ಉಡುಪಿ ಶ್ರೀ ಕೃಷ್ಣಮಠಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು   ಎ.19 ರಂದು ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಉಡುಪಿ ಜಿಲ್ಲಾ ಬಿ.ಜೆ.ಪಿ.ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ಕಾಪು ಶಾಸಕರಾದ ಲಾಲಾಜಿ ಮೆಂಡನ್, ಮುಖಂಡರಾದ ಉದಯಕುಮಾರ್ ಶೆಟ್ಟಿ, ಮಠದ ದಿವಾನರಾದ ವರದರಾಜ ಆಚಾರ್, ಪರ್ಯಾಯ ಸಮಿತಿಯ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವ ಸಂಪನ್ನ

ಪಡುಬಿದ್ರಿ: ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಶ್ರೀ ಮನ್ಮಹಾರಥೋತ್ಸವು ಏಪ್ರಿಲ್ 19 ರಂದು ಸಂಪನ್ನಗೊಂಡಿತು. ಬೆಳಿಗ್ಗೆ ರಥಾರೋಹಣ, ಬಳಿಕ ಮಹಾ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಛೇರಿ, ರಾತ್ರಿ ರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತಬಲಿ, ಶಯನೋತ್ಸವ ನಡೆಯಿತು. ಪರ್ಯಾಯ ತಂತ್ರಿ ವೇ.ಮೂ. ಬೆಟ್ಟಿಗೆ ವೆಂಕಟರಾಜ ತಂತ್ರಿ ಅವರ ಮಾರ್ಗದರ್ಶನದಲ್ಲಿ ಸರದಿ ಅರ್ಚಕರಾದ ವೇ.ಮೂ. ಶ್ರೀನಿವಾಸ ಭಟ್, ವೇ.ಮೂ. ವೆಂಕಟೇಶ ಭಟ್, ವೇ.ಮೂ. ಗುರುರಾಜ ಭಟ್ ಅವರ ಅರ್ಚಕತ್ವದಲ್ಲಿ ಪವಿತ್ರಪಾಣಿ ಕೆ.ಎಲ್. ಕುಂಡಂತಾಯ ಅವರ […]

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಉಡುಪಿ: ಮೇ ತಿಂಗಳಲ್ಲಿ ನಡೆಯಲಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಎ.18 ರಂದು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ ಭೇಟಿಯಾಗಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಶೋತ್ತಮ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ದೇವಳದ […]

ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ನಾಳೆ ಶ್ರೀ ಮನ್ಮಹಾರಥೋತ್ಸವ

ಪಡುಬಿದ್ರಿ: ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಎಲ್ಲೂರು ಇದರ ಜಾತ್ರಾ ಮಹೋತ್ಸವವು ಎಪ್ರಿಲ್ 21 ರ ವರೆಗೆ ಜರಗಲಿದೆ. ಶ್ರೀ ಮನ್ಮಹಾರಥೋತ್ಸವ: ತಾ.19 ರಂದು ಮಂಗಳವಾರ ಮಧ್ಯಾಹ್ನ 11.00ಕ್ಕೆ ರಥಾರೋಹಣ, ಶ್ರೀ ಮನ್ಮಹಾರಥೋತ್ಸವ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಚೇರಿ, ರಾತ್ರಿ 8:30ಕ್ಕೆ ರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತಬಲಿ, ಶಯನೋತ್ಸವ. ತಾ.20‌ ರಂದು ಬುಧವಾರ ಸೂರ್ಯೋದಯಕ್ಕೆ ಕವಾಟೋದ್ಘಾಟನೆ, ತುಲಾಭಾರ ಸೇವೆ, ಉತ್ಸವ ಬಲಿ, ಸಂಜೆ 6:30ಕ್ಕೆ ಅವಭೃತ ಹೊರಡುವುದು, ಅವಭೃತ, […]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ಅನ್ನ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ

ಕೊಲ್ಲೂರು: ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಭಕ್ತಾದಿಗಳು ಮಾತ್ರವಲ್ಲದೇ, ವಿದೇಶದಿಂದಲೂ ಭಕ್ತರೂ ಆಗಮಿಸುತ್ತಿದ್ದು, ಶ್ರೀ ಮೂಕಾಂಬಿಕೆಯ ದರ್ಶನ ಪಡೆಯುತ್ತಿದ್ದಾರೆ. ಕೊಲ್ಲೂರು ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದ್ದು, ಇಲ್ಲಿ ದೇವರಿಗೆ ಅರ್ಪಿಸುವ ನೈವೈದ್ಯ ಮತ್ತು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದೆ. ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಪ್ರಮಾಣ ಪತ್ರ […]