ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ನಾಗಮಂಡಲ ಹೊರೆಕಾಣಿಕೆ ಸಮರ್ಪಣೆ.
ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಪಂಚಮೀಕಾನು ನಾಗ ಸನ್ನಿಧಿಯಲ್ಲಿ ಎ.13ರಿಂದ 19ರ ತನಕ ನಡೆಯಲಿರುವ ಸಮಗ್ರ ಜೀರ್ಣೋದ್ಧಾರಾಂಗ ಪುನಃ ಪ್ರತಿಷ್ಠಾಪನಾ ಮಹೋತ್ಸವ, ನಾಗಮಂಡಲ ಪ್ರಯುಕ್ತ ರವಿವಾರ ಹೊರೆಕಾಣಿಕೆ ಸಮರ್ಪಣೆ ಭವ್ಯ ಮೆರವಣಿಗೆಯಿಂದ ಜರಗಿತು. ಕುಂಜಾಲಿನ ನೀಲಾವರ ಕ್ರಾಸ್ ನಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ರಘುರಾಮ ಮಧ್ಯಸ್ಥ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ವಿಶ್ವನಾಥ ಶೆಟ್ಟಿ ಮಟಪಾಡಿ, ಅನೂಪ್ ಕುಮಾರ್ ಶೆಟ್ಟಿ, ಹೇಮ ವಿ. ಬಾಬ್ರಿ, ಕೆ. ತಮ್ಮಯ್ಯ […]
ಕಾಪು ಹಳೇ ಮಾರಿಯಮ್ಮ ಕಾಲಾವಧಿ ಸುಗ್ಗಿ ಜಾತ್ರಾ ಮಹೋತ್ಸವ- ರಜತ ರಥೋತ್ಸವ ವೈಭವ
ಕಾಪು: ಇಲ್ಲಿನ ಹಳೇ ಮಾರಿಯಮ್ಮ ಗುಡಿಯಲ್ಲಿ ಕಾಲಾವಧಿ ಸುಗ್ಗಿ ಜಾತ್ರಾ ಮಹೋತ್ಸವ ಜರಗಿದ್ದು, ರಜತ ರಥೋತ್ಸವ ವೈಭವದಿಂದ ನಡೆಯಿತು.
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ
ಉಡುಪಿ: ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನ ಪರ್ಕಳ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕ ರಥೋತ್ಸವ ಮಾ.25 ರಂದು ಜರಗಿತು. ಅನ್ನ ಸಂತರ್ಪಣೆ, ಭಜನೆ, ಸ್ಯಾಕ್ಸೋಫೋನ್ ವಾದನ, ರಾತ್ರಿ ಶ್ರೀ ಮನ್ಮಹಾರಥೋತ್ಸವ, ಹಚ್ಚಡ ಸೇವೆ, ಚಂಡೆವಾದನ ನಡೆಯಿತು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪಿ. ರಾಮದಾಸ ಹೆಗ್ಡೆ ಸಂಚಾಲಕರಾದ ದಿಲೀಪ್ ರಾಜ್ ಹೆಗ್ಡೆ, ಮಹೇಶ ಠಾಕೂರ್, ಅಧ್ಯಕ್ಷ ಬಿ. ಜಯರಾಜ ಹೆಗ್ಡೆ, ಕಾರ್ಯಾಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗ್ಡೆ ಆತ್ರಾಡಿ, ಕೋಶಾಧಿಕಾರಿ ಸುಮಿತ್ರಾ ಆರ್. ನಾಯಕ್, […]
ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ
ಮಲ್ಪೆ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ 6.45ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಲಿರುವುದು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು. ಸುಮಾರು ೧೫ ಸಾವಿರ ಮಂದಿ […]
ಇಂದು ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮನ್ಮಹಾರಥೋತ್ಸವ
ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಮಹಿಷ ಮರ್ದಿನಿ ದೇವಿಯ ರಥೋತ್ಸವ ದಿ. 22 ರಿಂದ 27ರವರೆಗೆ ನಡೆಯಲಿದೆ. ಮಾ.25ರಂದು ಮಧ್ಯಾಹ್ನ 12ಕ್ಕೆ ರಥಾರೋಹಣ, ಅನ್ನಸಂತರ್ಪಣೆ, ಶ್ರೀ ದುರ್ಗಾದೇವಿ ಸಂಕೀರ್ತನ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಮನ್ಮಹಾರಥೋತ್ಸವ ನಡೆಯಲಿದೆ. ಹಾಗೂ ವೈವಿಧ್ಯಮಯ ಯಕ್ಷಗಾನ ವೇಷಗಳ ಮೆರವಣಿಗೆ, ಹಚ್ಚಡ ಸೇವೆ, ಉಂಡಾರು ಬಳಗದವರಿಂದ ಚಂಡೆ ವಾದನ ಹಾಗೂ ಸ್ಯಾಕ್ಸ್ ಫೋನ್ ಕಾರ್ಯಕ್ರಮಗಳು ನಡೆಯಲಿವೆ. ಮಾ.26ರಂದು ಬೆಳಗ್ಗೆ 7ಕ್ಕೆ ಕವಟೂದ್ಘಾಟನೆ, ತುಲಾಭಾರ ಸೇವೆ […]