ರೈತರ ಮೊಗದಲ್ಲಿ ಸಂತಸ : ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

ಮಂಡ್ಯ: 2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳ ಹರಿವು ಆಗಿದ್ದು. ಒಂದೇ ದಿನ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಳವಾಗಿರುವುದರಿಂದ ರಾಜ್ಯ ಮತ್ತು ತಮಿಳುನಾಡಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದ್ದು, ಈಗ ಅದು 82 ಅಡಿಗೆ ತಲುಪಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾದ ಹಿನ್ನೆಲೆ […]
ಉಡುಪಿ ಜಿಲ್ಲೆಗೆ ಜುಲೈ 7 ರವರೆಗೂ ಮುಂದುವರಿದ ರಜೆ

ಉಡುಪಿ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು , ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು , ಮಳೆ ಮುಂದುವರೆಯುವ ಮುನ್ಸೂಚನೆಯಿರುವುದರಿಂದ ಮುಂಜಾಗರ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:07.07.20123 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ, ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ […]
ಮಂಡ್ಯದ ಮಳವಳ್ಳಿ ತಾಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಪಡುಬಿದ್ರಿಯ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭೇಟಿ

ಪಡುಬಿದ್ರಿ :ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟಕೊಪ್ಪಲು ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ನಿಯೋಗ ಇಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಮಳವಳ್ಳಿ ತಾಲೂಕಿನ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಚ್ ಬಿ ಬಸವೇಶ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ವ್ಯವಸಾಯಿಕ ಸೊಸೈಟಿಗಳು ಉತ್ತಮ ಠೇವಣಾತಿಯ ಹೆಚ್ಚಳದಿಂದ ಲಾಭಾಂಶದಿಂದ ಕೂಡಿವೆ. ನಮ್ಮ […]
ರಾಜ್ಯದಲ್ಲಿ ಮುಂಗಾರಿನ ಪ್ರಭಾವ . ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾರ್ಭಟ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ.ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಬೆಂಗಳೂರು ನಗರ ಸೇರಿದಂತೆ ಕೆಲವೆಡೆ ಜಡಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತವರಣವಿತ್ತು. ನಂತರ ಜೋರು ಮಳೆ ಆರಂಭವಾಗಿದೆ. ಅದೇ ರೀತಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚನ್ನಪಟ್ಟಣದ ಮತ್ತಿತರ ಕಡೆ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು, ಕೋಲಾರ, ಶ್ರೀನಿವಾಸಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕಡೆ ರಾತ್ರಿಯಿಂದಲೇ ಜಿಟಿ […]
ರಾಜ್ಯದ ಕರಾವಳಿ ಭಾಗದಲ್ಲೂ ‘ಹೈ ವೇವ್ ಅಲರ್ಟ್’ ಮುಂದಿನ ಐದು ದಿನ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮಂಗಳೂರು: ಬಿಪರ್‌ಜೋಯ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು INCOIS ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ‘ಹೈ ವೇವ್ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಬೆನ್ನಲ್ಲೇ ಕರ್ನಾಟಕದ ಕರಾವಳಿ ಭಾಗದಲ್ಲಿ ‘ಹೈ ವೇವ್ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 42 ಕಿಲೋ ಮೀಟರ್ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ ‘ಬಿಪರ್ ಜಾಯ್’ ಚಂಡಮಾರುತವು […]