ಪ್ರಕೃತಿಗೆ ಪೂರಕವಾದ ಪರಿಸರ ಸ್ನೇಹಿ ಪ್ರವಾಸ ಕೈಗೊಂಡು ಮುಂದಿನ ಪೀಳಿಗೆಗೆ ಸುಂದರ- ಸ್ವಸ್ಥ ಜಗತ್ತಿನ ಕೊಡುಗೆ ನೀಡಿ
ಲೇಖನ :ಶರೋನ್ ಶೆಟ್ಟಿ ಚಿತ್ರ : ಗುರು ಕಾಪು ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) 1979 ರಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರಾರಂಭಿಸಿತು. ಆದರೆ ಇದನ್ನು ಅಧಿಕೃತವಾಗಿ 1980 ರಲ್ಲಿ ಪ್ರಾರಂಭಿಸಲಾಯಿತು. ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ. 1997 ರ ಬಳಿಕ UNWTO ಪ್ರತಿ ವರ್ಷ ವಿವಿಧ ಆತಿಥೇಯ ದೇಶಗಳಲ್ಲಿ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ. ಪ್ರಪಂಚದ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. […]
ಚಿಮ್ಮುತ್ತಿದೆ ಗೋಕಾಕ್ ಜಲಪಾತ; ಹರಿದು ಬರುತ್ತಿರುವ ಪ್ರವಾಸಿಗರು
ಬೆಳಗಾವಿ: ಅಮೆರಿಕ ದೇಶದ ಪ್ರಸಿದ್ಧ ನಯಾಗರ ಜಲಪಾತವನ್ನು ಹೋಲುವುದರಿಂದ ಭಾರತದ ನಯಾಗಾರವೆಂದೇ ಕರೆಯಲ್ಪಡುವ ನಯನ ಮನೋಹರ ಗೋಕಾಕ್ ಫಾಲ್ಸ್ ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಶ್ಚಿಮ ಘಟ್ಟದಲ್ಲಿ ಅಕ್ಷರಶಃ ವರುಣರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಘಟಪ್ರಭಾ, ಹಿರಣ್ಯಕೇಶಿ ನದಿಗಳಿಗೆ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಅಪಾರ ಪ್ರಮಾಣದ ನೀರು ಗೋಕಾಕ್ ಫಾಲ್ಸ್ನತ್ತ ಹರಿದುಬರುತ್ತಿದೆ. 170 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತ ತನ್ನ ರುದ್ರ ರಮಣೀಯ ದೃಶ್ಯವನ್ನು ಪ್ರದರ್ಶಿಸುತ್ತಿದೆ.ಆಕರ್ಷಕ ದೃಶ್ಯ ಕಂಡು ಜನ ಪುಳಕಗೊಳ್ಳುತ್ತಿದ್ದಾರೆ. ಹಾಸುಗಲ್ಲುಗಳ […]
ಲಿಂಗನಮಕ್ಕಿಗೆ ಒಂದೇ ದಿನ ಮೂರುವರೆ ಅಡಿ ನೀರು, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ
ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದ ಮಾಣಿ ಜಲಾಶಯ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ ಮಳೆಯಾಗಿದೆ.ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ ತಲುಪಿದ್ದು, ಇನ್ನೊಂದು ಅಡಿಯಷ್ಟು ನೀರು ಏರಿಕೆಯಾದರೆ ಮಂಟಪ ಸಂಪೂರ್ಣ ಮುಳುಗಡೆಯಾಗಲಿದೆ. ಹೀಗಾಗಿ ಮಂಟಪದ ಬಳಿ ಸಾರ್ವಜನಿಕರು ತಂಡೋಪತಂಡವಾಗಿ ಬಂದು ನದಿಯ ವಿಹಂಗಮ […]
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಎಲ್ಲಾ ಶಾಲಾ-ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ
ಉಡುಪಿ: ಏತನ್ಮಧ್ಯೆ, ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು IMD ಮುನ್ಸೂಚನೆ ನೀಡಿದೆ. ಜುಲೈ 25ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜುಗಳಿಗೆ ಜುಲೈ 24 ಸೋಮವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಸಮುದ್ರದ ಅಲೆಗಳು 3.4-4 ಮೀಟರ್ಗೆ ತಲುಪುವ ಬಗ್ಗೆಯೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 163.9 ಮಿ.ಮೀ ಮಳೆಯಾಗಿದೆ. ಜುಲೈ 23 ರಂದು ಹೊರಡಿಸಲಾದ IMD ಬೆಂಗಳೂರು ಬುಲೆಟಿನ್ […]
ಮಹಾರಾಷ್ಟ್ರದಲ್ಲಿ ಮಳೆ ಅಬ್ಬರದ ಹಿನ್ನೆಲೆ ಚಿಕ್ಕೋಡಿಯ ಹಲವು ಸೇತುವೆಗಳು ಜಲಾವೃತ
ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಳವಾಗಿದೆ. ವಿನಯಕುಮಾರ ರಜಪೂತ ಎಂಬುವವರಿಗೆ ಸೇರಿದ ಕಾರಿನ ಮೇಲೆ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಸಾವಿನ ದವಡೆಯಿಂದ ಅವರು ಪಾರಾಗಿದ್ದಾರೆ. ಜಿಲ್ಲೆಯಾದ್ಯಂತ ಈಗಾಗಲೇ 83 ಸೇತುವೆಗಳ […]