ಉಡುಪಿXPRESS ಪರ್ಯಾಯ ವಿಶೇಷ ಸಂಚಿಕೆ “ಪರ್ಯಾಯ ಪುಣ್ಯೋತ್ಸವ” ಬಿಡುಗಡೆ

ಉಡುಪಿ: ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ಉಡುಪಿXPRESS ನ ವಿಶೇಷ ಸಂಚಿಕೆ “ಪರ್ಯಾಯ ಪುಣ್ಯೋತ್ಸವ” ವನ್ನು ಬುಧವಾರ ಕೃಷ್ಣಮಠದ ಕನಕದಾಸ ಮಂಟಪದಲ್ಲಿ ಬಿಡುಗಡೆಗೊಳಿಸಲಾಯಿತು. ಪರ್ಯಾಯ ಪೀಠವೇರಲಿರುವ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಸಂಚಿಕೆ ಅನಾವರಣಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪರ್ಯಾಯ ಉತ್ಸವ ಸಮಿತಿ, ಹೊರೆಕಾಣಿಕೆಯ ಸಮಿತಿಯ ಸದಸ್ಯರು, ಉಡುಪಿXPRESS ಮಾರುಕಟ್ಟೆ ವಿಭಾಗದ ಸ್ವರೂಪ್ ಶ್ರೀಯಾನ್, ಅಶೋಕ್, ನಿತಿನ್ ಉಪಸ್ಥಿತರಿದ್ದರು.

ಕಾರ್ಕಳ: ಜ.21 ರಿಂದ 26 ರ ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2024 ಜನವರಿ 21, 22, 23, 24, 25 ಹಾಗೂ 26 ರಂದು ಜರಗಲಿರುವುದು. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ದತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ದರಾಗಿದ್ದೇವೆ ಎಂದು ಕ್ಷೇತ್ರದ ನಿರ್ದೇಶಕರಾದ ವಂ| ಆಲ್ಬನ್ ಡಿಸೋಜಾ ಹೇಳಿದರು. ಅವರು ಬಸಿಲಿಕಾದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿನಾಂಕ 26-01-2024 ರಂದು ಶುಕ್ರವಾರ ಅಸ್ವಸ್ಥರಿಗಾಗಿ ಹಾಗೂ ಮಕ್ಕಳಿಗಾಗಿ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ಇರುವುದು. ಅಸ್ವಸ್ಥರು […]

ಐತಿಹಾಸಿಕ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ: ಮುಷ್ಟಿ ಕಾಣಿಕೆ ಸಮರ್ಪಣೆ

ಉಡುಪಿ: ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆಯಾದಿ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ಜ.22 ರಿಂದ ಪ್ರಾರಂಭವಾಗಲಿದೆ. ಜ.22 ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಭದ್ರದೀಪ ಸಮರ್ಪಣೆ, ಮುಷ್ಟಿ ಕಾಣಿಕೆ, ಮೃತ್ಯುಂಜಯ ಹೋಮ ಹಾಗು ಇತರ ಹೋಮಗಳು […]

ಶ್ರೀಪುತ್ತಿಗೆ ಪರ್ಯಾಯದಲ್ಲಿ ವಿದುಷಿ ಶುಭಶ್ರೀ ಅಡಿಗರವರಿಂದ ವೀಣಾವಾದನ

ಉಡುಪಿ: ಉಡುಪಿ ಶ್ರೀಪುತ್ತಿಗೆ ವಿಶ್ವಗೀತಾ ಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ರವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು. ಪಕ್ಕವಾದ್ಯದಲ್ಲಿ ವಿದ್ವಾನ್  ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

ಉಡುಪಿ ಪರ್ಯಾಯೋತ್ಸವದಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಕಲ ಸಿದ್ಧತೆ..!

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊ೦ದಿಗೆ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಿ ಶ್ರೀ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಮೆರಗನ್ನು ಒದಗಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.