ನಮ್ಮ ಆರ್ಥಿಕ ಹಿತಾಸಕ್ತಿ ರಕ್ಷಣೆಗಾಗಿ ರಷ್ಯಾದಿಂದ ತೈಲ ಖರೀದಿ – ಅಮೆರಿಕಕ್ಕೆ ಭಾರತ ತಿರುಗೇಟು

ನವದೆಹಲಿ: ನಮ್ಮ ವಾಣಿಜ್ಯ, ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ರಷ್ಯಾದಿಂದ(Russia) ತೈಲವನ್ನು ಖರೀದಿ ಮಾಡುತ್ತಿದ್ದೇವೆ ಎಂದು ಅಮೆರಿಕಕ್ಕೆ(USA) ಭಾರತ ತಿರುಗೇಟು ನೀಡಿದೆ. ರಷ್ಯಾದಿಂದ ಇಂಧನ ಖರೀದಿಸುವ ದೇಶಗಳ ಮೇಲೆ ಶೇ.100 ರಷ್ಟು ಆಮದು ಸುಂಕ ವಿಧಿಸಲು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಅಧಿಕಾರ ನೀಡುವ ಮಸೂದೆಯನ್ನು ಅಮೆರಿಕ ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ತನ್ನ 140 ಕೋಟಿ ಜನರ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣ ಬದ್ಧವಾಗಿದೆ ಎಂದು ಭಾರತ(India) ದೃಢವಾಗಿ ಪುನರುಚ್ಚರಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ […]

ಕನ್ನಡಕ್ಕೆ ಒಲಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ,ಅನಂತ್ ನಾಗ್‌ ಸಾಧನೆಗೆ ಕನ್ನಡಿಗರು ಸಖತ್ ಖುಷ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ–2024’ ಘೋಷಿಸಲಾಗಿದೆ. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಈ ಗೌರವ ಸಂದಿದೆ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾ ನಗರ (ಕೆವಾಡಿಯಾ)ದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಘೋಷಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಅನಂತ್ ನಾಗ್ ಅವರಿಗೆ […]

ಪಾನ್ ಮಸಾಲಾ ವಿವಾದ: ಶಾರುಖ್, ಅಜಯ್, ಟೈಗರ್‌ಗೆ ಸದ್ಯಕ್ಕಿಲ್ಲ ರಿಲೀಫ್ !ಅರ್ಜಿ ವಜಾ ಮಾಡಿದ ಹೈಕೋರ್ಟ್!

ನವದೆಹಲಿ: ಪಾನ್ ಮಸಾಲಾ ಜಾಹೀರಾತು ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ನೀಡಿದ್ದ ಶೋಕಾಸ್ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಈ ವಿಷಯವು ದೆಹಲಿ ಹೈಕೋರ್ಟ್‌ನ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ. ಅರ್ಜಿ ಸಲ್ಲಿಸಿದ್ದು ನಟರಲ್ಲ! […]

ರೂ.2,000 ವರೆಗಿನ UPI ಪಾವತಿಗೆ ಯಾವುದೇ ಶುಲ್ಕವಿಲ್ಲ ಹಣಕಾಸು ಸಚಿವಾಲಯ ಹೊಸ ಅಧಿಸೂಚನೆ!

ನವದೆಹಲಿ: ₹2,000ವರೆಗಿನ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವಹಿವಾಟುಗಳಿಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದೇ ರೀತಿ, ₹2,000ವರೆಗಿನ ರುಪೇ (RuPay) ಚಾಲಿತ ಡೆಬಿಟ್ ಕಾರ್ಡ್ ಪಾವತಿಗಳಿಗೂ ಶುಲ್ಕ ವಿಧಿಸುವಂತಿಲ್ಲ ಎಂದು ಹಣಕಾಸು ಸಚಿವಾಲಯದ ಗೆಜೆಟ್ ಅಧಿಸೂಚನೆ ತಿಳಿಸಿದೆ. ಪಾವತಿ ಮತ್ತು ವಸಾಹತು ವ್ಯವಸ್ಥೆಗಳ ಕಾಯ್ದೆ, 2007ರ ಸೆಕ್ಷನ್ 10A ಅಡಿ ಕೇಂದ್ರ ಸರ್ಕಾರ ಈ ಎಲೆಕ್ಟ್ರಾನಿಕ್ ಪಾವತಿ ವಿಧಾನಗಳನ್ನು ನಿರ್ದಿಷ್ಟಪಡಿಸಿದೆ. UPI ಮೂಲಕ ₹2,000ವರೆಗಿನ ವಹಿವಾಟು ಹಾಗೂ ರುಪೇ ಡೆಬಿಟ್ ಕಾರ್ಡ್ […]

ನಮ್ಮದು 2 ಸಾವಿರ ಕೋಟಿ ವಹಿವಾಟು, 2 ಕೋಟಿ ದೊಡ್ಡ ವಿಚಾರವೇ ಅಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು ನಮ್ಮ ಸಂಸ್ಥೆಗಳ ವಾರ್ಷಿಕ ವಹಿವಾಟು 2,000 ಕೋಟಿ ರೂ.ಗೂ ಅಧಿಕವಿದೆ. ಹೀಗಿರುವಾಗ ಸಿಕ್ಕಿದೆ ಎನ್ನಲಾದ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ Satish Jarkiholi ಹೇಳಿದ್ದಾರೆ. ತಮ್ಮ ಹಾಗೂ ತಮ್ಮ ಕುಟುಂಬಸ್ಥರಿಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಯ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಾಗೂ ದಾಳಿಯ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು […]