ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಪಾಮ್ ಸಂಡೆ ಆಚರಣೆ

ಉಡುಪಿ: ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಬಾರ್ಕೂರಿನ ಸಂತ ಪೀಟರ್ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು. ಈ ವೇಳೆ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಫಿಲಿಪ್ ನೆರಿ ಆರಾನ್ಹಾ, ಅತಿಥಿ ಧರ್ಮಗುರು ವಂ| ಚಾರ್ಲ್ಸ್ ಸಲ್ಡಾನಾ ಉಪಸ್ಥಿತರಿದ್ದರು. ಉಡುಪಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರು […]
ಉಡುಪಿ ಕೃಷ್ಣಮಠಕ್ಕೂ ಮಹಾಲಕ್ಷ್ಮೀ ಸನ್ನಿಧಾನಕ್ಕೂ ಅವಿನಾಭಾವ ಸಂಬಂಧವಿದೆ: ಪುತ್ತಿಗೆ ಶ್ರೀ

ಉಡುಪಿ: ಉಡುಪಿ ಶ್ರೀಕೃಷ್ಣ ಸನ್ನಿಧಾನ ಹಾಗೂ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ಸನ್ನಿಧಾನಗಳು ಪರಸ್ಪರ ಅಂತಃ ಸಂಬಂಧವುಳ್ಳ ಸನ್ನಿಧಾನಗಳಾಗಿದೆ. ಹಾಗಾಗಿ ಲಕ್ಷ್ಮೀದೇವಿ ಇಲ್ಲಿ ತನ್ನ ವೈಭವವನ್ನು ಮೆರೆದಿದ್ದಾಳೆ. ದೇಗುಲದ ಬ್ರಹ್ಮಕಲಶೋತ್ಸವವು ಡಾ| ಜಿ. ಶಂಕರ್ ಅವರಿಂದ ಆದರ್ಶಪ್ರಾಯವಾಗಿ ನಡೆದಿದೆ ಎಂದು ಉಡುಪಿ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸನ್ನಿಧಾನದ ಬ್ರಹ್ಮಕಲಶೋತ್ಸವ ಪುಣ್ಯೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. […]
ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಎ.11ರಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ತರಬೇತಿ ಶಿಬಿರ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ, ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಆರೋಗ್ಯ ರಕ್ಷಣೆ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಎಪ್ರಿಲ್ 11ರಿಂದ ಬೆಳಿಗ್ಗೆ 5.00ರಿಂದ 6.30ರ ವರೆಗೆ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗಳು ನಡೆಯಲಿವೆ. ಎಪ್ರಿಲ್ 10 ರವಿವಾರ ಬೆಳಿಗ್ಗೆ 10.00ಕ್ಕೆ ಉಚಿತ ಯೋಗ ಶಿಕ್ಷಣ […]
ಸಗ್ರಿ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ; ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪುತ್ತಿಗೆ ಶ್ರೀ ಚಾಲನೆ

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂದ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಅಂಗವಾಗಿ ಆಯೋಜಿಸಿರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಶುಕ್ರವಾರ ಚಾಲನೆ ನೀಡಿದರು. ಶಾಸಕ ಕೆ. ರಘುಪತಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಆನೆಗುಡ್ಡೆ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸೂರ್ಯನಾರಾಯಣ ಉಪಾಧ್ಯ, ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ಸಾಮಗ, ಉಡುಪಿ ನಗರ ಸಭೆಯ […]
ಎ.9: ನೀರೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ 42ನೇ ವರ್ಷದ ಭಜನಾ ಮಂಗಲೋತ್ಸವ

ಬೈಲೂರು: ಕಾರ್ಕಳ ತಾಲೂಕಿನ ನೀರೆ ಜಡ್ಡಿನಂಗಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ 42ನೇ ವರ್ಷದ ಭಜನಾ ಮಂಗಲೋತ್ಸವ ಎ.9 ಶನಿವಾರ ಸಂಜೆ ಗಂಟೆ 6 ಗೋಧೂಳಿ ಮುಹೂರ್ತದಲ್ಲಿ ನೀರೆ ಜಡ್ಡಿನಂಗಡಿಯಲ್ಲಿ ನಡೆಯಲಿದೆ. ಸಂಜೆ 6 ರಿಂದ ಭಜನೆ ಪ್ರಾರಂಭವಾಗಿ ಭಾನುವಾರ ಮುಂಜಾನೆ ಗಂಟೆ 4:30 ರ ತನಕ ಭಜನಾ ಮಂಗಲೋತ್ಸವ ವಿವಿಧ ಮಂಡಳಿಗಳಿಂದ ನಡೆಯಲಿದ್ದು, ಸರ್ವರಿಗೂ ಆದರದ ಸ್ವಾಗತ ಕೋರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.