18 ಶೇಖರಣಾ ಘಟಕಗಳು ಬೆಂಕಿಗಾಹುತಿ: ತೈಲ ಸಂಸ್ಕರಣ ಸ್ಥಳದಲ್ಲಿ ಭಾರಿ ಸ್ಫೋಟ

ಟೆಹ್ರಾನ್(ಇರಾನ್)​: ಪೂರ್ವ ಇರಾನ್‌ನ ಬಿರ್ಜಾಂಡ್ ವಿಶೇಷ ಆರ್ಥಿಕ ವಲಯದಲ್ಲಿರುವ ತೈಲ ಸಂಸ್ಕರಣಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿದೆ.ಈಗ ಸಂಸ್ಕರಣಾಗಾರದ ಎಲ್ಲಾ 18 ಶೇಖರಣಾ ಘಟಕಗಳು ಬೆಂಕಿಗೆ ಆಹುತಿಯಾಗಿವೆ. ನಿರಂತರ ಸ್ಫೋಟದಿಂದಾಗಿ ರಕ್ಷಣಾ ತಂಡಗಳು ತಾತ್ಕಾಲಿಕವಾಗಿ ಸ್ಥಳದಿಂದ ದೂರ ಸರಿದಿವೆ.ಇರಾನ್‌ನ ತೈಲ ಸಂಸ್ಕರಣ ಘಟಕದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡಿದೆ. ಸ್ಫೋಟದ ತೀವ್ರತೆ ಹೆಚ್ಚಾಗ್ತಿದ್ದು, ರಕ್ಷಣಾ ತಂಡಗಳು ಸ್ಥಳದಿಂದ ಹೊರಬಂದಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚಿನ ದಿನಗಳಲ್ಲಿ ಇರಾನ್ ಸ್ಥಾವರಗಳಲ್ಲಿ ಸ್ಫೋಟಗಳು ಮತ್ತು […]

ಸಿಯಾಚಿನ್ ಗ್ಲೇಸಿಯರ್‌ನ 15 ಸಾವಿರ ಅಡಿ ಎತ್ತರದಲ್ಲಿ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿ ನಿಯೋಜನೆಗೊಂಡ ಕ್ಯಾ. ಫಾತಿಮಾ ವಾಸಿಮ್

ನವದೆಹಲಿ: ಉತ್ತರ ಭಾರತದ ಸಿಯಾಚಿನ್ ಗ್ಲೇಸಿಯರ್ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾಗಿದೆ.ಇದು ಇಂಡೋ-ಪಾಕ್ ನಿಯಂತ್ರಣ ರೇಖೆಯ ಸಮೀಪದಲ್ಲಿದೆ. ಇದರ ಎತ್ತರ 20,062 ಅಡಿ. ಭಾರತದ ಅತಿದೊಡ್ಡ ಮತ್ತು ವಿಶ್ವದ ಎರಡನೇ ಅತಿದೊಡ್ಡ ಹಿಮನದಿ ಇಲ್ಲಿ ಹರಿಯುತ್ತದೆ. ಈಗ ದೇಶದ ಹೆಣ್ಣು ಮಕ್ಕಳನ್ನೂ ಸಿಯಾಚಿನ್‌ನಲ್ಲಿ ನಿಯೋಜಿಸಲಾಗುತ್ತಿದೆ. ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಕಾರ್ಯಾಚರಣೆ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಿಳಾ ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ಸಿಯಾಚಿನ್ ಗ್ಲೇಸಿಯರ್‌ನಲ್ಲಿ […]

ಛತ್ತೀಸ್‌ಗಢದ ಮೊದಲ ಬುಡಕಟ್ಟು ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ: ಮಧ್ಯಪ್ರದೇಶ ಹಾಗೂ ರಾಜಸ್ಥಾನ ಮು.ಮಂ. ಘೋಷಣೆ ಶೀಘ್ರ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ವೀಕ್ಷಕರು ಮಧ್ಯಪ್ರದೇಶದ ಭೋಪಾಲ್‌ಗೆ ತಲುಪಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ರಾಜ್ಯಕ್ಕೆ ಮುಖ್ಯಮಂತ್ರಿ ಹೆಸರನ್ನು ನಿರ್ಧರಿಸಲು ಸಭೆ ನಡೆಯಲಿದೆ. ರಾಜಸ್ಥಾನ ಸಿಎಂ ಬಗ್ಗೆಯೂ ಕುತೂಹಲ ಮುಂದುವರಿದಿದ್ದು, ನಾಳೆ ಬಿಜೆಪಿ ಸಭೆ ನಡೆಯಲಿದೆ. ಮಧ್ಯಪ್ರದೇಶದ ಬಿಜೆಪಿ ವೀಕ್ಷಕರು, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಬಿಜೆಪಿ ಸಂಸದ ಕೆ ಲಕ್ಷ್ಮಣ್ ಅವರು ಭೋಪಾಲ್‌ನಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದರು. ಅವರನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬರಮಾಡಿಕೊಂಡರು. ರಕ್ಷಣಾ ಸಚಿವ […]

ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದತಿಗೆ ಸುಪ್ರೀಂ ಮೊಹರು: 370 ನೇ ವಿಧಿ ತಾತ್ಕಾಲಿಕ ನಿಬಂಧನೆ; ಶೀಘ್ರವೆ ಚುನಾವಣೆ ನಡೆಸಿ ಎಂದ ಮುಖ್ಯ ನ್ಯಾಯಮೂರ್ತಿಗಳು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಲಾಗಿದ್ದು, ಇಂದು ಸರ್ವೋಚ್ಛ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. 370 ನೇ ವಿಧಿ ತಾತ್ಕಾಲಿಕ ನಿಬಂಧನೆಯಾಗಿದೆ. ರಾಷ್ಟ್ರಪತಿ ಆಳ್ವಿಕೆಯಲ್ಲಿ ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಸಿಜೆಐ ಚಂದ್ರಚೂಡ್ ಸೋಮವಾರ ತಮ್ಮ ತೀರ್ಪನ್ನು ಓದುವಾಗ ಹೇಳಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ […]

ಕಾಂಗ್ರೆಸ್ ಸಂಸದರ ಅಕ್ರಮ ಹಣ ಪ್ರಕರಣ: ಮುಗಿದ ಎಣಿಕೆ ಕಾರ್ಯ; 353 ಕೋಟಿ ರೂ ಮೊತ್ತದ ಅಕ್ರಮ ಹಣ ಪತ್ತೆ

ನವದೆಹಲಿ: ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ಪತ್ತೆಯಾದ ಅಪಾರ ಹಣದ ಮೊತ್ತವು ಭಾನುವಾರದಂದು 353 ಕೋಟಿ ರೂ ತಲುಪಿದ್ದು, ಅಂತಿಮವಾಗಿ ಎಣಿಕೆ ಕೊನೆಗೊಂಡಿದೆ. ಬುಧವಾರ, ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಸಂಸದರ ಮನೆಯ ಕಪಾಟಿನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಕಳೆದ ಕೆಳವು ದಿನಗಳಿಂದ ನೋಟುಗಳ ಎಣಿಕೆ ಕಾರ್ಯವು ನಡೆದಿತ್ತು. ಈ ಮಧ್ಯೆ ಎಸ್‌ಬಿಐ ಶಾಖೆಯ ಕಾರ್ಯಾಚರಣೆ ಹಾಗೂ ನೋಟು ಎಣಿಸುವ ಯಂತ್ರಗಳು ಕೆಟ್ಟು ನಿಂತದ್ದರಿಂದ ಹಣ ಎಇಸುವ ಕಾರ್ಯಕ್ಕೆ […]