ಪೂರ್ವ ಕರಾವಳಿಯತ್ತ ಮುನ್ನುಗ್ಗುತ್ತಿರುವ ‘ಮೈಚಾಂಗ್’ ಚಂಡಮಾರುತ; ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ

ಚೆನ್ನೈ: ‘ಮೈಚಾಂಗ್’ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪುದುಚೇರಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಡಿ.4 ರಂದು ಕರೈಕಾಲ್ ಮತ್ತು ಯಾಣಂ ಪ್ರದೇಶಗಳಲ್ಲಿ ಶಾಲಿಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ಚೆನ್ನೈ, ತೆಂಕಶಿ, ತೂತುಕುಡಿ, ತಿರುನಲ್ವೇಲಿ, ಕನ್ನಿಯಕುಮಾರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ, ವಿಲ್ಲುಪುರಂ, ರಾಣಿಪೇಟ್, ಕಡಲೂರು, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ, ತಿರುವರೂರ್, ರಾಮನಾಥಪುರಂ, ತಿರುಪುರ್, […]
ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ : 2028ರಲ್ಲಿ ಆಯೋಜನೆಯ ಪ್ರಸ್ತಾಪ ಮಾಡಿದ ಭಾರತ

ದುಬೈ: ಜನರ ಸಹಭಾಗಿತ್ವದ ಮೂಲಕ ಕಾರ್ಬನ್ ಸಿಂಕ್‌ಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುವ ಗ್ರೀನ್ ಕ್ರೆಡಿಟ್ ಇನಿಶಿಯೇಟಿವ್ ಪ್ರಾರಂಭಿಸಲಾಗುತ್ತದೆ ಎಂದು ಪ್ರಧಾನಿ ತಿಳಿಸಿದರು.2028ರಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಅಥವಾ ಕಾಪ್33 (COP-33) ಸಮ್ಮೇಳನವನ್ನು ಭಾರತದಲ್ಲಿ ಆಯೋಜಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಭಾರತದಲ್ಲಿ 2028ರ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಅಥವಾ ಕಾಪ್33 (COP-33) ಸಮ್ಮೇಳನವನ್ನು ಆಯೋಜಿಸುವ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನದಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಮತ್ತು ಸರ್ಕಾರಗಳ […]
ಕೇಂದ್ರ ಸರ್ಕಾರ ಆರೋಪ : ಭಾರತ ವಿರೋಧಿ ಚಟುವಟಿಕೆಗಳಿಗೆ ಕೆನಡಾ ನಿರಂತರ ಅವಕಾಶ

ನವದೆಹಲಿ: ‘ಭಾರತ ವಿರೋಧಿ ಚಟುವಟಿಕೆಗಳಿಗೆ ಕೆನಡಾ ನಿರಂತರವಾಗಿ ಅವಕಾಶ ಮಾಡಿಕೊಡುತ್ತಿದೆ’ ಎಂದು ಆರೋಪಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಚಾರವಾಗಿ ಭಾರತದ ಜೊತೆ ರಾಜತಾಂತ್ರಿಕ ಸಂಬಂಧಗಳಿಗೆ ಧಕ್ಕೆ ತಂದುಕೊಂಡಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ಕೇಂದ್ರ ಸರ್ಕಾರ ಮತ್ತೊಮ್ಮೆ ವಾಗ್ದಾಳಿ ನಡೆಸಿದೆ. ಕೆನಡಾ ವಿರುದ್ಧ ಭಾರತ ಸರ್ಕಾರ ಗಂಭೀರ ಆರೋಪ ಮಾಡಿದೆ. ಆ ದೇಶದಲ್ಲಿ ಭಾರತ ವಿರುದ್ಧದ ಉಗ್ರ ಕೃತ್ಯಗಳಿಗೆ ಸರ್ಕಾರವೇ ಅವಕಾಶ ನೀಡುತ್ತಿದೆ ಎಂದು ಟೀಕಿಸಿದೆ. ಇಡೀ ವಿಶ್ವವೇ ಭಯೋತ್ಪಾದನೆಯ ವಿರುದ್ಧ […]
ಅಗ್ನಿ ದುರಂತದಲ್ಲಿ ಏಳು ಕಾರ್ಮಿಕರು ಸಾವು: ಮೃತರ ಕುಟುಂಬಗಳಿಗೆ 50 ಲಕ್ಷ ಪರಿಹಾರ ಘೋಷಿಸಿದ ಕಂಪನಿ

ಗುಜರಾತ್‌ನ ಸೂರತ್ ನಗರದ ಈಥರ್ ಇಂಡಸ್ಟ್ರೀಸ್ ಲಿಮಿಟೆಡ್‌ನ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಏಳು ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಸೂರತ್ (ಗುಜರಾತ್): ಗುಜರಾತ್‌ನ ಸೂರತ್ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿ, ಏಳು ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಇನ್ನೂ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಕಂಪನಿಯು ತಲಾ 50 ಲಕ್ಷ ರೂ. ಹಾಗೂ ಗಾಯಾಳುಗಳ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಇಲ್ಲಿನ ಸಚಿನ್ ಜಿಐಡಿಸಿ […]
ಕಾಂಗ್ರೆಸ್ ಮೇಲುಗೈ : ರಾಜಸ್ಥಾನದಲ್ಲಿ ಬಿಜೆಪಿ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ

ನವದೆಹಲಿ:ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಭವಿಷ್ಯ ನುಡಿಯಲಾಗಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ.ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.