ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ: 16 ಭದ್ರತಾ ಸಿಬ್ಬಂದಿ ಹುತಾತ್ಮ

ಮಹಾರಾಷ್ಟ್ರ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಂತೆಯೇ ನಕ್ಸಲರು ನಡೆಸಿದ ಭೀಕರ ದಾಳಿಗೆ 16 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಾಂಬ್ ದಾಳಿ ನಡೆಸಿ ಗುಂಡಿನ ಮಳೆಗೆರೆದ ಪರಿಣಾಮ 16 ಮಂದಿ ಯೋಧರು ಹುತಾತ್ಮರಾದ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ವಾಹನದ ಚಾಲಕ ಸಹ ಮೃತಪಟ್ಟಿದ್ದಾರೆ. ಕುರ್ಕೆಡಾದಿಂದ ಕ್ಷಿಪ್ರ ಕಾರ್ಯಾಚರಣಾ ತಂಡದ 16 ಭದ್ರತಾ ಸಿಬ್ಬಂದಿಯನ್ನು ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಜಂಬೋರ್ಖೇಡಾ ಮತ್ತು ಲೆಂಧಾರಿ ನಡುವೆ ನಕ್ಸಲರು ವಾಹನವನ್ನು ಸ್ಫೋಟಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ […]
ಸೊನ್ನೆ ಸುತ್ತಿ ಹೊಸ ದಾಖಲೆ ನಿರ್ಮಿಸಿದ ಆಶ್ಟನ್ ಟರ್ನರ್….!

ಜೈಪುರ: 12ನೇ ಆವೃತಿಯ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಆಶ್ಟನ್ ಟರ್ನರ್, ಸತತ 3 ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅನಗತ್ಯ ದಾಖಲೆಯೊಂದಕ್ಕೆ ಗುರಿಯಾಗಿದ್ದಾರೆ. ಐಪಿಎಲ್ ಗೂ ಮೊದಲು ಭಾರತ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆದ ಟಿ20 ಪಂದ್ಯ, ಬಿಗ್‌ಬ್ಯಾಶ್ ಲೀಗ್‌ನಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲೂ ಸೊನ್ನೆಗೆ ಔಟಾಗಿದ್ದರು. ಹೀಗಾಗಿ ಸತತ 5 ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾದ ವಿಶ್ವದ ಮೊದಲ ಆಟಗಾರ ಎನ್ನುವ ಅಪಖ್ಯಾತಿಗೆ ಟರ್ನರ್ ಗುರಿಯಾಗಿದ್ದಾರೆ. ಅಲ್ಲದೇ […]
ಈಸ್ಟರ್ ಹಬ್ಬದಂದೇ ಲಂಕಾದ 3 ಚರ್ಚ್, ಹೋಟೆಲ್ ಸೇರಿ 8 ಕಡೆ ಸರಣಿ ಸ್ಫೋಟ: ಸಾವಿನ ಸಂಖ್ಯೆ 185ಕ್ಕೆ ಏರಿಕೆ

ನವದೆಹಲಿ: ಶ್ರೀಲಂಕಾ ಕೊಲಂಬೋದಲ್ಲಿ 8ನೇ ಬಾಂಬ್ ಸ್ಫೋಟವಾಗಿದೆ. ಇಲ್ಲಿಯವರೆಗೂ ಸುಮಾರು 8 ಕಡೆ ಬಾಂಬ್ ಸ್ಫೋಟ ಸಂಭವಿಸಿದ್ದು, 185ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಹಾಗಾಗಿ ಶ್ರೀಲಂಕಾ ಸರ್ಕಾರ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸಂಜೆ 6 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿದ್ದು, ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಂದು ಭಾನುವಾರ ಬೆಳಗ್ಗೆಯಿಂದಲೇ ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಯುತ್ತಿದೆ. ಈಸ್ಟರ್ ದಿನ ಪ್ರಾರ್ಥನೆ ನಡೆಯುತ್ತಿರುವಾಗ ಚರ್ಚ್‌ನಲ್ಲಿ ಮೊದಲು ಬಾಂಬ್ ಸ್ಫೋಟವಾಯಿತು. ಬಳಿಕ ಹೋಟೆಲ್‌ನಲ್ಲಿ ಸ್ಫೋಟ […]
‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ, ಪಾಂಡ್ಯ, ರಾಹುಲ್‌ಗೆ ₹ 20 ಲಕ್ಷ ದಂಡ

ನವದೆಹಲಿ: ಟಿವಿ ರಿಯಾಲಿಟಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ಅವರಿಗೆ ಬಿಸಿಸಿಐ ತಲಾ ₹ 20 ಲಕ್ಷ ದಂಡ ವಿಧಿಸಿದೆ. ಒಂಬುಡ್ಸ್‌ಮನ್ ಡಿ.ಕೆ.ಜೈನ್ ಅವರು ಈ ಆದೇಶ ಹೊರಡಿಸಿದ್ದು, ₹ 10 ಲಕ್ಷವನ್ನು ಅರೆ ಸೇನಾಪಡೆಯ ಹುತಾತ್ಮ ಯೋಧರ ಪತ್ನಿಯರ ಕಲ್ಯಾಣಕ್ಕಾಗಿ ನೀಡಬೇಕು. ಉಳಿದ ₹ 10 ಲಕ್ಷವನ್ನು ಅಂಧರ ಕ್ರಿಕೆಟ್ ಸಂಸ್ಥೆಯ ನಿಧಿಗೆ ನೀಡಬೇಕು ಎಂದು ಸೂಚಿಸಿದ್ದು, ನಾಲ್ಕು ವಾರದೊಳಗಾಗಿ ದಂಡ […]
ಬಿಜೆಪಿ ಪರ ದೀಪಿಕಾ-ರಣ್‍ವೀರ್ ಪ್ರಚಾರ: ಫೋಟೊ ವೈರಲ್

ಮುಂಬೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಜಕೀಯ ಮುಖಂಡರು ಅಬ್ಬರದ ಪ್ರಚಾರ ನಡೆಯುತ್ತಿದ್ದು, ಸಿನಿಮಾ ಕಲಾವಿದರು ಇದಕ್ಕೆ ಸಾಥ್ ನೀಡಿದ್ದಾರೆ. ಕಳೆದೆರಡು ದಿನಗಳಿಂದ ಬಾಲಿವುಡ್ ಕ್ಯೂಟ್ ಜೋಡಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಿಜೆಪಿ ಶಾಲು ಹಾಕಿಕೊಂಡಿರುವ ಫೋಟೋ ವೈರಲ್ ಆಗಿದೆ. ಏಕ್ ಬಿಹಾರಿ ಸೌ ಪೆ ಬಿಹಾರಿ ಎಂಬ ಫೇಸ್‍ಬುಕ್ ಖಾತೆಯಲ್ಲಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಶಾಲು ಹಾಕಿಕೊಂಡಿರುವ ಫೋಟೋ ಅಪ್ಲೋಡ್ ಮಾಡಲಾಗಿದೆ. ಶಾಲ್ ಮೇಲೆ ‘ವೋಟ್ ಫಾರ್ […]