ಮುಂದಿನ ವರ್ಷ ಭಾರತಕ್ಕೆ ಬರಲಿದೆ EV ದಿಗ್ಗಜ ಟೆಸ್ಲಾ? ಗುಜರಾತ್ ನಲ್ಲಿ ಮೊದಲ ಉತ್ಪಾದನಾ ಘಟಕ ಸ್ಥಾಪನೆ ಸಾಧ್ಯತೆ

ಅಹಮದಾಬಾದ್: ಟೆಸ್ಲಾ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ ಮತ್ತು ಅದರ ಮೊದಲ ಉತ್ಪಾದನಾ ಘಟಕವು ಮುಂದಿನ ವರ್ಷ ಗುಜರಾತ್‌ನಲ್ಲಿ ಸ್ಥಾಪನೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಭಾರತದಲ್ಲಿ EV ತಯಾರಕರ ಮೊದಲ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನಡೆಯುತ್ತಿರುವ ಮಾತುಕತೆಗಳು ಅಂತಿಮ ಹಂತದಲ್ಲಿವೆ ಮತ್ತು ಮಾಧ್ಯಮ ವರದಿಗಳ ಪ್ರಕಾರ ಶೀಘ್ರದಲ್ಲೇ ಒಂದು ತೀರ್ಮಾನವನ್ನು ತಲುಪುವ ಸಾಧ್ಯತೆಯಿದೆ. ರಾಜ್ಯದಲ್ಲಿ ಟೆಸ್ಲಾ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಕುರಿತು ಪ್ರಕಟಣೆಯು ಮುಂಬರುವ “ವೈಬ್ರೆಂಟ್ ಗುಜರಾತ್” ಶೃಂಗಸಭೆಯಲ್ಲಿ ನಡೆಯಲಿದ್ದು, ಇದು ಜನವರಿ 2024 ರಲ್ಲಿ ನಡೆಯಲಿದೆ […]

ಭಾರತದಲ್ಲಿ ಗೂಗಲ್ ಸೇರಿದಂತೆ ಅನೇಕ ಟೆಕ್‌ ಕಂಪೆನಿಗಳಿಂದ ನೇಮಕಾತಿ ಕುಂಠಿತ

ನವದೆಹಲಿ : 2022 ಕ್ಕೆ ಹೋಲಿಸಿದರೆ ಭಾರತದಲ್ಲಿ ಗೂಗಲ್‌ ಸೇರಿದಂತೆ ಅನೇಕ ಟೆಕ್ ಕಂಪೆನಿಗಳು ನೇಮಕಾತಿಯು 90 ಪ್ರತಿಶತದಷ್ಟು ಕುಸಿದಿವೆ. ಕಂಪನಿಗಳು ಭಾರತದಲ್ಲಿ 200 ಮುಕ್ತ ಸ್ಥಾನಗಳನ್ನು ಹೊಂದಿವೆ, ಇದು ಅವರ ವಿಶಿಷ್ಟ ನೇಮಕಾತಿ ಪ್ರಕಿಯೆಯಲ್ಲಿ 98 ಪ್ರತಿಶತ ಇಳಿಕೆಯಾಗಿದೆ ಎಂದು ತಿಳಿಸಿದೆ.ಗೂಗಲ್, ಅಮೆಜಾನ್, ಮೆಟಾ, ಆಪಲ್ ಸೇರಿದಂತೆ ಅನೇಕ ಟೆಕ್ ಕಂಪೆನಿಗಳು ತಮ್ಮ ನೇಮಕಾತಿ ಪ್ರಕ್ರಿಯೆಗಳನ್ನು ನಿಧಾನಗೊಳಿಸುತ್ತಿದ್ದು, ಮುಂದೆಯೂ ಉದ್ಯೋಗಾವಕಾಶಗಳ ಕೊರತೆ ಕಂಡು ಬರಲಿದೆ ಎಂದು ವರದಿಗಳು ತಿಳಿಸಿವೆ. ಎಕನಾಮಿಕ್ ಟೈಮ್ಸ್ (ಇಟಿ) ನ ಇತ್ತೀಚಿನ […]

ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ: 2 ಅಮೃತ್ ಭಾರತ್ 8 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಲೋಕಾರ್ಪಣೆಗೊಳಿಸಿದ ಪ್ರಧಾನಿ

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಇಂದು ಒಟ್ಟು ಎಂಟು ಹೊಸ ರೈಲುಗಳಿಗೆ ಚಾಲನೆ ನೀಡಿದರು. ಇವುಗಳಲ್ಲಿ ಎರಡು ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗಳು ಸೇರಿವೆ. ಇಂದು ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಕೆಲವು ರೈಲುಗಳಿಗೆ ಅಯೋಧ್ಯೆಯಿಂದ ಚಾಲನೆ ದೊರೆತಿದ್ದರೆ ಇತರವುಗಳನ್ನು ಏಕಕಾಲದಲ್ಲಿ ವೀಡಿಯೊ ಲಿಂಕ್ ಮೂಲಕ ವರ್ಚುವಲ್ ಮೂಲಕ ಚಾಲನೆ ಮಾಡಲಾಯಿತು. ಅಮೃತ್ ಭಾರತ್ […]

‘AAI’ ಮುಖ್ಯಸ್ಥ: ‘ಅಯೋಧ್ಯೆ ವಿಮಾನ’ ನಿಲ್ದಾಣವನ್ನು 20 ತಿಂಗಳಲ್ಲಿ ನಿರ್ಮಿಸಿ ಹೊಸ ದಾಖಲೆ

ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ದಾಖಲೆಯ 20 ತಿಂಗಳು ಅಥವಾ ಒಂದು ವರ್ಷ ಮತ್ತು ಎಂಟು ತಿಂಗಳಲ್ಲಿ ನಿರ್ಮಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಅಧ್ಯಕ್ಷ ಸಂಜೀವ್ ಕುಮಾರ್ ಹೇಳಿದ್ದಾರೆ.ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದು, ಇದನ್ನು ಕೇವಲ 20 ತಿಂಗಳಲ್ಲಿ ನಿರ್ಮಿಸಿ ದಾಖಲೆ ಬರೆಯಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ […]

ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ: ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಯೋಧ್ಯಾ ಧಾಮ್ ರೈಲು ನಿಲ್ದಾಣ ಉದ್ಘಾಟನೆ

ಆಯೋಧ್ಯೆ: ರಾಮ ಮಂದಿರದ ರಾಮ ಲಲ್ಲಾ ಪ್ರಾಣಪ್ರತಿಷ್ಠೆಗೂ ವಾರಗಳ ಮೊದಲು, ಪ್ರಧಾನಿ ನರೇಂದ್ರ ಮೋದಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 30, ಶನಿವಾರದಂದು ಉತ್ತರ ಪ್ರದೇಶದ ಅಯೋಧ್ಯೆಯ ದೇವಾಲಯ ಪಟ್ಟಣಕ್ಕೆ ಭೇಟಿ ನೀಡಲಿದ್ದು, ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಾ ಧಾಮ್ ರೈಲು ನಿಲ್ದಾಣ ಮತ್ತು ಸುಮಾರು 15,000 ಕೋಟಿ ರೂ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.30ಕ್ಕೆ […]