ದೇಶದಲ್ಲಿ ಇ-ಸಿಗರೇಟ್ ಬ್ಯಾನ್: ಕೇಂದ್ರ ಸಚಿವ ಸಂಪುಟದ ಮಹತ್ವದ ನಿರ್ಧಾರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ದೇಶದಲ್ಲಿ ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶಾದ್ಯಂತ ಇ-ಸಿಗರೇಟ್ ಮಾರಾಟ, ಉತ್ಪಾದನೆ, ಆಮದು ಮತ್ತು ವಿತರಣೆಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ಮೇಲೆ ನಿರ್ಬಂಧ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಎಲ್ಲಾ ಬಗೆಯ ಇ-ಸಿಗರೇಟ್ ಗಳನ್ನು ಡ್ರಗ್ಸ್ ಎಂದು ಪರಿಗಣಿಸಿದ್ದು, ಸಂಪೂರ್ಣ […]
ನವದೆಹಲಿ: ಮಾಜಿ ಸಚಿವ ಡಿಕೆಶಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಶನಿವಾರ ಮಧ್ಯಾಹ್ನ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ರಾಮ ಮನೋಹರ ಲೋಹಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿಯೂ ಡಿ. ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಸೆ.13 ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಶುಕ್ರವಾರ ನ್ಯಾಯಾಲಯದಲ್ಲಿ ಆರೋಗ್ಯದ ಸಮಸ್ಯೆಯ ಕಾರಣ ಡಿ.ಕೆ.ಶಿವಕುಮಾರ್ ಜಾಮೀನು ಯಾಚಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ನೀಡಲು ಒಪ್ಪದಿದ್ದರೂ ಡಿ.ಕೆ.ಶಿವಕುಮಾರ್ ಆರೋಗ್ಯ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚಿಸಿತು. ಸೆ.17 ರವರೆಗೆ ನಾಲ್ಕು […]
ಸೆ.26, 27: ಬ್ಯಾಂಕ್ ವಿಲೀನ ವಿರೋಧಿಸಿ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಮುಷ್ಕರ

ನವದೆಹಲಿ: ದೇಶದ ಹತ್ತು ಪ್ರಮುಖ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಲು ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಮುಷ್ಕರಕ್ಕೆ ಕರೆ ನೀಡಿವೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆಯ ವತಿಯಿಂದ ಸೆ. 26, 27 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕಿಗೆ ಸಾಲು ಸಾಲು ರಜೆ, ಬ್ಯಾಂಕ್ ವಿಲೀನ ಸೇರಿದಂತೆ ವಿವಿಧ ಬೇಡಿಕೆಗಳನ್ನು […]
ಹೊಸದಿಲ್ಲಿ: ಭಾರತ ಹಾಗೂ ನೇಪಾಲ ನಡುವೆ ಪೆಟ್ರೋಲಿಯಂ ಪೈಪ್‌ಲೈನ್ ಉದ್ಘಾಟನೆ

ಹೊಸದಿಲ್ಲಿ: ದಕ್ಷಿಣ ಏಷ್ಯಾದ ಮೊದಲ ಗಡಿಯಾಚೆಗಿನ ಪೆಟ್ರೋಲಿಯಂ ಉತ್ಪನ್ನಗಳ ಪೈಪ್‌ಲೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ನೇಪಾಳದ ಪ್ರಧಾನಿ ಕೆ.ಪಿ. ಒಲಿ ಮಂಗಳವಾರ ಜಂಟಿಯಾಗಿ ಉದ್ಘಾಟಿಸಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಗಾಗಿ ಎರಡು ರಾಷ್ಟ್ರಗಳ ನಡುವೆ ಇದೇ ಮೊದಲ ಬಾರಿಗೆ ಪೈಪ್‌ಲೈನ್ ನಿರ್ಮಾಣ ಮಾಡಲಾಗಿದೆ. ಭಾರತದ ಬಿಹಾರದ ಮೋತಿಹಾರಿ ಹಾಗೂ ನೇಪಾಳದ ಅಮ್ಲೆಖ್ಗಂಜ್ ನಡುವಿನ 60 ಕಿಮೀ ಉದ್ದದ ಪೆಟ್ರೋಲಿಯಂ ಉತ್ಪನ್ನಗಳ ಪೈಪ್‌ಲೈನ್ ಯೋಜನೆ ಜಾರಿಗೊಂಡಿರುವುದರಿಂದ ನೇಪಾಳದಲ್ಲಿ ಇಂಧನ ಬೆಲೆ ತಗ್ಗಲಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿ. […]
ಮುಂಬಯಿ “ಬೊಂಬಾಯಿಡ್ ತುಳುನಾಡ್”ವಿಶ್ವ ಮಟ್ಟದ ತುಳುಸಮ್ಮೇಳನದ ಅಧ್ಯಕ್ಷರಾಗಿ ಡಾ।ಸುನೀತಾ ಎಂ. ಶೆಟ್ಟಿ ಆಯ್ಕೆ

ಮುಂಬಯಿ: ಕಲಾಜಗತ್ತು ಮುಂಬಯಿ ಆಶ್ರಯದಲ್ಲಿ ನವೆಂಬರ್ 8-10ರ ವರೆಗೆ ಮಹಾರಾಷ್ಟ್ರ ಮತ್ತು ಗುಜರಾತ್ ತುಳುವರ ಕೂಡುವಿಕೆಯೊಂದಿಗೆ ಮುಂಬೈನಲ್ಲಿ ನಡೆಯಲಿರುವ “ಬೊಂಬಾಯಿಡ್ ತುಳುನಾಡ್ “ವಿಶ್ವಮಟ್ಟದ ತುಳುಸಮ್ಮೇಳನದ ಅಧ್ಯಕ್ಷರಾಗಿ ಮುಂಬಯಿಯ ಹಿರಿಯ ಸಾಹಿತಿ ಡಾ ।ಸುನೀತಾ ಎಂ. ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಮುಂಬಯಿಯ ಕಾಂದಿವಿಲಿ ಪಶ್ಚಿಮದ ಪೊಯ್ಸರ್ ಜಿಮ್ಖಾನ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತುಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷಗಾನ, ತುಳು ನಾಟಕ, ಜಾನಪದ ನೃತ್ಯಗಳು, ತುಳುನಾಡಿನ ಪ್ರಾಚೀನ ವಸ್ತುಗಳ ಪ್ರದರ್ಶನ, ಕೊರಗರ ಡೋಲು, ತುಳುನಾಡ ಪ್ರಾಚೀನ ಕ್ರೀಡೆಗಳ […]