ಸೌಜನ್ಯ ಪ್ರಕರಣ ಮರುತನಿಖೆಗೆ ಶಶಿಕುಮಾರ್ ಐಪಿಎಸ್ ನೇತೃತ್ವದ SIT ರಚನೆ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್ ಅವರನ್ನು ಎಸ್.ಐ.ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್. ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್ ಜಲಸಾಗರ್ ಐ.ಪಿ.ಎಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ […]
ಶಬರಿಮಲೆ ದೇವಸ್ಥಾನದಲ್ಲಿ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆ!ಬದಲಿಗೆ ನಕಲಿ ಕಿರೀಟ ಪತ್ತೆ!

ಶಬರಿಮಲೆ: ಶಬರಿಮಲೆ ದೇವಸ್ಥಾನದ ಪವಿತ್ರ ಆಭರಣಗಳ ಪರಿಶೀಲನೆ ವೇಳೆ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆಯಾಗಿರುವುದು ಹಾಗೂ ಅದರ ಬದಲಿಗೆ ನಕಲಿ ಕಿರೀಟವನ್ನು ಇರಿಸಿರುವುದು ಪತ್ತೆಯಾಗಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ನ್ಯಾಯಮೂರ್ತಿ ಕೆ.ಟಿ. ಶಂಕರನ್ ನೇತೃತ್ವದ ಸಮಿತಿ ದೇವಸ್ಥಾನದ ತಿರುವಾಭರಣಗಳ ಎಣಿಕೆ ಮತ್ತು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಕಿರೀಟದ ವಿಚಾರ ಬೆಳಕಿಗೆ ಬಂದಿದೆ. ಮೂಲ ಕಿರೀಟದ ಬದಲಿಗೆ ಕಡಿಮೆ ಮೌಲ್ಯದ ವಸ್ತುಗಳಿಂದ ತಯಾರಿಸಲಾದ ನಕಲಿ ಕಿರೀಟವನ್ನು ಇರಿಸಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ. 2012ರಲ್ಲಿ […]
ಬ್ಯಾಂಕ್ ಮುಷ್ಕರ ಹಿನ್ನೆಲೆ, ಸೆ.27 ಭಾನುವಾರವೂ ಓಪನ್ ಇರಲಿದೆ ಬ್ಯಾಂಕ್!

ನವದೆಹಲಿ: ಸೆ.28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರವೂ ಬ್ಯಾಂಕ್‌ಗಳು ಕಾರ್ಯನಿರ್ವಹಿಸಲಿವೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆ.28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೂ ಮುನ್ನ ಸೆ.26 ಮತ್ತು 27ರಂದು ವಾರಾಂತ್ಯದ ರಜೆ ಇರುವುದರಿಂದ ಗ್ರಾಹಕರ ಬ್ಯಾಂಕಿಂಗ್ ಅಗತ್ಯತೆಗಳಿಗೆ ತೊಂದರೆಯಾಗದಂತೆ ಸೆ.27ರಂದು ಬ್ಯಾಂಕ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕರ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ಸತತವಾಗಿ […]
ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ – ಟ್ರಂಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ!

ವಾಷಿಂಗ್ಟನ್: ಫ್ಲೋರಿಡಾದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ (G20 Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಡಿಸೆಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಜಿ-20 ಶೃಂಗಸಭೆಯು ಡಿಸೆಂಬರ್ 14 ಮತ್ತು 15 ರಂದು ಫ್ಲೋರಿಡಾದಲ್ಲಿ ನಡೆಯಲಿದೆ. ಜಿ-20 ಸಭೆಯ ಅಂಗವಾಗಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳನ್ನ ಒಳಗೊಂಡ ಕ್ವಾಡ್ ನಾಯಕರ ಶೃಂಗಸಭೆಯನ್ನು ನಡೆಸುವ ಕುರಿತೂ ಸಿದ್ಧತೆಗಳು ನಡೆಯುತ್ತಿವೆ. ಈ ಭೇಟಿ ವೇಳೆ ʻಕ್ವಾಡ್ʼ (Quad) ನಾಯಕರ ಸಭೆಯಲ್ಲಿ […]
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ: ಪತ್ನಿ, ಪುತ್ರ ನಾಪತ್ತೆ; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಶಾರ್ಜಾದಲ್ಲಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ ಕುಂದರ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಕಳೆದ ಜುಲೈ ತಿಂಗಳಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.ಪ್ರಕಾಶ್ ಅವರು ಪತ್ನಿ ಟೀನಾ ಹಾಗೂ ಅಪ್ರಾಪ್ತ ಪುತ್ರನೊಂದಿಗೆ ಶಾರ್ಜಾದಲ್ಲಿ ನೆಲೆಸಿದ್ದರು. ಶಾರ್ಜಾ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ಜುಲೈ 20ರ ಸುಮಾರಿಗೆ ಸಹೋದರ ಪ್ರಶಾಂತ್ ಕುಂದರ್ ಅವರನ್ನು ಸಂಪರ್ಕಿಸಲು ಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಪ್ರಕಾಶ್, ಈ ಬಾರಿ […]