ಹಿಟ್ ಎಂಡ್ ರನ್ ಕಾನೂನು: ರಸ್ತೆ ತಡೆ ನಡೆಸಿ ವಿರೋಧ ವ್ಯಕ್ತಪಡಿಸುತ್ತಿರುವ ಟ್ರಕ್ ಚಾಲಕರು

ನವದೆಹಲಿ: ಭಾರತೀಯ ದಂಡ ಸಂಹಿತೆಯನ್ನು ಬದಲಿಸಲಿರುವ ಹೊಸ ಭಾರತೀಯ ನ್ಯಾಯ ಸಂಹಿತೆಯಡಿ, ನಿರ್ಲಕ್ಷ್ಯದ ಚಾಲನೆಯಿಂದ ಗಂಭೀರವಾದ ರಸ್ತೆ ಅಪಘಾತವನ್ನು ಉಂಟುಮಾಡಿ ಓಡಿಹೋಗುವ(ಹಿಟ್ ಎಂಡ್ ರನ್ ಪ್ರಕರಣ) ಚಾಲಕರಿಗೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸುವ ನಿಬಂಧನೆಯನ್ನು ಸೇರಿಸಲಾಗಿದೆ. ಈ ಕಾನೂನನ್ನು ವಿರೋಧಿಸಿ ದೇಶದ ಹಲವು ರಾಜ್ಯಗಳಲ್ಲಿ ಟ್ರಕ್‌ಗಳು ಮತ್ತು ಟ್ಯಾಂಕರ್‌ಗಳು ಸೇರಿದಂತೆ ವಾಣಿಜ್ಯ ವಾಹನಗಳ ಚಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸ ಕಾನೂನಿನ ಪ್ರಕಾರ, ಹಿಟ್ ಎಂಡ್ ರನ್ ಪ್ರಕರಣಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ […]

ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟನೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿಗೆ ಆಗಮಿಸಲಿದ್ದು, ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. 1100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಎರಡು ಹಂತದ ಹೊಸ ಅಂತಾರಾಷ್ಟ್ರೀಯ ಟರ್ಮಿನಲ್ ಕಟ್ಟಡವು ವಾರ್ಷಿಕ 44 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಧಾನಿ ಮೋದಿಯವರು ತಿರುಚಿರಾಪಳ್ಳಿಯಿಂದ ದಕ್ಷಿಣ ಭಾರತ ಪ್ರವಾಸವನ್ನು ಆರಂಭಿಸಲಿದ್ದಾರೆ. ಪ್ರಧಾನಮಂತ್ರಿ ಮೋದಿ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ತಮಿಳುನಾಡಿನಲ್ಲಿ19,850 ಕೋಟಿ ರೂ ಗೂ ಹೆಚ್ಚು ಮೊತ್ತದ […]

‘ಕೃಷ್ಣ ಶಿಲೆ’ಯಲ್ಲಿ ಮೂಡಿಬಂತು ‘ರಾಮ ಲಲ್ಲಾ’ನ ಸ್ವರೂಪ: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ವಿಗ್ರಹ ಪ್ರಾಣಪ್ರತಿಷ್ಠಾಪನೆಗೆ ಆಯ್ಕೆ

ಮೈಸೂರು: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೊಳ್ಳುತ್ತಿರುವ ‘ರಾಮ ಲಲ್ಲಾ’ನ ಸಂಕೀರ್ಣವಾದ ಕೆತ್ತನೆಯ ವಿಗ್ರಹವನ್ನು ಕರ್ನಾಟಕದ ಮೈಸೂರು ಮೂಲದ ನುರಿತ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಚಿಸಿದ್ದಾರೆ. ಇದನ್ನು ಬಿಜೆಪಿ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೃಢಪಡಿಸಿದ್ದಾರೆ. ಅವರು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿಯೋಗಿರಾಜ್ ಅವರ ರಚನೆಗೆ ಸಂತಸ ವ್ಯಕ್ತಪಡಿಸಿ, “ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪಟ್ಟಾಭಿಷೇಕದಲ್ಲಿ ವಿಶೇಷ ಪಾತ್ರ ವಹಿಸಿದ್ದನ್ನು ನೆನಪಿಸುವಂತೆ ಈಗ ಮತ್ತೊಂದು ಸುಯೋಗ […]

