“ಕ್ಷಮಿಸಿ ಅಪ್ಪಾ… ನನಗೆ ನೀಟ್ ಮರುಪರೀಕ್ಷೆ ಬರೆಯಲಾಗುವುದಿಲ್ಲ” ಡೆತ್ ನೋಟ್ ನೊಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಧ್ಯಪ್ರದೇಶ: ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಮಗನಿಯಾ ಗ್ರಾಮದ ವಿದ್ಯಾರ್ಥಿನಿ ಆಕಾಂಕ್ಷಾ ಚತುರ್ವೇದಿ ದುರಂತವಾಗಿ ಮೃತಪಟ್ಟ ಘಟನೆ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ವೈದ್ಯೆಯಾಗುವ ಕನಸು ಹೊತ್ತಿದ್ದ ವಿದ್ಯಾರ್ಥಿನಿ, ಮರುಪರೀಕ್ಷೆ ಬರೆಯಬೇಕಾದ ಒತ್ತಡ ಮತ್ತು ಭವಿಷ್ಯದ ಅನಿಶ್ಚಿತತೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳೆಂದು ಕುಟುಂಬದವರು ತಿಳಿಸಿದ್ದಾರೆ. ಆಕಾಂಕ್ಷಾ ಇತ್ತೀಚಿನ ನೀಟ್ ಪರೀಕ್ಷೆಯಲ್ಲಿ ಸುಮಾರು 650 ಅಂಕಗಳನ್ನು ಪಡೆಯುವ ವಿಶ್ವಾಸ ಹೊಂದಿದ್ದಳು. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಪರೀಕ್ಷೆ ರದ್ದತಿ ಹಾಗೂ ಮರುಪರೀಕ್ಷೆಯ […]
ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ

ಮಂಗಳೂರು: ಜೂನ್ ತಿಂಗಳಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆ ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ನಾಲ್ಕು ವಾರಗಳ ಕಾಲ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ರೈಲು ಸಂಖ್ಯೆ 07097 ಹೈದರಾಬಾದ್–ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಜೂನ್ 3ರಿಂದ 24ರವರೆಗೆ ಪ್ರತಿ ಬುಧವಾರ ಸಂಚರಿಸಲಿದ್ದು, ಹೈದರಾಬಾದ್‌ನಿಂದ ಬೆಳಗ್ಗೆ 4:20ಕ್ಕೆ ಹೊರಟು ಮರುದಿನ ಬೆಳಗ್ಗೆ 9:30ಕ್ಕೆ ಮಂಗಳೂರು ತಲುಪಲಿದೆ. ಮರಳಿ ರೈಲು ಸಂಖ್ಯೆ 07098 ಮಂಗಳೂರು–ಹೈದರಾಬಾದ್ ವಿಶೇಷ ಎಕ್ಸ್‌ಪ್ರೆಸ್ ಜೂನ್ 4ರಿಂದ 25ರವರೆಗೆ […]
ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

ಮಂಗಳೂರು: ಕೇಂದ್ರ ಸರ್ಕಾರದ ಬರ ಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ ನೀಡುವುದು ಕಡ್ಡಾಯವಾಗಿದೆ. ಇದರ ನಂತರವಷ್ಟೇ ಕೇಂದ್ರದ ರೈತ ಐಡಿ ಸೃಜನೆಯಾಗುತ್ತದೆ. ಇನ್ನು ಕೆಲವೇ […]
ಷೇರು ಹೂಡಿಕೆ ಹೆಸರಲ್ಲಿ ₹6.80 ಕೋಟಿ ವಂಚನೆ; ನಿವೃತ್ತ ಉದ್ಯೋಗಿಗೆ ಟೋಪಿ ಹಾಕಿದ ವಂಚಕರು!

ಮುಂಬೈ: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಗಳಿಸಿಕೊಡುವುದಾಗಿ ನಂಬಿಸಿ ಸೈಬರ್ ವಂಚಕರು 59 ವರ್ಷದ ವ್ಯಕ್ತಿಯೊಬ್ಬರಿಗೆ ₹6.80 ಕೋಟಿ ವಂಚಿಸಿರುವ ಘಟನೆ ದಕ್ಷಿಣ ಮುಂಬೈನ ಟಾರ್ಡಿಯೊ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಲಂಡನ್ ಮೂಲದ ಹಣಕಾಸು ಸಂಸ್ಥೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ಈ ವಂಚನೆ ನಡೆಸಲಾಗಿದೆ. ಜಾಲತಾಣದಲ್ಲಿ ಪ್ರಕಟವಾದ ಹೂಡಿಕೆ ಜಾಹೀರಾತನ್ನು ನೋಡಿ ನಿವೃತ್ತ ಉದ್ಯೋಗಿಯೊಬ್ಬರು ವಂಚಕರು ರಚಿಸಿದ್ದ ವಾಟ್ಸಪ್ ಗುಂಪಿಗೆ ಸೇರಿದ್ದರು. ಈ ಗುಂಪಿನ ಮೂಲಕ ಹೂಡಿಕೆ ಸಲಹೆಗಳನ್ನು ನೀಡಲಾಗುತ್ತಿದ್ದು, ಸಂಸ್ಥೆಯ ಮೂಲಕ ಹೂಡಿಕೆ […]
ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ, ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಸೂಚನೆ!

ನವದೆಹಲಿ: ಕಳೆದ ಕೆಲವು ದಿನಗಳಿಂದ ತಮಿಳುನಾಡು ಬಿಜೆಪಿ ನಾಯಕ ಕೆ ಅಣ್ಣಾಮಲೈ K. Annamalai ಅವರು ಬಿಜೆಪಿ ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇದೀಗ ಅಧಿಕೃತ ರೂಪ ಸಿಕ್ಕಿದೆ. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರು ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಾಹಿತಿಯ ಪ್ರಕಾರ, ಅಣ್ಣಾಮಲೈ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ Nitin Nabin ಅವರಿಗೆ ಐದು ಪುಟಗಳ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ […]