರೀ ಪ್ರಶಂಸೆ

ವಿಶಾಖಪಟ್ಟಣಂ: ಸೌತ್ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಕನ್ನಡಿಗ ಮಯಾಂಕ್ ಅಗರ್ವಾಲ್ ಚೊಚ್ಚಲ ದ್ವಿಶಕ ಸಿಡಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಈ ಹಿಂದೆ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಸಿಡಿಸಿದ 77 ರನ್ ಸಿಡಿಸಿದ್ದು, ಮಯಾಂಕ್ ಅವರ ಬೆಸ್ಟ್ ಸ್ಕೋರ್ ಆಗಿತ್ತು. ಇದೀಗ 215 ಸಿಡಿಸುವ ಮೂಲಕ ಭಾರತ ತಂಡದ ಆರಂಭಿಕ ಸಮಸ್ಯೆಗೆ ಮುಕ್ತಿ ಹಾಡಿದ್ದಾರೆ. ಅಲ್ಲದೇ ಇವರ ಈ ಸಾಧನೆಗೆ ಕ್ರಿಕೆಟ್ ದಿಗ್ಗಜರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಈರುಳ್ಳಿ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 80-90 ರು.ಗೆ ತಲುಪಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಬಗೆಯ ಈರುಳ್ಳಿ ರಫ್ತು ಮಾಡುವುದಕ್ಕೆ ನಿಷೇಧಿಸಲಾಗಿದೆ ಎಂದು ಡೈರೆಕ್ಟೊರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಅಧಿಸೂಚನೆಯಲ್ಲಿ ತಿಳಿಸಿದೆ. ಈರುಳ್ಳಿ ಬೆಳೆಯುವಂಥ ಮಹಾರಾಷ್ಟ್ರದಂಥ ರಾಜ್ಯಗಳಲ್ಲಿ ನೆರೆ ಸಮಸ್ಯೆ ಆಗಿ, ಈರುಳ್ಳಿ ಉತ್ಪಾದನೆಯಲ್ಲಿ ಕುಸಿತವಾಗಿದ್ದರಿಂದ ಈ ಸ್ಥಿತಿ ಏರ್ಪಟ್ಟಿತು ಎನ್ನಲಾಗಿದೆ. ದೇಶದಲ್ಲಿ ಈರುಳ್ಳಿ ಪೂರೈಕೆ ಸುಗಮವಾಗುವವರೆಗೂ ವಿದೇಶಗಳಿಗೆ ಈರುಳ್ಳಿ ರಫ್ತಿಗೆ ನಿಷೇಧ […]