ಎ.15 ರಿಂದ 22: ನೀಲಾವರ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.20 ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ. ಎ.15 ರಂದು ಅಂಕುರಾರೋಪಣಾ, ಎಂ.16 ರಂದು ಧ್ವಜಾರೋಹಣ, ಸಿಂಹವಾಹನೋತ್ಸವ, ಭೇರಿತಾಡನ ಇತ್ಯಾದಿ, 17ರಂದು ಮಯೂರ ವಾಹನೋತ್ಸವ, 15ರಂದು ಹಂಸ ವಾಹನೋತ್ಸವ ಜರಗಲಿದೆ.ಎ.19ರಂದು ಗಜವಾಹನೋತ್ಸವ, 20ರಂದು ಬೆಳಿಗ್ಗೆ ರಥಾರೋಹಣ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ ರಥೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಡನ್ನು ಸುಭಿಕ್ಷಗೊಳಿಸಲು ಶಕ್ತಿ ಮೀರಿ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಉಡುಪಿ: ನಾಡನ್ನು ಮುನ್ನಡೆಸುವ ಅವಕಾಶ ದೊರೆತಿದೆ. ಭಗವಂತನಿಂದ ನಿಷ್ಠೆ ಪ್ರಾಮಾಣಿಕತೆ ಹಾಗೂ ವಿಶ್ವಾಸಕ್ಕೆ ಕುಂದುಬಾರದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹಾಗೂ ನಾಡನ್ನು ಸುಭಿಕ್ಷ ಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಇತ್ತರು. ಅವರು ಕುಂಜಿಬೆಟ್ಟಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಗದೇವತೆಗೆ ವಿಶಿಷ್ಟ ಸ್ಥಾನವಿದೆ. ಅತ್ಯಂತ ಸೌಮ್ಯ ಹಾಗೂ ಭಯಂಕರ. ಪೂಜೆ ಮಾಡಿದ್ರೆ ವರ ತೊಂದರೆ ಕೊಟ್ಟರೆ ಪ್ರಾಣ ತೆಗೆಯುವ ಶಕ್ತಿ ಇದೆ. ಇದರ […]

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ

ಉಡುಪಿ ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ದೇವರ ಆಶೀರ್ವಾದ ಪಡೆದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಪೂರ್ಣಕುಂಭದೊಂದಿಗೆ ಸಿಎಂರನ್ನು ಸ್ವಾಗತಿಸಲಾಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಶಾಸಕರಾದ ಲಾಲಾಜಿ ಮೆಂಡನ್, ಕರಾವಳಿ ಪ್ರಾಧಿಕಾರದ ಮಟ್ಟಾರ್ ರತ್ನಾಕರ ಹೆಗ್ಡೆ,ಬಿಜೆಪಿ […]

ಕನ್ನರ್ಪಾಡಿ ಶ್ರೀ ಜಯ ದುರ್ಗಾಪರಮೇಶ್ವರೀ ದೇವಸ್ಥಾನ: ಕೋಟಿ ಕುಂಕುಮಾರ್ಚನೆ ಮಂಗಲ

ಉಡುಪಿ: ಕನ್ನರ್ಪಾಡಿ ಶ್ರೀ ಜಯ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕುಂಭಾಭಿಷೇಕದ ಅಂಗವಾಗಿ ಪುತ್ತೂರು ವೇ.ಮೂ. ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಕೋಟಿ ಕುಂಕುಮಾರ್ಚನೆ ಸೇವೆಯ ಮಂಗಲೋತ್ಸವವು ನೆರವೇರಿತು. ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಅಧಿಕ ಭಕ್ತರು ಹಾಲು ಪಾಯಸ ಸಹಿತ ಅನ್ನಪ್ರಸಾದ ಸ್ವೀಕರಿಸಿದ್ದು, ಸಂಜೆ ಧಾರ್ಮಿಕ ಸಭೆ ನಡೆಯಿತು. ಮಧ್ಯಾಹ್ನ ಭಕ್ತಿ ಸಂಗೀತ, ಸಂಜೆ ತಾಳಮದ್ದಲೆ, ರಾತ್ರಿ ತುಳು ನಾಟಕ ಪ್ರದರ್ಶನ ಜರಗಿತು. ದೇಗುಲದ ಆಡಳಿತಾಧಿಕಾರಿ ಡಾ. ರೋಶನ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್. […]

ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ಸಂಪನ್ನ

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಸನ್ನಿಧಾನದಲ್ಲಿ ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಭಾನುವಾರ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನೆರವೇರಿತು. ಆ ಬಳಿಕ ನೂತನವಾಗಿ ನಿರ್ಮಾಣಗೊಂಡ ಶಿಲಾಮಯ ನಾಗದೇವರ ಸನ್ನಿಧಿಗೆ ಸುವರ್ಣ ಶಿಖರ ಪ್ರತಿಷ್ಠೆ ನಡೆಯಿತು.ಮಧ್ಯಾಹ್ನ ಅಲಂಕಾರ ಪೂಜೆ, ಮಹಾಪೂಜೆ ನೆರವೇರಿತು. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮೂರು ಸಾವಿರಕ್ಕೂ ಅಧಿಕ ಮಂದಿ ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.