ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸುವ ಕಾನೂನಿಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸಿ, ಆ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಕೇಂದ್ರ ಸರ್ಕಾರದ ಮಹತ್ವದ ಕಾನೂನು ಯುಎಪಿಎ ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ, 2019ಗೆ ರಾಷ್ಟ್ರಪತಿ  ಒಪ್ಪಿಗೆ ಸೂಚಿಸಿದ್ದು ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಘೋಷಿಸಿದ ನಂತರ ಅವರ ಮೇಲೆ ಪ್ರಯಾಣ ನಿಷೇಧ ಹೇರಲು ಸಹ ಈ ಕಾನೂನಿನಡಿ ಅವಕಾಶವಿದೆ.

ರೈಲ್ವೆ ಪ್ರಯಾಣಿಕರಿಗೆ ಕಹಿ ಸುದ್ದಿ :ಆನ್ ಲೈನ್ ಟಿಕೇಟು ದುಬಾರಿ ?

ನವದೆಹಲಿ:ರೈಲ್ವೇ ಪ್ರಯಾಣಿಕರಿಗೊಂದು ಕಹಿಸುದ್ದಿಯನ್ನು ಭಾರತೀಯ ರೈಲ್ವೇ ನೀಡಿದೆ. ಅದೇನೆಂದರೆ  ಶೀಘ್ರವೇ ನೀವು ಮಾಡುವ ಆನ್ ಲೈನ್ ಟಿಕೇಟ್ ಬುಕ್ಕಿಂಗ್ ದುಬಾರಿಯಾಗಲಿದೆ. ಯಸ್.  ಆನ್‌ಲೈನ್‌ ಟಿಕೆಟ್‌ ಖರೀದಿ ವೇಳೆ ವಿಧಿಸುವ ಸೇವಾ ಶುಲ್ಕವನ್ನು ಮರು ಜಾರಿ ಮಾಡಲು ಐಆರ್‌ಸಿಟಿಸಿ ಗಂಭೀರ ಚಿಂತನೆ ನಡೆಸಿದೆ.  ಸೇವಾ ಶುಲ್ಕ ಹಿಂದಕ್ಕೆ ಪಡೆದ ಪರಿಣಾಮ ಆಗುತ್ತಿರುವ ಸುಮಾರು 88 ಕೋಟಿ ರು. ನಷ್ಟಭರಿಸಲು ತನ್ನಿಂದ ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ   ಹೇಳಿದೆ. ಹೀಗಾಗಿ ಬೇರೆ ಉಪಾಯ ಕಾಣದ ಐಆರ್‌ಸಿಟಿಸಿ, ಆನ್‌ಲೈನ್‌ ಟಿಕೆಟ್‌ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತರತ್ನ ಪ್ರಧಾನ

ನವದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಗುರುವಾರ ಪ್ರಶಸ್ತಿ ಪ್ರಧಾನ ಮಾಡಿದರು.

ಮಾಜಿ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಹೃದಾಯಘಾತದಿಂದ ‌ನಿಧನ

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಆ.6ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಆದರೆ ಈ ಬಾರಿ ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದ ಹೊರಗೆ ಉಳಿದಿದ್ದರು. ಸುಷ್ಮಾ ಸ್ವರಾಜ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ […]

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370, 3ಎ ರದ್ದು, ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ (ಜಮ್ಮು ಕಾಶ್ಮೀರ) ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಈ‌ ಘೋಷಣೆ ಮಾಡಿದ್ದು, ಸೆಕ್ಷನ್ 370 ರ ಎಲ್ಲಾ ವಿಭಾಗಗಳು ರಾಜ್ಯದಲ್ಲಿ ಅನ್ವಯಿಸುವುದಿಲ್ಲ ಎಂದಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ […]