ವಿಶ್ವ ಮಾಧ್ಯಮಗಳಲ್ಲಿ ಭಾರತದ ಗುಣಗಾನ : G20 ಶೃಂಗಸಭೆ ಯಶಸ್ಸು

ನವದೆಹಲಿ: G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ. ಭಾರತದ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಜಾಗತಿಕ ಪತ್ರಿಕೆಗಳಲ್ಲಿ ಪ್ರಶಂಸೆಯ ಸುರಿಮಳೆಯೇ ಹರಿದು ಬಂದಿದೆ. ಹಲವು ವಿಶ್ವ ಮಾಧ್ಯಮಗಳು ಭಾರತದ ನೇತೃತ್ವ ಹಾಗೂ ಒಮ್ಮತ ಮೂಡಿಸುವಲ್ಲಿ ಯಶಸ್ವಿಯಾದ ಬಗೆಯನ್ನು ಗುಣಗಾನ ಮಾಡಿವೆ. .ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಕಾಳಜಿ ವಹಿಸುವಲ್ಲಿ ಭಾರತದ ಅಧ್ಯಕ್ಷತೆ ಜಿ-20 ಶೃಂಗಸಭೆ ಯಶಸ್ವಿಯಾಗಿದೆ. ಎಲ್ಲ ಅಭಿವೃದ್ಧಿ ಮತ್ತು ಭೌಗೋಳಿಕ ಹಾಗೂ ರಾಜಕೀಯ ವಿಷಯಗಳ ಬಗ್ಗೆ 100 ಪ್ರತಿಶತದಷ್ಟ ಒಮ್ಮತ […]
ಯುಎಸ್ ಓಪನ್: 24 ನೇ ಗ್ರ್ಯಾನ್‌ಸ್ಲಾಮ್ ಗೆದ್ದು ಇತಿಹಾಸ ರಚಿಸಿದ ನೊವಾಕ್ ಜೊಕೊವಿಕ್

2008 ರ ಆಸ್ಟ್ರೇಲಿಯನ್ ಓಪನ್‌ನಲ್ಲಿ ನೊವಾಕ್ ಜೊಕೊವಿಕ್ ಅವರ ಮೊದಲ ಗ್ರ್ಯಾಂಡ್ ಸ್ಲಾಮ್ ವಿಜಯ ಹದಿನೈದು ವರ್ಷಗಳ ಬಳಿಕವೂ ಹತ್ತಾರು ಆಟಗಾರರ ಸವಾಲುಗಳ ಮಧ್ಯೆಯೂ ಈ ಆಟದಲ್ಲಿ ತಮ್ಮ ಹಿಡಿತವನ್ನು ಸಡಿಲಗೊಳಿಸುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಡೇನಿಯಲ್ ಮೆಡ್ವೆಡೆವ್ ಅವರನ್ನು ಮಣಿಸಿದ 36 ವರ್ಷದ ನೊವಾಕ್ ಯುಎಸ್ ಓಪನ್ ನಲ್ಲಿ ತನ್ನ 24ನೇ ಗ್ರ್ಯಾಂಡ್ ಸ್ಲಾಮ್ ಗೆದ್ದು ಇತಿಹಾಸ ರಚಿಸಿದ್ದಾರೆ. ನೋವಾಕ್ ಯುವ ಪೀಳಿಗೆಯ ಎದುರಾಳಿಗಳೊಂದಿಗೆ ದೈಹಿಕವಾಗಿ ಸೆಣಸಾಡಿದ್ದಾರೆ ಮಾತ್ರವಲ್ಲದೆ ಯುದ್ಧತಂತ್ರದಿಂದ ಅವರನ್ನು ಸಂಪೂರ್ಣವಾಗಿ ಸೋಲಿಸಿದ್ದಾರೆ. ಅವರು […]
ಮುಂದಿನ G20 ಶೃಂಗಸಭೆಗೆ ಬ್ರೆಜಿಲ್ ತಯಾರು: ಅಧ್ಯಕ್ಷ ಸ್ಥಾನ ಹಸ್ತಾಂತರಿಸಿದ ಪ್ರಧಾನಿ ಮೋದಿ

