ಶ್ರೀಪುತ್ತಿಗೆ ಪರ್ಯಾಯದಲ್ಲಿ ವಿದುಷಿ ಶುಭಶ್ರೀ ಅಡಿಗರವರಿಂದ ವೀಣಾವಾದನ

ಉಡುಪಿ: ಉಡುಪಿ ಶ್ರೀಪುತ್ತಿಗೆ ವಿಶ್ವಗೀತಾ ಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ರವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು. ಪಕ್ಕವಾದ್ಯದಲ್ಲಿ ವಿದ್ವಾನ್  ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

ಉಡುಪಿ ಪರ್ಯಾಯೋತ್ಸವದಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಕಲ ಸಿದ್ಧತೆ..!

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊ೦ದಿಗೆ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಿ ಶ್ರೀ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಮೆರಗನ್ನು ಒದಗಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರಕಾಣಿಕೆ ಮೆರವಣಿಗೆಗೆ ಅದ್ಧೂರಿ ಚಾಲನೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹೊರಕಾಣಿಕೆ ಮೆರವಣಿಗೆಗೆ ಉಡುಪಿ ಸಂಸ್ಕೃತ ಕಾಲೇಜಿನ ಬಳಿ ಇಂದು ಚಾಲನೆ ನೀಡಲಾಯಿತು. ಮಠದ ದಿವಾನ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಹಾಗೂ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಅವರು ಸಾಂಪ್ರದಾಯಿಕ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಸಂಸ್ಕೃತಿ ಕಾಲೇಜಿನ ಬಳಿಯಿಂದ ಆರಂಭಗೊಂಡ ಮೆರವಣಿಗೆ ರಥಬೀದಿಯ ಮೂಲಕ ಪುತ್ತಿಗೆ ಮಠಕ್ಕೆ ಸಾಗಿಬಂತು. ತಟ್ಟಿರಾಯ, ನಾಸಿಕ್ ಬ್ಯಾಂಡ್, […]

ಉಡುಪಿ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಶ್ರೀಯವರ ಭವ್ಯ ಪುರಪ್ರವೇಶ, ಅದ್ದೂರಿಯ ಪೌರಸಮ್ಮಾನ ಸಮಾರಂಭ

ಉಡುಪಿ: ಶ್ರೀಕೃಷ್ಣ – ಮುಖ್ಯಪ್ರಾಣದೇವರಿಗೆ ಮುಂದಿನ ಎರಡು ವರುಷಗಳ ಕಾಲ ತಮ್ಮ ಕರಕಮಲಗಳಿಂದ ಪೂಜೆಯನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥಶ್ರೀಪಾದರು ತಮ್ಮ ಶಿಷ್ಯರಾದ ಶ್ರೀಸುಶ್ರೀಂದ್ರ ತೀರ್ಥಪಾದರೊಂದಿಗೆ ಎಲ್ಲಾ ತೀರ್ಥಕ್ಷೇತ್ರ ಸಂದರ್ಶನ ಮುಗಿಸಿ ಇಂದು (ಸೋಮವಾರದಂದು) ಸಾಯಂಕಾಲ ಉಡುಪಿ ನಗರಕ್ಕೆ ಆಗಮಿಸುವುದರೊಂದಿಗೆ ಪುರಪ್ರವೇಶವನ್ನು ಗೈದರು. ಉಡುಪಿಗೆ ಆಗಮಿಸಿದ ಯತಿದ್ವಯರನ್ನು ಜಿಲ್ಲಾಧಿಕಾರಿಗಳು, ಪರ್ಯಾಯ ಸ್ವಾಗತ ಸಮಿತಿಯವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಚಿವರು, ಜನಪ್ರತಿನಿಧಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸೇರಿದ ಗಣ್ಯರು, ಅಭಿಮಾನಿಗಳು ಹೂವಿನಹಾರ-ಫಲಪುಷ್ಪವನ್ನು ನೀಡಿ ಗೌರವಿಸಿದರು. ಜೋಡುಕಟ್ಟೆಯಲ್ಲಿ […]

ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ ದಿನ ಸಿದ್ದವಾಗಲಿದೆ 7000kg “ರಾಮ ಹಲ್ವಾ”

ಅಯೋಧ್ಯೆ: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ದೇಶವೇ ಈ ಹಬ್ಬವನ್ನು ಸಂಭ್ರಮಪಡುವ ದಿನವಾಗಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸಲು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗರೊಬ್ಬರು ವಿಶೇಷ ‘ರಾಮ ಹಲ್ವಾ’ ತಯಾರಿಸಲಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ, ನಾಗ್ಪುರ ಮೂಲದ ವಿಷ್ಣು ಮನೋಹರ್‌ ಅವರು ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ. ಸುಮಾರು 7 ಸಾವಿರ ಕೆ.ಜಿ. ರಾಮ ಹಲ್ವಾಗೆ 12 ಸಾವಿರ ಲೀಟರ್‌ ನೀರಿನ ಸಾಮರ್ಥ್ಯದ ಬೃಹತ್‌ ಕಡಾಯಿಯೊಂದನ್ನು ಕೂಡ […]