ತಂದೆಯಾದ ರೋಹಿತ್ ಶರ್ಮಾ

ನವದೆಹಲಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಅವರು ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಭಾನುವಾರ ಮುಂಬೈಗೆ ವಾಪಸಾಗಿದ್ದು ಜನವರಿ ಮೂರರಿಂದ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಜನವರಿ 12ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ಅವರು ಆಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಹೊಸ ವರ್ಷಕ್ಕೆ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

ನವದೆಹಲಿ: ಗೃಹ ಬಳಕೆ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ದರ ರೂ.5.91 ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುವ ಮೂಲಕ ಜನರಿಗೆ ಹೊಸ ವರ್ಷಕ್ಕೆ ಗಿಫ್ಟ್ ಸಿಕ್ಕಿದಂತಾಗಿದೆ. ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು 2ನೇ ಬಾರಿ ಇಳಿಕೆ ಮಾಡಿದ್ದು, ಡಿ.1 ರಂದು ರೂ.6.52 ಕಡಿತಗೊಳಿಸಿತ್ತು. ಇದರೊಂದಿಗೆ ರೂ.12.43 ಒಂದೇ ತಿಂಗಳಿನಲ್ಲಿ ಕಡಿಮೆ ಆಗಿದೆ. ಜೂನ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ತಿಂಗಳಿನಿಂದ ಸತತ 6 ಬಾರಿ ರೂ.14.13 ಹೆಚ್ಚಳವಾಗಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‍ಪಿಜಿ ಅನಿಲದ ಬೆಲೆ […]

ಕೃಷಿ ಸಾಲಮನ್ನಾ: ಆರ್‌ಬಿಐ ಎಚ್ಚರಿಕೆ

ನವದೆಹಲಿ: ಕೃಷಿ ಸಾಲಮನ್ನಾಕ್ಕೆ ಕಡಿವಾಣ ಹಾಕುವಂತೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿದೆ. ರಾಜ್ಯಸರ್ಕಾರಗಳ ಸಾಲಮನ್ನಾ ನಿರ್ಧಾರದಿಂದ ಭವಿಷ್ಯದಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಸಾಮರ್ಥ್ಯಕ್ಕೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಗಳ ಕೃಷಿ ಸಾಲಮನ್ನಾ ನಿರ್ಧಾರದಿಂದಾಗಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಪ್ರಮಾಣ ಶೇ 70ರವರೆಗೂ ಕುಂಠಿತಗೊಂಡಿದೆ ಎಂದು ಆರ್‌ಬಿಐ ಎಚ್ಚರಿಕೆ ನೀಡಿದೆ. 2016–17ರಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ನೀಡಿಕೆ ಪ್ರಮಾಣ ಶೇ 12.4ರಷ್ಟು ಪ್ರಗತಿ ಸಾಧಿಸಿತ್ತು. 2017–18ರಲ್ಲಿ […]

ದೇಶದಲ್ಲಿ ಎಟಿಎಂಗಳ ಸಂಖ್ಯೆ ಇಳಿಕೆ

ದೇಶದಲ್ಲಿ ಎಟಿಎಂಗಳ ಸಂಖ್ಯೆ 2017ರ ಡಿಸೆಂಬರ್‌ನಿಂದ 2018ರ ಸೆಪ್ಟೆಂಬರ್‌ ಅವಧಿಯಲ್ಲಿ 2.07 ಲಕ್ಷದಿಂದ 2.05ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳು ಶಾಖೆಗಳನ್ನು ಮೇಲ್ದರ್ಜೆಗೇರಿಸುತ್ತಿವೆ. ಇದರ ಜತೆಗೆ ಪಾಯಿಂಟ್‌ ಆಫ್‌ ಸೇಲ್‌, ಯುಪಿಐನಂತಹ ಡಿಜಿಟಲ್ ಪಾವತಿ ವ್ಯವಸ್ಥೆಗಳ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಎಟಿಎಂಗಳ ಸಂಖ್ಯೆ ತಗ್ಗಿಸಲಾಗುತ್ತಿದೆ ಎಂದು 2017–18ರ ಬ್ಯಾಂಕಿಂಗ್‌ ಪ್ರಗತಿ ವಲಯವು ವರದಿಯನ್ನು ನೀಡಿದೆ. ಆದರೆ ನಿರ್ವಹಣಾ ವೆಚ್ಚದಲ್ಲಿ ಭಾರಿ ಏರಿಕೆ, ಹೊಸ ನೋಟು ಮಷಿನ್‌ಗಳಿಗೆ ತಗಲುವ ಹೆಚ್ಚುವರಿ ಹೊರೆಯನ್ನು ಬ್ಯಾಂಕ್‌ಗಳು […]

ಹಾವುಗಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಜೋರಾವರ್

ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ಮಗ ಜೋರಾವರ್ ಶನಿವಾರ ತನ್ನ ಐದನೇ ವರ್ಷದ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡನು. ಕೇಕ್ ಕತ್ತರಿಸುವ ಸಂದರ್ಭದಲ್ಲಿ ಜೋರಾವರ್‌ ಕುತ್ತಿಗೆಯಲ್ಲಿ ಹೆಬ್ಬಾವು, ತಲೆ ಮೇಲೆ ಕಪ್ಪೆ ಮತ್ತು ಸ್ಕಿಂಕ್ (ಹಲ್ಲಿ ಜಾತಿಯ ಪ್ರಾಣಿ) ಇದ್ದವು. ಪ್ರಾಣಿ, ಪಕ್ಷಿಗಳೆಂದರೆ ಅಪಾರ ಇಷ್ಟಪಡುವ ಜೋರಾವರ್‌ಗಾಗಿ ಆತನ ತಾಯಿ ಅಯೇಷಾ ಮುಖರ್ಜಿ ಅವರು ಈ ಜನ್ಮದಿನದ ಪಾರ್ಟಿ ಏರ್ಪಡಿಸಿದ್ದರು. ಇದರಲ್ಲಿ ಆತನ ಶಾಲೆಯ ಸ್ನೇಹಿತರು ಮತ್ತಿತರರು ಭಾಗವಹಿಸಿದ್ದರು.