3ನೇ ಬಾರಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ.

ನವದೆಹಲಿ: ಇಂದು ಭಾನುವಾರ ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು, ಸತತ ಮೂರನೇ ಅವಧಿಗೆ ದೇಶದ ಪ್ರಧಾನವಾಗಿ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿಗಳುು ಪ್ರಮಾಣವಚನ ಬೋಧಿಸಿದಿರು. ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು […]
ಗುಜರಾತ್: ರಾಜ್‌ಕೋಟ್’ನ ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ, 24 ಮಂದಿ ಸಾವು.

ಗುಜರಾತ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಪ್ಪತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದವರನ್ನು ರವಾನಿಸಲಾಗಿದೆ. ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಟಿಆರ್‌ಪಿ ಗೇಮಿಂಗ್ ಝೋನ್‌ಗೆ ಅಧಿಕಾರಿಗಳಿಂದ ಅಗತ್ಯ ಅಗ್ನಿ ಸುರಕ್ಷತಾ ಕ್ಲಿಯರೆನ್ಸ್ ಇಲ್ಲದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಟಿಆರ್‌ಪಿ ಆಟದ ವಲಯದ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ರಾಜ್‌ಕೋಟ್ ನಗರ ಪೊಲೀಸ್ ಕಮಿಷನರ್ ಭಾರ್ಗವ ತಿಳಿಸಿದ್ದಾರೆ.
ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಪ್ರಮಾಣ ವಚನ

ಮಾಸ್ಕೋ: ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ (Russian President) ವ್ಲಾಡಿಮಿರ್ ಪುಟಿನ್ (Vladimir Putin) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ರೆಮ್ಲಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಪುಟಿನ್ ಪ್ರಮಾಣ ವಚನ ಸ್ವೀಕರಿಸಿದರು. ಅವರು ಮುಂದಿನ 6 ವರ್ಷಗಳ ಅವಧಿಗೆ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1999ರಿಂದ ಪುಟಿನ್ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಖಂಡಿಸಿ ಯುನೈಟೆಡ್ ಸ್ಟೇಟ್ಸ್ ಹಾಗೂ ಹಲವು ಪಶ್ಚಿಮಾತ್ಯ ದೇಶಗಳು ಈ ಸಮಾರಂಭವನ್ನು ಬಹಿಷ್ಕರಿಸಿತ್ತು. ಕಳೆದ ಮಾರ್ಚ್ 15ರಿಂದ 17ರವರೆಗೆ ನಡೆದ ಸಾರ್ವತ್ರಿಕ […]
ಮೂರನೇ ಹಂತದ ಮತದಾನ: ಗಾಂಧಿನಗರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆಯ 3 ನೇ ಹಂತದ ಮತದಾನ ಮಂಗಳವಾರ ಆರಂಭವಾಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಅಹಮದಾಬಾದ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಇಂದು ಮೂರನೇ ಹಂತದ ಮತದಾನ. ನಮ್ಮ ದೇಶದಲ್ಲಿ ‘ದಾನ’ಕ್ಕೆ ಹೆಚ್ಚಿನ ಮಹತ್ವವಿದ್ದು, ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ಇನ್ನೂ 4 ಸುತ್ತಿನ ಮತದಾನ ಬಾಕಿ ಇದೆ” ಎಂದರು. ಗುಜರಾತಿನ ಮತದಾರನಾಗಿ ನಾನು ನಿಯಮಿತವಾಗಿ ಮತ ಚಲಾಯಿಸುವ ಏಕೈಕ […]
ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತೀಯ ಪುರುಷರ ರಿಲೇ ತಂಡ

ನವದೆಹಲಿ: ಮುಹಮ್ಮದ್ ಅನಾಸ್, ಯಾಹಿಯಾ, ಮುಹಮ್ಮದ್ ಅಜ್ಮಲ್, ಅರೋಕಿಯಾ ರಾಜೀವ್ ಮತ್ತು ಅಮೋಸ್ ಜಾಕೋಬ್ ಅವರನ್ನೊಳಗೊಂಡ ಭಾರತದ ಪುರುಷರ 4×400 ಮೀ ರಿಲೇ ತಂಡವು ಒಲಿಂಪಿಕ್ ಕ್ರೀಡಾಕೂಟದ ಅರ್ಹತೆಯಲ್ಲಿ 2 ನೇ ಸ್ಥಾನದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದೆ.