ಕಣ್ಣಿನ ಆರೋಗ್ಯಕ್ಕೆ ಯಾವ ವಿಟಮಿನ್ ಅಗತ್ಯ? ಏನಿದರ ಉಪಯೋಗ?
ವಿಟಮಿನ್ ಬಿ ಮತ್ತು ಇತರ ಪೋಷಕಾಂಶಗಳು ಕಣ್ಣುಗಳಿಗೆ ಒಳ್ಳೆಯದು. ನಿರ್ದಿಷ್ಟ ವಿಟಮಿನ್‌ಗಳ ಕೊರತೆಯು ಕಣ್ಣಿನ ಪೊರೆ, ಗ್ಲುಕೋಮಾ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್‌ನಂತಹ ಕೆಲವು ಕಣ್ಣಿನ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸಬಹುದು. ಕಣ್ಣಿನ ಆರೋಗ್ಯಕ್ಕೆ ವಿಟಮಿನ್ಗಳು ಅತ್ಯಗತ್ಯ. ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಟಮಿನ್ ಎ, ಸಿ ಮತ್ತು ಇ ಅಂಶಗಳಿರುವ ಆಹಾರವನ್ನು ಸೇವಿಸಬೇಕು. ವಿಟಮಿನ್ ಬಿ ಮತ್ತು ಇತರ ಪೋಷಕಾಂಶಗಳು ಕಣ್ಣುಗಳಿಗೆ ಒಳ್ಳೆಯದು. ನಿರ್ದಿಷ್ಟ ವಿಟಮಿನ್ ಗಳ ಕೊರತೆಯು ಕಣ್ಣಿನ ಪೊರೆ, ಗ್ಲುಕೋಮಾ ಮತ್ತು ವಯಸ್ಸಿಗೆ […]
ದೈಹಿಕ ಮತ್ತು ದೇಹದಾಡ್ಯತೆ ಪರೀಕ್ಷೆ ಮುಂದೂಡಿಕೆ
ಉಡುಪಿ: ಜಿಲ್ಲಾ ಪೊಲೀಸ್ ಘಟಕದ 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿ.ಎ.ಆರ್/ ಡಿ.ಎ.ಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ -3064 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಜುಲೈ 10 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗಧಿಪಡಿಸಲಾಗಿದ್ದ ದೈಹಿಕ ಮತ್ತು ದೇಹದಾಢ್ಯತೆ ಪರೀಕ್ಷೆಯನ್ನು ಮಳೆ ಹಿನ್ನೆಲೆ, ಮುಂದೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯೋಗ ತರಬೇತಿ
ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವಿಭಾಗದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಬೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ ಆಸನಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಮಧ್ಯಾಹ್ನದ […]
ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ.
ಮಂಗಳೂರು: ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜನರಲ್ ಮ್ಯಾನೇಜರ್ ಮತ್ತು ವಲಯ ಮುಖ್ಯಸ್ಥರಾದ ಶ್ರೀ ರಾಜೇಶ್ ಖನ್ನಾ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಯೋಗದ ಮಹತ್ವದ ಕುರಿತು ಮಾತನಾಡಿದರು. ಶ್ರೀಮತಿ ದೇವಿಕಾ ಪುರುಷೋತ್ತಮ್, ರಾಷ್ಟ್ರೀಯ ಮಟ್ಟದ ಯೋಗ ಶಿಕ್ಷಕಿ ಮತ್ತು ರೆಫ್ರಿ ಇವರು ಯೋಗ ಅಧಿವೇಶನವನ್ನು ಮುನ್ನಡೆಸಿದರು. ಶ್ರೀ ಅಶ್ವಿನಿ ಕುಮಾರ್, ಡಿಜಿಎಂ-ವ್ಯವಹಾರ ಅಭಿವೃದ್ಧಿ, ಶ್ರೀ ಸನಿಲ್ ಕುಮಾರ್, ಆರ್‌ಎಂ-ಮಂಗಳೂರು ನಗರ, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ […]
ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ವಿಶ್ವ ಯೋಗ ದಿನಾಚರಣೆ
ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ಶುಕ್ರವಾರ ವಿಶ್ವ ಯೋಗ ದಿನಾಚರಣೆಯನ್ನು ಜಗನ್ನಾಥ ಸಭಾಭವನದಲ್ಲಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಲಿಸ್ ಯೋಗ ತರಬೇತಿ ಕೇಂದ್ರದ ತರಬೇತುದಾರರಾದ ಶ್ರೀಮತಿ ಸುಮನ ಶ್ರೀನಿವಾಸ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಯೋಗದಿಂದ ಅರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರತಿಮ ವಿ. ಎಸ್ ಇವರು ವಿವಿಧ ಬಗೆಯ ಯೋಗ ಪ್ರತ್ಯಕ್ಷತೆಯನ್ನು ನೀಡಿ […]