ತಿಂಗಳಿಗೆ ಎರಡು ಬಾರಿ ಸಂಬಳ ನೀಡುವ ವ್ಯವಸ್ಥೆ ಜಾರಿಗೆ ಬರಲಿ: ಅನುಪಮ್ ಮಿತ್ತಲ್

ನವದೆಹಲಿ: ಉದ್ಯೋಗಿಗಳಿಗೆ ತಿಂಗಳಿಗೆ ಎರಡು ಬಾರಿ ಸಂಬಳ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಉದ್ಯಮಿ ಅನುಪಮ್ ಮಿತ್ತಲ್ Anupam Mittal ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಮುಂದಿನ ತಿಂಗಳಲ್ಲಿ ಸಂಬಳ ನೀಡುವ ಪದ್ಧತಿ ಹಳೆಯದಾಗಿದ್ದು, ಅದನ್ನು ಬದಲಾಯಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಾಮಾನ್ಯವಾಗಿ ಉದ್ಯೋಗಿಗಳು ಒಂದು ತಿಂಗಳು ಕೆಲಸ ಮಾಡಿದ ನಂತರ ಮುಂದಿನ ತಿಂಗಳ ಮೊದಲ ವಾರದಲ್ಲಿ ಸಂಬಳ ಪಡೆಯುತ್ತಾರೆ. ಆದರೆ ಈ ವ್ಯವಸ್ಥೆಯಿಂದ ಅನೇಕರು ಇಎಂಐ, […]
ಇನ್ನು5 ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರೀಶನ್,ಬ್ಲೂ ಕಾಲರ್ ಉದ್ಯೋಗಿಗಳು ಸಿಗೋದೇ ಕಷ್ಟ: ತಜ್ಞರ ಅಧ್ಯಯನ ಬಿಚ್ಚಿಟ್ಟ ಸತ್ಯವೇನು?

ನವದೆಹಲಿ: ದೇಶದಲ್ಲಿ ಮುಂದಿನ ಐದು ವರ್ಷಗಳಲ್ಲಿ ಪ್ಲಂಬರ್‌ಗಳು, ಎಲೆಕ್ಟ್ರಿಷಿಯನ್‌ಗಳು, ಕಾರ್ಪೆಂಟರ್‌ಗಳು, ಚಾಲಕರು, ನರ್ಸ್‌ಗಳು ಹಾಗೂ ಆರೈಕೆ ಸಿಬ್ಬಂದಿಗಳಂತಹ ಬ್ಲೂ-ಕಾಲರ್ (Blue-Collar) ಉದ್ಯೋಗಿಗಳ ತೀವ್ರ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ದೊಡ್ಡ ಪ್ರಮಾಣದಲ್ಲಿ ಭಾರತೀಯ ಕೌಶಲ್ಯಯುತ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗುತ್ತಿರುವುದು ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಬಹುದು ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್‌ಟ್ರೀ ಸಂಸ್ಥಾಪಕ ರಿತೇಶ್ ಜೈನ್ Ritesh Jain ಅವರು ಈ […]
ಕೊನೆಗೂ ಬಿಜೆಪಿಗೆ ಗುಡ್‌ಬೈ ಹೇಳಿದ ಕೆ. ಅಣ್ಣಾಮಲೈ, ರಾಜೀನಾಮೆ ಅಂಗೀಕಾರ

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿದೆ. ಇದರೊಂದಿಗೆ ಬಿಜೆಪಿಯೊಂದಿಗಿನ ಅವರ ಆರು ವರ್ಷಗಳ ಸುದೀರ್ಘ ಸಂಬಂಧಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಜೂನ್ 2ರಂದು ಅಣ್ಣಾಮಲೈ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆಯ ನಂತರವೂ ಅವರು ಬಿಜೆಪಿಯಲ್ಲೇ ಮುಂದುವರಿಯಲಿದ್ದಾರೆ ಹಾಗೂ […]
ಪ್ರಪಂಚದ ಮೂಲೆ ಮೂಲೆಗೂ ವಿಮಾನ ಸೌಲಭ್ಯ ಹೊಂದಿರುವ ಭಾರತದ ಏಕೈಕ ಏರ್‌ಪೋರ್ಟ್ ಇದು!

ಭಾರತದ ವಾಯುಯಾನ ಕ್ಷೇತ್ರ ಕಳೆದ ಕೆಲವು ವರ್ಷಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದರ ಪ್ರತಿಬಿಂಬ ದೇಶದ ಆಧುನಿಕ ವಿಮಾನ ನಿಲ್ದಾಣಗಳಲ್ಲೂ ಕಾಣಿಸುತ್ತಿದೆ. ಒಂದು ಕಾಲದಲ್ಲಿ ಕೆಲವೇ ಮಹಾನಗರಗಳಿಗೆ ಸೀಮಿತವಾಗಿದ್ದ ವಿಮಾನ ಸೇವೆಗಳು, ಇದೀಗ ಸಣ್ಣ ನಗರಗಳಿಗೂ ವಿಸ್ತರಿಸುತ್ತಿವೆ. ಸರ್ಕಾರದ ಉಡಾನ್ ಯೋಜನೆ, ಹೊಸ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಿಂದ ಭಾರತ ಇಂದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಈ ಬೆಳವಣಿಗೆಯ ನಡುವೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೆಹಲಿ Indira Gandhi International […]
ಅಫ್ಘಾನಿಸ್ತಾನ ಸರಣಿಯಿಂದ ವಿರಾಟ್ ಕೊಹ್ಲಿ ಔಟ್! ಭಾರತಕ್ಕೆ ಭಾರಿ ಆಘಾತ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಗಾಯದ ಸಮಸ್ಯೆಯಿಂದಾಗಿ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಜೂನ್ 13 ರಿಂದ ಜೂನ್ 20 ರವರೆಗೆ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಬೇಕಾಗಿದ್ದು, ಕೊಹ್ಲಿ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.ಆರ್‌ಸಿಬಿ ಫೈನಲ್ ಪಂದ್ಯದ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯ!ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರ ರೋಚಕ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಟೈಟನ್ಸ್ ವಿರುದ್ಧ 156 ರನ್‌ಗಳ ಗುರಿಯನ್ನು ಬೆನ್ನಟ್ಟಿ, […]