ನಾಳೆ ಭಾರತ vs ನೇಪಾಳ ಪಂದ್ಯ, ಚಿನ್ನ ಗೆಲ್ಲುವತ್ತ IPL ಸ್ಟಾರ್ಗಳ ಚಿತ್ತ: ಏಷ್ಯನ್ ಗೇಮ್ಸ್

ಹ್ಯಾಂಗ್‌ಝೌ (ಚೀನಾ): ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ಮತ್ತು ಟಿ20 ಪಂದ್ಯಗಳನ್ನಾಡಿದ್ದು, ಒಂದು ಶತಕ ಮತ್ತು ಎರಡು ಅರ್ಧಶತಕದಿಂದ ಒಟ್ಟಾರೆ 7 ಅಂತರರಾಷ್ಟ್ರೀಯ ಪಂದ್ಯಗಳಿಂದ 398 ರನ್ ಕಲೆಹಾಕಿದ್ದಾರೆ. ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳನ್ನಾಡಿದ ರಿಂಕು ಸಿಂಗ್ಗೆ ಬ್ಯಾಟಿಂಗ್‌ನಲ್ಲಿ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. 19ನೇ ಏಷ್ಯಾಡ್ನಲ್ಲಿ ಭಾರತ ಕ್ರಿಕೆಟ್ ತಂಡ ಭಾಗವಹಿಸುತ್ತಿದ್ದು, ಚೊಚ್ಚಲ ಪ್ರಯತ್ನದಲ್ಲೇ ಚಿನ್ನ ಗೆಲ್ಲುವ ಭರವಸೆ ಇದೆ. ಏಷ್ಯಾಡ್ನಲ್ಲಿ ಅವರ ಬ್ಯಾಟ್ನಿಂದ ರನ್‌ಗಳನ್ನು ನಿರೀಕ್ಷಿಸಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಪ್ರೀಮಿಯರ್ […]
ಸ್ವಯಂಸೇವೆಯ ಭಾಗವಾಗಿ ಪಾತ್ರೆ ತೊಳೆದ ರಾಹುಲ್ ಗಾಂಧಿ ಗೋಲ್ಡನ್ ಟೆಂಪಲ್ಗೆ ಭೇಟಿ

ಅಮೃತಸರ (ಪಂಜಾಬ್) : ಕಾಂಗ್ರೆಸ್ ನಾಯಕ, ಲೋಕಸಭೆ ಸಂಸದ ರಾಹುಲ್ ಗಾಂಧಿ ಅವರು ಸೋಮವಾರ ಅಮೃತಸರದ ಪ್ರಸಿದ್ಧ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿ, ಸ್ವಯಂಸೇವೆಯ ಭಾಗವಾಗಿ ಭಕ್ತರು ಬಳಸಿದ ಪಾತ್ರೆಗಳನ್ನು ತೊಳೆದರು.ಇದಕ್ಕೂ ಮೊದಲು ಸಿಖ್ ಸಂಪ್ರದಾಯದಂತೆ ತಲೆಗೆ ನೀಲಿ ಬಣ್ಣದ ಬಟ್ಟೆ ಸುತ್ತಿ ದೇಗುಲದ ಗರ್ಭಗುಡಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಬಳಿಕ ಸಿಖ್ಖರ ಅತ್ಯುನ್ನತ ಸ್ಥಾನ ಅಕಾಲ್ ತಕ್ತ್ಗೆ ಭೇಟಿ ನೀಡಿದರು. ಇಂದು ರಾಹುಲ್ ಇಲ್ಲಿ ನಡೆಯುವ ಫಲ್ಕಿ ಸೇವಾದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಪಂಜಾಬ್ನ […]
ನಾಗ್ಪುರ-ಬೆಂಗಳೂರು ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಹಿನ್ನೆಲೆ : ಪ್ರಯಾಣಿಕನ ಬಂಧನ, ಬಿಡುಗಡೆ

ಬೆಂಗಳೂರು: ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದರು.ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಘಟನೆ ಸೆಪ್ಟೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಪೊಲೀಸರ ಪ್ರಕಾರ, ಪ್ರಯಾಣಿಕ ಸ್ವಪ್ನಿಲ್ ಹೋಲೆ ವಿಮಾನದ ತುರ್ತು ನಿರ್ಗಮನ ಬಾಗಿಲಿನ ಪಕ್ಕದಲ್ಲಿ ಕುಳಿತಿದ್ದ. ಟೇಕ್‌ಆಫ್‌ಗೆ ಮುನ್ನ ವಿಮಾನ ಸಿಬ್ಬಂದಿ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದಾಗ, ಸ್ವಪ್ನಿಲ್ ಎಮರ್ಜೆನ್ಸಿ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಯಾಕಾಗಿ ಆತ ಹೀಗೆ ವರ್ತಿಸಿದ ಎಂಬ […]
ಭಾರತದ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಜಿಂಬಾಬ್ವೆಯಲ್ಲಿ ವಿಮಾನ ಅಪಘಾತ ಸಾವು

ಜೊಹಾನಸ್‌ಬರ್ಗ್:ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿಯ ಸಮೀಪ ಖಾಸಗಿ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಭಾರತೀಯ ಗಣಿ ಉದ್ಯಮಿ ಹರ್ಪಾಲ್ ರಾಂಧವಾ ಮತ್ತು ಅವರ 22 ವರ್ಷದ ಪುತ್ರ ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಘಟನೆ ಸೆ.29ರಂದು ನಡೆದಿದ್ದು, ಇಂದು ವರದಿಯಾಗಿದೆ.ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಭಾರತದ ಗಣಿ ಉದ್ಯಮಿ, ಅವರ ಪುತ್ರ ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಜಿಂಬಾಬ್ವೆಯಲ್ಲಿ ಸಂಭವಿಸಿದೆ. ಮೃತಪಟ್ಟವರಲ್ಲಿ ನಾಲ್ವರು ವಿದೇಶಿಯರು ಮತ್ತು ಇತರ ಇಬ್ಬರು ಜಿಂಬಾಬ್ವೆಯವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ […]
NIAಯ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದ ದೆಹಲಿ ಪೊಲೀಸ್

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಭಯೋತ್ಪಾದನಾ ನಿಗ್ರಹ ದಳದ ದೊಡ್ಡಕಾರ್ಯಾಚರಣೆಯ ವೇಳೆ ದೆಹಲಿಯಲ್ಲಿ ಬಂಧಿಸಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ರಾಷ್ಟ್ರ ರಾಜಧಾನಿಯ ಅಡಗುತಾಣದಿಂದ ಬಂಧಿಸಿದೆ. ದೆಹಲಿ ಪೊಲೀಸರ ವಿಶೇಷ ಸೆಲ್ NIA ಯೊಂದಿಗೆ ಸಹಕರಿಸಿದೆ. ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್‌ಗಳೆಂದು ಶಂಕಿಸಲಾದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ […]