ಭಾರತೀಯರಿಗೆ ಅತ್ಯಧಿಕ ಲಾಭ : 5 ಲಕ್ಷ ವಲಸಿಗರಿಗೆ ವೀಸಾ ನೀಡಲಿದೆ ಕೆನಡಾ

ಟೊರೊಂಟೊ: 2024-26ರ ವಲಸೆ ಯೋಜನೆಗಳನ್ನು ಅನಾವರಣಗೊಳಿಸಿದ ವಲಸೆ, ನಿರಾಶ್ರಿತರು ಮತ್ತು ಪೌರತ್ವ ಸಚಿವ ಮಾರ್ಕ್ ಮಿಲ್ಲರ್, 2026ರಿಂದ ವಲಸೆ ಮಟ್ಟವನ್ನು 5,00,000ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದರು.2023ರ ವೇಳೆಗೆ ಕೆನಡಾ ತನ್ನ ದೇಶದೊಳಗೆ 4,85,000 ಹೊಸ ವಲಸಿಗರಿಗೆ ಪ್ರವೇಶಾವಕಾಶ ಕಲ್ಪಿಸಲಿದ್ದು, 2025ರ ವೇಳೆಗೆ ಈ ಸಂಖ್ಯೆಯನ್ನು 5,00,000ಕ್ಕೆ ಹೆಚ್ಚಿಸಲು ಅದು ಯೋಜಿಸಿದೆ.ಕೆನಡಾ 2025ರ ವರ್ಷದಲ್ಲಿ ತನ್ನ ದೇಶದೊಳಗೆ 5 ಲಕ್ಷ ವಲಸಿಗರನ್ನು ಬರಮಾಡಿಕೊಳ್ಳಲಿದೆ. ಕಳೆದ ವರ್ಷ 1,18,000 ಕ್ಕೂ ಹೆಚ್ಚು ಭಾರತೀಯರು ಕೆನಡಿಯನ್ ಪರ್ಮನೆಂಟ್ ರೆಸಿಡೆನ್ಸಿ (ಪಿಆರ್) ಯನ್ನು […]
ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಅರವಿಂದ್ ಕೇಜ್ರಿವಾಲ್ ನಕಾರ

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಕೇಜ್ರಿವಾಲ್ ಇಡಿಗೆ ಪತ್ರ ಬರೆದಿದ್ದು, ತನಿಖಾ ಸಂಸ್ಥೆಯು ವಿಚಾರಣೆಗೆ ಕರೆದಿರುವ ತನ್ನ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಕರೆಸಿತ್ತು. […]
ಮಣಿಪುರದ ಮೋರೆಹ ಗಡಿ ಪಟ್ಟಣದಲ್ಲಿ ಉಗ್ರರ ಗುಂಡಿಗೆ ಎಸ್‌ಡಿಪಿಒ ಬಲಿ

ಇಂಫಾಲ (ಮಣಿಪುರ): ಶಂಕಿತ ಬುಡಕಟ್ಟು ಉಗ್ರಗಾಮಿಗಳ ಗುಂಡಿಗೆ ಉಪವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಣಿಪುರದ ತೆಂಗನೌಪಾಲ್ ಜಿಲ್ಲೆಯ ಮೋರೆಹ ಎಂಬಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬುಲೆಟ್ ತಗುಲಿದ್ದ ಎಸ್‌ಡಿಪಿಒ ಚಿಂಗ್ತಮ್ ಆನಂದ್ ಅವರನ್ನು ಮೋರೆಹದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಶೇಷವಾಗಿ ಮೊರೆಹದಲ್ಲಿ ನೆಲೆಗೊಂಡಿರುವ ಹಲವಾರು ನಾಗರಿಕ ಸಮಾಜ ಸಂಘಟನೆಗಳು ಗಡಿ ಪಟ್ಟಣದಿಂದ ರಾಜ್ಯ ಪಡೆಗಳನ್ನು ತೆಗೆದುಹಾಕಲು ಒತ್ತಾಯಿಸಿದ ವಾರದ ನಂತರ ಈ ಘಟನೆ ನಡೆದಿದೆ. ಮಣಿಪುರದ […]
ಭಾರತದಲ್ಲಿ ಶೇ 10ರಷ್ಟು ಹೆಚ್ಚಳ : ವಿಶ್ವದಲ್ಲಿ ಚಿನ್ನಕ್ಕೆ ಬೇಡಿಕೆ ಕುಸಿತ

