ಉಡುಪಿ ಪುತ್ತಿಗೆ ಪರ್ಯಾಯೋತ್ಸವ: ಜ.8ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ, ಪೌರಸನ್ಮಾನ
ಉಡುಪಿ: ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಸುಗುಣೇಂದ್ರತೀರ್ಥ ಶ್ರೀಪಾದರ ಹಾಗೂ ಸುಶ್ರೀಂದ್ರತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರಸನ್ಮಾನ ಕಾರ್ಯಕ್ರಮ ಜನವರಿ 8ರ ಸೋಮವಾರ ಸಂಜೆ 7 ಗಂಟೆಗೆ ಉಡುಪಿ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ ನಡೆಯಲಿದೆ ಎಂದು ಪರ್ಯಾಯ ಸಮಿತಿಯ ಅಧ್ಯಕ್ಷ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಉಡುಪಿಯ ಪುತ್ತಿಗೆ ಮಠದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳು ಜನವರಿ 18ರಂದು ತಮ್ಮ ಶಿಷ್ಯ […]
ಪರ್ಯಾಯ ಶ್ರೀಪಾದರಿಂದ “ಕೋಟಿ ತುಳಸಿ ಅರ್ಚನೆ” ಯ ಕರಪತ್ರ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ.

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯ ಹಾಗೂ ಅನುಜ್ಞೆಯ ಮೇರೆಗೆ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಭಾ ಕಡಿಯಾಳಿ ಶಾಖೆಯ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಬ್ರಾಹ್ಮಣ ಸಮುದಾಯದ ಸಹಾಯ ಸಹಕಾರದೊಂದಿಗೆ ಉಡುಪಿಯ ರಾಜಾಂಗಣದಲ್ಲಿ ಡಿ.31 ರವಿವಾರದಂದು ನಡೆಯಲಿರುವ ಋಕ್ಮಿಣೀಕರಾರ್ಚಿತ ಶ್ರೀಕೃಷ್ಣನಿಗೆ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ “ಕೋಟಿ ತುಳಸಿ ಅರ್ಚನೆ”ಯ ಆಮಂತ್ರಣ ಪತ್ರಿಕೆ ಹಾಗೂ ಈ ಬಗ್ಗೆ ಶ್ರೀಮಠದಿಂದ ಪ್ರಕಟಿತ ಮನವಿಯ ಕರಪತ್ರವನ್ನು ಪರ್ಯಾಯ ಮಠದ ಪರಮ […]
ನಾಳೆ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಅನ್ನಸಂತರ್ಪಣೆ

ಕಾಪು: ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಜರಗುವ ಚಂಡಿಕಾಯಾಗ ಪೂರ್ಣಾಹುತಿಯು ಅ. 31ರಂದು ನಡೆಯಲಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಾರ್ಥನೆ, 11.30ಕ್ಕೆ ಚಂಡಿಕಾಯಾಗ ಪೂರ್ಣಾಹುತಿ, ಮಧ್ಯಾಹ್ನ 12ಗಂಟೆಗೆ ಅನ್ನಸಂತರ್ಪಣೆ, ಸಂಜೆ 3ಗಂಟೆಗೆ ದರ್ಶನ ಸೇವೆ ನಡೆಯಲಿದೆ ಎಂದು ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸಾದ್ ಜಿ. ಶೆಣೈ ಮತ್ತು ಕಾಪು ಪೇಟೆಯ ಹತ್ತು ಸಮಸ್ತರ ಜಂಟಿ ಪ್ರಕಟನೆ ತಿಳಿಸಿದೆ
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಸರಾ ವೈಭವದ ಶೋಭಾಯಾತ್ರೆ: ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿ

ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹತ್ತು ದಿನಗಳ ಕಾಲ ಜರಗಿದ ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಜರಗಿದ ವೈಭವದ ಶೋಭಾ ಯಾತ್ರೆಗೆ ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್ ಮಂಗಳವಾರ ಸಂಜೆ ಗಣ್ಯರ ಜೊತೆಗೂಡಿ ಚಾಲನೆ ನೀಡಿದರು. ಪ್ರಧಾನ ಅರ್ಚಕ ವೇ| ಮೂ|ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಗೆ ಮಹಾ ಮಂಗಳಾರತಿ ಬೆಳಗಿ, ವಿಸರ್ಜನಾ ಪೂಜೆ ನಡೆಸಿದರು. ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ […]
ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.24ರಂದು ವಿಜಯದಶಮಿ ಆಚರಣೆ.

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾವಿರಾರು ಮಂದಿ ಭಕ್ತರು ದೇಗುಲಕ್ಕೆ ಆಗಮಿಸಿ, ದೇವರ ಪ್ರಸಾದವನ್ನು ಪಡೆದರು. ಶ್ರೀ ಕ್ಷೇತ್ರದಲ್ಲಿ ಅ.23ರಂದು ರಾತ್ರಿ ಶಾರದಾ ವಿಸರ್ಜನೆ, ಕನ್ನಿಕಾ ಪೂಜೆ, ಮಹಾಮಂತ್ರಾಕ್ಷತೆ ಹಾಗೂ ಅ.24ರಂದು ವಿಜಯದಶಮಿ ಆಚರಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ|ಕಟ್ಟೆರವಿರಾಜ ವಿ. ಆಚಾರ್ಯ ತಿಳಿಸಿದ್ದಾರೆ.