ಪಂಜಾಬ್ ನಲ್ಲೊಬ್ಬ ‘ಪಿಎಚ್‌ಡಿ ಸಬ್ಜಿ ವಾಲಾ’: ಅಧ್ಯಾಪನ ವೃತ್ತಿಗೆ ತಿಲಾಂಜಲಿ ಇತ್ತು ತರಕಾರಿ ಮಾರುತ್ತಿರುವ ಪ್ರಾಧ್ಯಾಪಕ!

ಅಮೃತಸರ್: ನಾಲ್ಕು ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಹೊಂದಿರುವ ವ್ಯಕ್ತಿಯೊಬ್ಬರು ತಮ್ಮ ಜೀವನ ನಿರ್ವಹಣೆಗೆ ತರಕಾರಿ ಮಾರುತ್ತಿದ್ದಾರೆ. 39 ವರ್ಷದ ಡಾ. ಸಂದೀಪ್ ಸಿಂಗ್ 11 ವರ್ಷಗಳ ಕಾಲ ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಕಾನೂನು ವಿಭಾಗದಲ್ಲಿ ಗುತ್ತಿಗೆ ಪ್ರಾಧ್ಯಾಪಕರಾಗಿದ್ದರು. ಅವರು ಕಾನೂನಿ ವಿಷಯದಲ್ಲಿ ಪಿಎಚ್‌ಡಿ ಮತ್ತು ಪಂಜಾಬಿ, ಪತ್ರಿಕೋದ್ಯಮ ಮತ್ತು ರಾಜಕೀಯ ವಿಜ್ಞಾನ ಸೇರಿದಂತೆ ನಾಲ್ಕು ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ ಮತ್ತು ಇನ್ನೂ ತಮ್ಮ ಅಧ್ಯಯನವನ್ನು ಮುಂದುವರಿಸುತ್ತಿದ್ದಾರೆ. ಸಂಬಳ ಕಡಿತ ಮತ್ತು ಅನಿಯಮಿತ ವೇತನದಂತಹ ಅಡೆತಡೆಗಳನ್ನು […]

ವಿಶ್ವದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಕಾಮಗಾರಿ ಪೂರ್ಣ: ಜನವರಿ 12 ರಂದು ಉದ್ಘಾಟನೆ

ಮುಂಬೈ: ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅನ್ನು ಉದ್ಘಾಟಿಸಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾನುವಾರ ಹೇಳಿದ್ದಾರೆ. ಸುಮಾರು 22 ಕಿಮೀ ಉದ್ದದ ಸೇತುವೆಯು 16.5 ಕಿಮೀ ಸಮುದ್ರ ಉದ್ದವನ್ನು ಹೊಂದಿರುವ MTHL ರಾಷ್ಟ್ರದ ಮಾತ್ರವಲ್ಲ ವಿಶ್ವದಲ್ಲೇ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. ಇದು ದಕ್ಷಿಣ ಮುಂಬೈನ ಸೆವ್ರಿಯಲ್ಲಿ ಪ್ರಾರಂಭವಾಗುತ್ತದೆ, ಥಾಣೆ ಕೊಲ್ಲಿಯನ್ನು ದಾಟುತ್ತದೆ ಮತ್ತು ನವಿ ಮುಂಬೈನ ದೂರದ ಗಡಿಯಲ್ಲಿರುವ ಚಿರ್ಲೆಯಲ್ಲಿ ಕೊನೆಗೊಳ್ಳುತ್ತದೆ. ಸೇತುವೆಯು […]