ತಾಂತ್ರಿಕ ದೋಷ: ಚಂದ್ರಯಾನ-2 ರಾಕೆಟ್ ಉಡಾವಣೆ ರದ್ದು

ಶ್ರೀಹರಿಕೋಟ: ತಾಂತ್ರಿಕ ಕಾರಣಗಳಿಂದ ಚಂದ್ರಯಾನ-2 ಉಡಾವಣೆ ತಾತ್ಕಾಲಿಕ ರದ್ದು ಮಾಡಲಾಗಿದೆ. ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಇಸ್ರೋ ಈ ನಿರ್ಧಾರ ಪ್ರಕಟಿಸಿದ್ದು ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಜಿಎಸ್ ಎಲ್ ವಿ ಮಾಕ್-3 ಬಾಹುಬಲಿ ಉಢಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರನೆಡೆಗೆ ವಿಶೇಷತೆ ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ […]

ಹೆದ್ದಾರಿ ಸಮೀಪದ ಕಟ್ಟಡ ಕುಸಿತ: ಅವಶೇಷದಡಿ 35 ಮಂದಿ ಯೋಧರು !

ದೇಶ: ಕುಮಾರ್ ಹಟ್ಟಿ-ನಹಾನ್ ಹೆದ್ದಾರಿಯ ಸಮೀಪವಿರುವ ಬಹುಮಹಡಿ ಕಟ್ಟಡವೊಂದು ಭಾರಿ ಮಳೆಗೆ ಸಿಲುಕಿ ಭಾನುವಾರದಂದು ಕುಸಿತ ಕಂಡಿದೆ. 35 ಮಂದಿ ಯೋಧರು ಸೇರಿದಂತೆ ಅನೇಕ ಮಂದಿ ಸಿಲುಕಿರುವ ಗುಮಾನಿ ವ್ಯಕ್ತವಾಗಿದೆ. ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲಾನ್ ನಲ್ಲಿ ಕುಸಿದಿರುವ ಈ ಕಟ್ಟಡದಲ್ಲಿ ಸಿಲುಕಿದ್ದ 15 ಮಂದಿ ಯೋಧರನ್ನು ಸದ್ಯ ಬಚಾವ್ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ನಿಯಂತ್ರಣ ತಂಡ(ಎನ್ ಡಿ ಆರ್ ಎಫ್) ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದು, ವಿಪತ್ತು ನಿರ್ವಹಣಾ ಕಾರ್ಯ ಮುಂದುವರೆಸಿದ್ದರು. ಚಂಡೀಗಢ -ಶಿಮ್ಲಾ ರಾಷ್ಟ್ರೀಯ […]

ಈ ತಿಂಗಳಲ್ಲಿ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ವೇತನವನ್ನು 18,000ರು ನಿಂದ 26,000 ರು ಗೇರಿಸುವಂತೆ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇನ್ನೂ ಮನ್ನಣೆ ಸಿಕ್ಕಿಲ್ಲ. ಹೀಗಾಗಿ ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಲು ಇನ್ನಷ್ಟು ಕಾಲ ಕಾಯುವುದು ಅನಿವಾರ್ಯ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಈ ಬಗ್ಗೆ ಅಧಿಕೃತ ಆದೇಶ ನಿರೀಕ್ಷಿಸಬಹುದಾಗಿದೆ. ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ.3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿದೆ […]

ಉದ್ಯೋಗ ಮಾಡಲು ಸಾಮರ್ಥ್ಯ ಇಲ್ಲದ ಸಿಬ್ಬಂದಿಗೆ ಕಡ್ಡಾಯ ನಿವೃತ್ತಿ:ಕೇಂದ್ರದ ನಿಯಮ

ನವದೆಹಲಿ: ತಮ್ಮ ಉದ್ಯೋಗವನ್ನು ಮಾಡಲು ಸಾಮರ್ಥ್ಯ ಇಲ್ಲದ ಸರಕಾರಿ ಉದ್ಯೋಗಿಗಳ ಸೇವೆ ಕೊನೆಗೊಳಿಸಲು ಕೇಂದ್ರ ಸರಕಾರ  ಹೊಸ ನಿಯಮ ತರಲು ಸಿದ್ದತೆ ನಡೆಸಿದೆ . ಕಳೆದ ತಿಂಗಳು ತೆರಿಗೆ ಇಲಾಖೆಯ ಪ್ರಿನ್ಸಿಪಾಲ್ ಹಾಗೂ ಚೀಫ್ ಕಮಿಷನರ್ ಗಳನ್ನು ಕಡ್ಡಾಯವಾಗಿ ನಿವೃತ್ತಿ ಪಡೆಯುವಂತೆ ಮಾಡಲಾಯಿತು. ಆದರಲ್ಲಿ ಹಲವರ ವಿರುದ್ಧ ದೂರುಗಳು ಹಾಗೂ ಭ್ರಷ್ಟಾಚಾರದ ಪ್ರಕರಣಗಳು ಬಾಕಿ ಇವೆ. ಒಂದು ಪ್ರಕರಣದಲ್ಲಿ ಸೇವೆಯಿಂದ ನಿವೃತ್ತರಾದ ತೆರಿಗೆ ಅಧಿಕಾರಿ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ವರದಿ ಸಲ್ಲಿಸಲು ಆದೇಶ: 12 ಐಟಿ […]

ಬಾಲಾಕೋಟ್ ದಾಳಿ ನಂತರ ಜೈಷ್ ಕ್ಯಾಂಪ್ ಅಫ್ಘಾನಿಸ್ತಾನಕ್ಕೆ ಸ್ಥಳಾಂತರ

ನವದೆಹಲಿ, ಜು. 8: ಭಾರತ ವಾಯು ಸೇನೆಯಿಂದ ಬಾಲಾಕೋಟ್ ನಲ್ಲಿ ಜೈಷ್ ಇ ಮೊಹ್ಮದ್ ನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ನಂತರ ಉಗ್ರರ ಮುಖ್ಯ ತರಬೇತಿ ಶಿಬಿರಗಳನ್ನು ಸ್ಥಳಾಂತರಿಸಲಾಗಿದೆ. ಮೂಲಗಳ ಪ್ರಕಾರ, ಜೈಷೆ ತರಬೇತಿ ಶಿಬಿರಗಳನ್ನು ಅಫ್ಘಾನಿಸ್ತಾನಕ್ಕೆ ಸ್ಥಳಾಂತರ ಮಾಡಲಾಗಿದ್ದು. ಇದರಿಂದ ಹೊಸ ಚಿಂತೆ ಶುರುವಾಗಿದೆ. ಅಫ್ಘಾನಿಸ್ತಾನಕ್ಕೆ ತರಬೇತಿ ಶಿಬಿರಗಳು ಸ್ಥಳಾಂತರ ಆದ ಮೇಲೆ, ಭಾರತಕ್ಕೆ ಸಂಬಂಧಿಸಿದ ಅಲ್ಲಿನ ಯೋಜನೆ, ಸಂಸ್ಥೆ, ಕಟ್ಟಡಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಹೆಚ್ಚಿದೆ ಎಂದು ಗುಪ್ತಚರ ಇಲಾಖೆಯು […]