ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ: ಎ.2 ರಿಂದ ಗ್ರಾಮ ಭಜನೆ

ಉಡುಪಿ: ಉಡುಪಿ ಜಿಲ್ಲೆಯ 1400 ವರ್ಷ ಇತಿಹಾಸ ಇರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಮಗ್ರ ಜೀರ್ಣೋದ್ದಾರಗೊಳ್ಳುತ್ತಿದ್ದು ಮೇ 3ರಿಂದ ಮೇ 10ರ ತನಕ ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ. ‌ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸಮಸ್ತ ಕಡಿಯಾಳಿ ಗ್ರಾಮದ ಮನೆ ಮನೆಗಳಲ್ಲಿ ‘ಗ್ರಾಮ ಭಜನೆ’ ಎಂಬ ವಿನೂತನ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 2 ಶನಿವಾರ ಚಂದ್ರಮಾನ ಯುಗಾದಿಯ ಪರ್ವ ಕಾಲದಲ್ಲಿ ಸಂಜೆ 4 ಗಂಟೆಗೆ ಕಾಣಿಯೂರು ಮಠಾದೀಶರಾದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ. ಈ […]

ಕೊಂಡಾಡಿ: ಮಾ.30 ರಿಂದ ಎ.10ರ ವರೆಗೆ 48ನೇ ವರ್ಷದ ಅಖಂಡ ಏಕಾಹ ಭಜನಾ ಮಂಗಲೋತ್ಸವ

ಹಿರಿಯಡಕ: ಕೊಂಡಾಡಿ ಶ್ರೀರಾಮ ಭಜನಾ ಮಂಡಳಿ ಇದರ 48 ನೇ ವರ್ಷದ ಅಖಂಡ ಏಕಾಹ ಭಜನಾ ಮಂಗಲೋತ್ಸವ ಕಾರ್ಯಕ್ರಮವು ಮಾ.30 ರಿಂದ ಎ.10 ರ ವರೆಗೆ ಭಜನೆ ಕಟ್ಟೆಯ ಶ್ರೀ ಅಶ್ವಥನಾರಾಯಣ ಸನ್ನಿಧಿಯಲ್ಲಿ ನಡೆಯಲಿದೆ. ಮಾ.30 ರಿಂದ ನಿತ್ಯ ಭಜನೆ ಪ್ರಾರಂಭವಾಗಲಿದ್ದು, ಏ.10 ಆದಿತ್ಯವಾರದಂದು ಸೂರ್ಯೋದಯದಿಂದ ಏಕಾಹ ಭಜನೆ ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, 12:30 ರಿಂದ ಅನ್ನಸಂತರ್ಪಣೆ ನಡೆಯಲಿದೆ. ಎ.11 ಸೋಮವಾರ, ಸೂರ್ಯೋದಯಕ್ಕೆ ಭಜನಾ ಮಂಗಲೋತ್ಸವ ನಡೆಯಲಿದ್ದು, ಸಂಜೆ 7 ಗಂಟೆಗೆ ಮರುಭಜನೆ ನಡೆದಿದೆ.

ಎ.1ರಿಂದ 15ರ ವರೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಇದರ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳು ಏಪ್ರಿಲ್‌ 1 ರ ಶುಕ್ರವಾರದಿಂದ 15 ರ ವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಜಿರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ನಾಡೋಜ ಡಾ| ಜಿ. ಶಂಕರ್‌ ಹೇಳಿದರು. ಗುರುವಾರ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ದ.ಕ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು 1957 ರಲ್ಲಿ […]

ಕಿನ್ನಿಮುಲ್ಕಿ ಶ್ರೀ ವೀರಭದ್ರ ದೇವಸ್ಥಾನದ ವಾರ್ಷಿಕ ಮಹೋತ್ಸವ ಸಂಪನ್ನ

ಉಡುಪಿ: ಕಿನ್ನಿಮುಲ್ಕಿ ಶ್ರೀ ವೀರಭದ್ರ ದೇವಸ್ಥಾನದ ವಾರ್ಷಿಕ ಮಹೋತ್ಸವವು ಸನ್ನಿಧಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವಾದಿರಾಜ ಭಟ್ ಉಪಸ್ಥಿತಿಯಲ್ಲಿ ಉತ್ಸವ ಜರಗಿತು. ಶ್ರೀ ದೇವರಿಗೆ ಕಲಶಾಭಿಷೇಕ, ಮಹಾ ರಂಗಪೂಜೆ ರಾತ್ರಿ ಶ್ರೀ ವೀರಭದ್ರ ದೇವರ ಪುಷ್ಪ ರಥೋತ್ಸವ, ಪದ್ಮಶಾಲಿ ತರುಣ ವೃಂದದ ಸದಸ್ಯರಿಂದ ತುಳಸಿ ಸಂಕೀರ್ತನೆ, ಧರ್ಮ ದೈವಗಳ ಆರಾಧನೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪದ್ಮಶಾಲಿ ತರುಣ ವೃಂದದ ಸದಸ್ಯರಿಂದ ಪಿರ ಬರುವೊಲಾ ತುಳು ನಾಟಕ […]

ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕುಂಭಾಭಿಷೇಕ ಮಾರ್ಚ್ 31ರಿಂದ ಏಪ್ರಿಲ್ 10ರ ವರೆಗೆ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ದೇವಳದ ವಠಾರದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಶ್ರೀದೇವಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಆಡಳಿತಾಧಿಕಾರಿ ಡಾ. ರೋಷನ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ. ಕೃಷ್ಣಮೂರ್ತಿ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸಂಜೀವ ಎ., ದೇವಸ್ಥಾನದ ಅರ್ಚಕ ಗುರುರಾಜ ಉಪಾಧ್ಯಾಯ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ನಾರಾಯಣ […]