ನವದೆಹಲಿ: ಇಲ್ಲಿ ನಡೆದ ಎರಡು ದಿನಗಳ ಶೃಂಗಸಭೆಯ ಎರಡನೇ ದಿನವಾದ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಜಿ 20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಹಸ್ತಾಂತರಿಸಿದರು. ಬ್ರೆಜಿಲ್ ಅಧಿಕೃತವಾಗಿ ಈ ವರ್ಷದ ಡಿಸೆಂಬರ್ 1 ರಂದು ಗಣ್ಯ ಗುಂಪಿನ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. ಪ್ರಧಾನಿ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಿಗೆ ಸುತ್ತಿಗೆಯನ್ನು ಹಸ್ತಾಂತರಿಸುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿ, “ನಾನು […]
ವಿಯೆಟ್ನಾಂಗೆ ತೆರಳಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ನವದೆಹಲಿ : ಜಿ20 ಸಮ್ಮೇಳನದಲ್ಲಿ ಪಾಲ್ಗೊಂಡ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ವಿಯೆಟ್ನಾಂ ಪ್ರವಾಸ ಕೈಗೊಂಡರು. ದ್ವಿಪಕ್ಷೀಯ ಮಾತುಕತೆ ವೇಳೆ ಭಾರತ ಮತ್ತು ಯುಎಸ್ ನಡುವೆ ಮತ್ತಷ್ಟು ಬಾಂಧವ್ಯ ವೃದ್ಧಿಸಲು ಆರ್ಥಿಕ, ಸಾರ್ವಜನಿಕ ಸಂಪರ್ಕ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಗಿತ್ತು. ಭಾರತ ಮತ್ತು ಯುಎಸ್ ನಡುವಿನ ಸ್ನೇಹವು ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ. ಉಭಯ ದೇಶಗಳ ನಾಯಕರು ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಒಳಗೊಳ್ಳುವಿಕೆ ಸೇರಿದಂತೆ ಎಲ್ಲಾ ನಾಗರಿಕರಿಗೆ ಸಮಾನ […]
ಶೇ 7ರಷ್ಟು ಮಾರುಕಟ್ಟೆ ಪಾಲು ಪಡೆದ ಆಯಪಲ್ : ಭಾರತೀಯರಲ್ಲಿ ಹೆಚ್ಚುತ್ತಿದೆ ಐಫೋನ್ ಒಲವು

ನವದೆಹಲಿ: ಭಾರತದಲ್ಲಿ ಐಫೋನ್ಗಳ ಜನಪ್ರಿಯತೆ ಹೆಚ್ಚಾಗುತ್ತಿದ್ದು, ಆಯಪಲ್ ತನ್ನ ಮಾರುಕಟ್ಟೆ ಪಾಲನ್ನು ಹೆಚ್ಚಿಸಿಕೊಳ್ಳುತ್ತಿದೆ.ಈಗ ಭಾರತದಲ್ಲೇ ತನ್ನ ಸ್ಮಾರ್ಟ್ಫೋನ್ಗಳನ್ನು ತಯಾರಿಸುತ್ತಿರುವ ಆಯಪಲ್ ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಶೇ 7ರಷ್ಟು ಪಾಲು ಪಡೆಯುವತ್ತ ಮುನ್ನಡೆದಿದೆ. ವರ್ಷದ ಮೊದಲಾರ್ಧದಲ್ಲಿ ಆಯಪಲ್ ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಶೇಕಡಾ 6 ರಷ್ಟು ಮಾರುಕಟ್ಟೆ ಪಾಲನ್ನು ಪಡೆದುಕೊಂಡಿದೆ ಮತ್ತು ಸೂಪರ್-ಪ್ರೀಮಿಯಂ ಸ್ಮಾರ್ಟ್ಫೋನ್ ವಿಭಾಗದಲ್ಲಿ (50,000-100,000 ರೂ.ಗಳ ನಡುವೆ ಬೆಲೆ) ಪ್ರಾಬಲ್ಯ ಸಾಧಿಸಿದೆ ಎಂದು ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಸೈಬರ್ ಮೀಡಿಯಾ ರಿಸರ್ಚ್ (ಸಿಎಂಆರ್) ಅಂಕಿ ಅಂಶಗಳು […]