ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಸಂಸ್ಕೃತೋತ್ಸವ

ಉಡುಪಿ: ಶ್ರೀಮನ್ಮಧ್ವ ಸಿದ್ಧಾಂತ ಪ್ರಭೋಧಕ ಸಂಸ್ಕೃತ -ಸ್ನಾತಕ – ಸ್ನಾತಕೋತ್ತರ ಅಧ್ಯಯನ ಕೇಂದ್ರ,ಉಡುಪಿ ಇದರ ವತಿಯಿಂದ, ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಸಂಸ್ಕೃತೋತ್ಸವ ಸಮಾರಂಭ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಸಂಸ್ಕೃತ ಭಾಷೆಯ ಮಹತ್ಮುಂವದ ಕುರಿತು ಮಾತನಾಡಿದರು. ಕೇಂದ್ರ ಮಂತ್ರಿಗಳಾದ ಮಾನ್ಸುಖ್ ಎಲ್.ಮಾಂಡವಿ ಅವರು ಮಾತನಾಡಿ, ಸಂಸ್ಕೃತವು ದೇವಭಾಷೆ. ಅದು ಎಲ್ಲ ಸಂಶೋಧನೆಗೂ ಮೂಲವಾಗಿದೆ, ಆದ್ದರಿಂದ ಈ ಸಭೆಯಲ್ಲಿ ಭಾಗವಹಿಸಿದ್ದು ಸಂತೋಷವಾಗಿದೆ ಎಂದರು. ಅದಮಾರು ಕಿರಿಯ ಯತಿಗಳಾದ […]
ಶ್ರೀ ಕೃಷ್ಣ ಮಠದಲ್ಲಿ ಹೊಸ್ತಿಲು ಪೂಜೆ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಕರ್ಕಾಟಕ ಹುಣ್ಣಿಮೆ (ಆಟಿ ಹುಣ್ಣಿಮೆ) ಪ್ರಯುಕ್ತ ಮುತೈದೆ ನಾರಿಯರು ಹೊಸ್ತಿಲು ಪೂಜೆ ಮಾಡಿ ನಮಸ್ಕಾರ ಮಾಡಿದರು.
ರಿಕ್ಷಾ ಮಾಲಕರ ಮತ್ತು ಚಾಲಕರ ವತಿಯಿಂದ ಸ್ವಾತಂತ್ರ್ಯೋತ್ಸವ:

ಉಡುಪಿ: ರಥಬೀದಿಯ ರಿಕ್ಷಾ ಮಾಲಕರ ಮತ್ತು ಚಾಲಕರ ವತಿಯಿಂದ ನಡೆದ 73 ನೇ ಸ್ವಾತಂತ್ರ್ಯೋತ್ಸವದಲ್ಲಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
ಶ್ರೀ ಕೃಷ್ಣ ಮಠ: ‘ನರಸಿಂಹ ವೈಭವ’ ಹರಿಕಥೆ

ಕಾರ್ಕಳ: ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಹರಿಕಥಾ ಪರಿಷತ್ತು ಮಂಗಳೂರು,ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಬೆಂಗಳೂರು ಮತ್ತು ಶ್ರೀಹಂಡೆದಾಸ ಪ್ರತಿಷ್ಟಾನ ಕಾರ್ಕಳ ಇವರ ಸಂಯುಕ್ತ ಸಹಯೋಗದೊಂದಿಗೆ ಬೆಂಗಳೂರಿನ ಕು.ಶಾರ್ವರೀ ಸೋಮಯಾಜಿ ಇವರಿಂದ ‘ನರಸಿಂಹ ವೈಭವ’ ಕಥಾಭಾಗದ ಹರಿಕಥೆ ನಡೆಯಿತು.
ಸಮಸ್ತ ನಾಗನ ಭಕ್ತರಿಗೆ “ನಾಗರ ಪಂಚಮಿ”ಯ ಶುಭಾಶಯಗಳು

ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆಯುವಂತಹ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡ ಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗಪ್ಪನಿಗೆ ಹಾಲು ಎರೆದು ಆಚರಿಸುವ ಹಬ್ಬವಾಗಿದೆ. ಈ ಹಬ್ಬಕ್ಕೆ ಗರುಡ ಪಂಚಮಿ ಎಂಬ ಹೆಸರು ಕೂಡ ಇದೆ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗಪ್ಪನಿಗೆ ಹಲವು ವಿಧದ ಉಂಡೆಗಳು, ಕರಿ […]