ನವದೆಹಲಿ: 2023ರ ಮೂರನೇ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಚಿನ್ನದ ಬೇಡಿಕೆಯು ಶೇ 6ರಷ್ಟು ಕುಸಿದು 1,147.5 ಟನ್ಗಳಿಗೆ ತಲುಪಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ (ಡಬ್ಲ್ಯುಜಿಸಿ) ಮಂಗಳವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ಚಿನ್ನದ ಗಟ್ಟಿಗಳು ಮತ್ತು ನಾಣ್ಯಗಳ ಬೇಡಿಕೆ ಕಡಿಮೆಯಾಗಿರುವುದು ಮತ್ತು ಕೇಂದ್ರೀಯ ಬ್ಯಾಂಕುಗಳಿಂದ ಖರೀದಿ ಕಡಿಮೆಯಾದ ಹಿನ್ನೆಲೆಯಲ್ಲಿ ಚಿನ್ನಕ್ಕೆ ಬೇಡಿಕೆ ಇಳಿಮುಖವಾಗಿದೆ. 2023ರ ಮೂರನೇ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಚಿನ್ನದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕವಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳ ಬೇಡಿಕೆ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 14ರಷ್ಟು […]
ಶ್ರೀ ಸೋಮನಾಥ ಟ್ರಸ್ಟ್ ನ ಅಧ್ಯಕ್ಷರಾಗಿ ಪ್ರಧಾನಿ ಮೋದಿ ಮರು ಆಯ್ಕೆ: ಅಧಿಕಾರಾವಧಿ ಐದು ವರ್ಷಗಳಿಗೆ ಏರಿಕೆ

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೆರಾವಲ್ ಬಳಿಯ ಐತಿಹಾಸಕ ಮಾನ್ಯತೆ ಇರುವ ಸೋಮನಾಥ ದೇವಾಲಯದ ಮಾಲೀಕತ್ವವನ್ನು ಹೊಂದಿರುವ ಧಾರ್ಮಿಕ ಚಾರಿಟೇಬಲ್ ಟ್ರಸ್ಟ್ ಆದ ಶ್ರೀ ಸೋಮನಾಥ ಟ್ರಸ್ಟ್ (ಎಸ್‌ಎಸ್‌ಟಿ) ನ ಅಧ್ಯಕ್ಷರಾಗಿ ಐದು ವರ್ಷಗಳ ಕಾಲದವರೆಗೆ ಆಯ್ಕೆಯಾಗಿದ್ದಾರೆ. ಗುಜರಾತ್‌ನ ಚಾರಿಟಿ ಕಮಿಷನರ್ ಇತ್ತೀಚೆಗೆ ಟ್ರಸ್ಟ್‌ನ ಕರಾರು ಪತ್ರಕ್ಕೆ ತಿದ್ದುಪಡಿಯನ್ನು ಅನುಮೋದಿಸಿದ ನಂತರ, ಎಸ್‌ಎಸ್‌ಟಿ ಅಧ್ಯಕ್ಷರ ಅಧಿಕಾರಾವಧಿಯು ಒಂದು ವರ್ಷಕ್ಕೆ ಬದಲಾಗಿ ಐದು ವರ್ಷಗಳಾಗಿರುತ್ತದೆ ಎಂದು ಟ್ರಸ್ಟಿಗಳು ತಿಳಿಸಿದ್ದಾರೆ. ಸೋಮವಾರ ಗಾಂಧಿನಗರದ ರಾಜಭವನದಲ್ಲಿ ಕರೆಯಲಾದ ಎಸ್‌ಎಸ್‌ಟಿಯ ಟ್ರಸ್ಟಿಗಳ […]