ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನಕ್ಕೆ ಹೋಗುವವರಿಗೆ ಸಲಹೆ ಸೂಚನೆ ಬಿಡುಗಡೆಗೊಳಿಸಿದ ಟ್ರಸ್ಟ್: ಹೋಗುವ ಮುನ್ನ ಇವುಗಳನ್ನು ಗಮನದಲ್ಲಿಡಿ

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರ ಗಮನಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಲಹೆ ಸೂಚನೆಗಳನ್ನು ಹೊರಡಿಸಿದೆ. ಅವು ಇಂತಿವೆ

ಚೀನಾದ ರೆಸ್ಟೋರೆಂಟ್‌ನಲ್ಲಿ ಸ್ಫೋಟ: ಓರ್ವ ಮೃತ್ಯು, 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಚೀನಾದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿ, 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಚೀನಾದ ನಗರವೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, ಹೆಬೈ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜಧಾನಿ ಬೀಜಿಂಗ್‌ನಿಂದ ಪೂರ್ವಕ್ಕೆ 50 ಕಿಮೀಗಿಂತ ಕಡಿಮೆ ದೂರದಲ್ಲಿರುವ ಸಾನ್ಹೆ ನಗರದ ವಸತಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಚಿಕನ್ ಅಂಗಡಿಯಲ್ಲಿ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ನಂಬಲಾಗಿದೆ. 36 ಆಂಬ್ಯುಲೆನ್ಸ್‌ಗಳು ಮತ್ತು 154 ತುರ್ತು ಸೇವೆಗಳು ಘಟನಾ […]

ಪೌರತ್ವ (ತಿದ್ದುಪಡಿ) ಕಾಯ್ದೆ 2019: ಮಾರ್ಗಸೂಚಿ ಪ್ರಕಟ; ಕಾನೂನಿನಲ್ಲಿ ಏನೇನಿದೆ ತಿಳಿದುಕೊಳ್ಳಿ

ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆ 2019- (CAA) ಈ ಮಸೂದೆಯು 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಗಿದೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಧಾರ್ಮಿಕ ಉತ್ಪೀಡನೆಯ ಕಾರಣದಿಂದ ಪಲಾಯನಗೈದ ಹಿಂದೂ, ಸಿಖ್, ಜೈನ, ಪಾರ್ಸಿ, ಬೌದ್ದ ಹಾಗೂ ಕ್ರಿಶ್ಚಿಯನ್ ಮುಂತಾದ ಅಲ್ಪಸಂಖ್ಯಾತ ಸಮುದಾಯದ ಸಂತ್ರಸ್ತರಿಗೆ ಭಾರತೀಯ ಪೌರತ್ವವನ್ನು ನೀಡುವ ಮಸೂದೆ ಇದಾಗಿದೆ. ಹೊಸ ನಿಯಮಗಳನ್ನು ಜಾರಿಗೆ ತರುವ ಮೊದಲು, ಭಾರತದಲ್ಲಿ ಪೌರತ್ವವನ್ನು ಈ ಹಿಂದಿನ ಪೌರತ್ವ ಕಾಯಿದೆ, 1955 ರ ಮೂಲಕ ನಿಯಂತ್ರಿಸಲಾಗುತ್ತಿತ್ತು. ಈ […]

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ; ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಕೇಂದ್ರ ಸರ್ಕಾರ ಸೋಮವಾರ ಸಂಜೆ ಘೋಷಿಸಿತು. ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಗೆ ಡಿಸೆಂಬರ್ 2019 ರಲ್ಲಿ ಸಂಸತ್ತು ಅನುಮೋದನೆ ನೀಡಿತ್ತು. ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದ ಪೀಡಿತ ಅಲ್ಪ ಸಂಖ್ಯಾತ ಹಿಂದೂಗಳು ದಶಕಗಳಿಂದ ಭಾರತದಲ್ಲಿ ಶರಣಾರ್ಥಿಗಳಾಗಿದ್ದು ಇಂಥವರಿಗೆ ಭಾರತೀಯ ಪೌರತ್ವ ನೀಡುವ ಕಾನೂನು ಇದಾಗಿದೆ. 1950 ರಲ್ಲಿ ಸಿ ಎ ಎ ಕಾನೂನು ಜಾರಿಗೊಳಿಸಲಾಗಿದ್ದರೂ ಕಳೆದ ಕೆಲವು ದಶಕಗಳಿಂದ ಶರಣಾರ್ಥಿಗಳಿಗೆ ಪೌರತ್ವ ನೀಡಲಾಗಿರಲಿಲ್ಲ. ಮೋದಿ ಸರ್ಕಾರ 2019 ರಲ್ಲಿ ಕಾನೂನಿಗೆ […]

ಕುನೋ ಉದ್ಯಾನದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಆಫ್ರಿಕಾ ಚಿರತೆ ಗಾಮಿನಿ

ಭೋಪಾಲ್: ದಕ್ಷಿಣ ಆಫ್ರಿಕಾದ ತ್ಸ್ವಾಲು ಕಲಹರಿ ಮೀಸಲು ಪ್ರದೇಶದಿಂದ ತರಲಾದ ಸುಮಾರು 5 ವರ್ಷ ಪ್ರಾಯದ ಹೆಣ್ಣು ಚಿರತೆ ಗಾಮಿನಿ 5 ಮರಿಗಳಿಗೆ ಜನ್ಮ ನೀಡಿದೆ. ಇದು ಭಾರತದಲ್ಲಿ ಜನಿಸಿದ ಮರಿಗಳ ಸಂಖ್ಯೆಯನ್ನು 13 ಕ್ಕೆ ಏರಿಸಿದೆ. ಇದು ಕಳೆದ ಕೆಲವು ತಿಂಗಳಲ್ಲಿ ಮರಿ ಇಟ್ಟ ನಾಲ್ಕನೇ ಪ್ರಕರಣವಾಗಿದೆ.