ಆಸ್ತಿ ವಿವರ ಬಹಿರಂಗ ಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ವಯನಾಡ್ ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರದಂದು ಕೇರಳದ ವಯನಾಡ್ ಕ್ಷೇತ್ರದಿಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಿದ್ದಾರೆ. ರಾಹುಲ್ ಗಾಂಧಿ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ರಾಹುಲ್ ಬಳಿ 4.3 ಕೋಟಿ ರೂ ಮೌಲ್ಯದ ಷೇರು ಮಾರುಕಟ್ಟೆ ಹೂಡಿಕೆ, 3.81 ಕೋಟಿ ರೂ ನ ಮ್ಯೂಚುವಲ್ ಫಂಡ್ ಠೇವಣಿ ಮತ್ತು ಬ್ಯಾಂಕ್ ಖಾತೆಯಲ್ಲಿ 26.25 ಲಕ್ಷ ರೂ. ಹೊಂದಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. 2022-23ರ […]

ವಯನಾಡ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ವಯನಾಡ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಗೆ ಇಂದು ವಯನಾಡಿನಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡಿನಲ್ಲಿ ರೋಡ್ ಶೋ ನಡೆಸಿದರು. ರಾಹುಲ್ ಸಹೋದರಿ ಪ್ರಿಯಾಂಕಾ ವಾಡ್ರಾ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ದೀಪಾ ದಾಸ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ರೋಡ್ ಶೋನಲ್ಲಿ ಭಾಗವಹಿಸಿದರು. ಸಿಪಿಐ ಈ ಕ್ಷೇತ್ರದಿಂದ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ ಮತ್ತು ಬಿಜೆಪಿ ತನ್ನ […]

ತೈವಾನ್ ನಲ್ಲಿ 7.5 ತೀವ್ರತೆಯ ಭೂಕಂಪ: ಕರಾವಳಿ ತೀರಗಳಿಗೆ ಸುನಾಮಿ ಎಚ್ಚರಿಕೆ ನೀಡಿದ ಜಪಾನ್, ಫಿಲಿಪ್ಪೀನ್ಸ್

ಟೋಕಿಯೋ: ತೈವಾನ್ ಬಳಿ ಸಮುದ್ರದಲ್ಲಿ 7.5 ರ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು (Earthquake) ಸುನಾಮಿ (Tsunami) ಎಚ್ಚರಿಕೆಯನ್ನು ಪ್ರಚೋದಿಸಿದ ನಂತರ ಜಪಾನ್ (Japan) ದಕ್ಷಿಣ ಪ್ರಾಂತ್ಯದ ಓಕಿನಾವಾ ಕರಾವಳಿ ಪ್ರದೇಶದ ಜನರಿಗೆ ಸ್ಥಳಾಂತರಿಸುವ ಸಲಹೆಯನ್ನು ನೀಡಿದೆ. ಜಪಾನ್ ಹವಾಮಾನ ಸಂಸ್ಥೆ ಪ್ರಕಾರ, 3 ಮೀಟರ್ ವರೆಗಿನ ಸುನಾಮಿ ಅಲೆಗಳು ಜಪಾನ್‌ನ ನೈಋತ್ಯ ಕರಾವಳಿಯ ಹೆಚ್ಚಿನ ಪ್ರದೇಶಗಳನ್ನು ತಲುಪುವ ನಿರೀಕ್ಷೆಯಿದೆ. ಬುಧವಾರ ಬೆಳಿಗ್ಗಿನ ಜಾವ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿರುವ ವರದಿಯಾಗಿದೆ. ಜಪಾನ್ […]

ಅಬಕಾರಿ ಹಗರಣ ಪ್ರಕರಣ: ತಿಹಾರ್ ಜೈಲು ನಂ 2 ರಲ್ಲಿ ಅರವಿಂದ್ ಕೇಜ್ರಿವಾಲ್; ಏ.15 ರವರೆಗೆ ನ್ಯಾಯಾಂಗ ಬಂಧನ

ದೆಹಲಿ: ಅಬಕಾರಿ ಹಗರಣದಲ್ಲಿ ಇಡಿ ಸಂಸ್ಥೆಯಿಂದ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ವಿಚಾರಣಾಧೀನ ಕೈದಿಯಾಗಿ ತಿಹಾರ್ ಜೈಲು ನಂ. 2 ರಲ್ಲಿ ಏ.15 ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ನಂ. 1 ರಲ್ಲಿ, ಇತರ ಸಚಿವರು ಜೈಲು ಸಂಖ್ಯೆ 7 ರಲ್ಲಿ, ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಜೈಲು ಸಂಖ್ಯೆ 5 ರಲ್ಲಿ ಅದಾಗಲೇ ಬಂಧನದಲ್ಲಿದ್ದಾರೆ. ಈ ಮಧ್ಯೆ ಕೇಜ್ರಿವಾಲ್ ಐದು ಬೇಡಿಕೆಗಳನ್ನಿಟ್ಟಿದ್ದಾರೆ. […]

ಪಶ್ಚಿಮ ಬಂಗಾಳದಲ್ಲಿ ಹಠಾತ್ ಚಂಡಮಾರುತಕ್ಕೆ 5 ಬಲಿ; 300 ಕ್ಕೂ ಹೆಚ್ಚು ಜನ ಗಾಯಾಳು

ಪಶ್ಚಿಮ ಬಂಗಾಳದಲ್ಲಿ ಹಠಾತ್ ಚಂಡಮಾರುತಕ್ಕೆ 5 ಬಲಿ; 300 ಕ್ಕೂ ಹೆಚ್ಚು ಜನ ಗಾಯಾಳು ಕೊಲ್ಕತ್ತಾ: ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಗೆ ಭಾನುವಾರ ಅಪ್ಪಳಿಸಿದ ಹಠಾತ್ ಚಂಡಮಾರುತದಲ್ಲಿ ಕನಿಷ್ಠ 5 ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮನೆಗಳು ಹಾಗೂ ಕಟ್ಟಡಗಳಿಗೂ ಹಾನಿಯಾಗಿರುವ ವರದಿಯಾಗಿದೆ. ಆಸ್ಪತ್ರೆಗೆ ದಾಖಲಾಗಿರುವ 42 ಮಂದಿಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಅವರು ಸೋಮವಾರ ಚಂಡಮಾರುತ ಪೀಡಿತ ಪ್ರದೇಶಕ್ಕೆ […]