ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ:ಅನುಗ್ರಹ ಸಂದೇಶ, ಸಮ್ಮಾನ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥ ಪೀಠಮ್ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಕಾರ್ಯಕ್ರಮಗಳ ಎರಡನೆಯ ದಿನದಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಸಮಾರಂಭದಲ್ಲಿ ಕಟೀಲು ದೇವಸ್ಥಾನದ ಅರ್ಚಕರಾದ ವಾಸುದೇವ ಅಸ್ರಣ್ಣ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಗುರ್ಮೆ ಸುರೇಶ ಶೆಟ್ಟಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿಟ್ಟೆ ವಿನಯ್ ಹೆಗ್ಡೆ, ಹಿಂದುಸ್ಥಾನಿ ಗಾಯಕರಾದ ಉಸ್ತಾದ್ ಫಿಯಾಜ್ ಖಾನ್, […]
ಶ್ರೀ ಕೃಷ್ಣ ಮಠ:ವಿದ್ಯಾರ್ಥಿಗಳಿಂದ ‘ದಾನಶೂರ ಶಿಬಿ’ ಯಕ್ಷಗಾನ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಿನೀ ಸಭಾ ಉಡುಪಿ, ಪರಮ ಪೂಜ್ಯ ಅಷ್ಠಮಠಾಧೀಶರಿಂದ ಸ್ಥಾಪಿತವಾದ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಂಸ್ಕೃತಮಹಾಪಾಠಶಾಲೆಯ 115 ನೇಯ ವಾರ್ಷಿಕೋತ್ಸವದ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ‘ದಾನಶೂರ ಶಿಬಿ’ ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.
ಶ್ರೀ ಕೃಷ್ಣ ಮಠ: ಸಂಸ್ಕೃತ ಮಹಾಪಾಠ ಶಾಲೆಯ ವಾರ್ಷಿಕೋತ್ಸವ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಭಾ ಉಡುಪಿ, ಪರಮ ಪೂಜ್ಯ ಅಷ್ಠಮಠಾಧೀಶರಿಂದ ಸ್ಥಾಪಿತವಾದ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಿನೀ ಸಂಸ್ಕೃತಮಹಾಪಾಠಶಾಲೆಯ 115 ನೇಯ ವಾರ್ಷಿಕೋತ್ಸವವು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯಿತು. ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಶ್ರೀರಾಘವೇಂದ್ರ ಸ್ವಾಮೀಜಿಯವರ 348 ನೇ ಆರಾಧನೆ :ವಿಶೇಷ ಪೂಜೆ

ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀರಾಘವೇಂದ್ರ ಸ್ವಾಮೀಜಿಯವರ 348 ನೇ ಆರಾಧನೆ ಪ್ರಯುಕ್ತ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮತ್ತು ಅದಮಾರು ಮಠದ ಕಿರಿಯ ಸ್ವಾಮೀಜಿಯವರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ ನೆಡೆಯಿತು.
ಶ್ರೀ ಕೃಷ್ಣ ಮಠ:ಶ್ರೀ ರಾಘವೇಂದ್ರ ಸ್ವಾಮಿ ರಾಯರ 348 ನೇ ಆರಾಧನೆ:ಪೂಜೆ

ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 348 ನೇ ಆರಾಧನೆ ಪ್ರಯುಕ್ತ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಹಲ್ಲಾದ ರಾಯರ ರಥೋತ್ಸವ ನಡೆಯಿತು. ಶ್ರೀ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪ್ರಹಲ್ಲಾದ ರಾಯರ ಉತ್ಸವ ಮೂರ್ತಿಗೆ ಪರ್ಯಾಯ ಶ್ರೀಪಾದರು ಮಂಗಳಾರತಿ ಮಾಡಿ ವಿಶೇಷ ಪೂಜೆ ನೆರವೇರಿಸಿದರು.